ಶುಕ್ರದೆಸೆ ನ್ಯೂಸ್:-
ನೂತನ ಕಛೇರಿಯಲ್ಲಿ ಬುದ್ದ ಬಸವ ಅಂಬೇಡ್ಕರ್ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ನಂತರ ಪಟ್ಟಣದ ಮುಖ್ಯರಸ್ತೆಯಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ತೆರಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಪುತ್ಥಳಿಗೆ ನೂತನ ಶಾಸಕರು .ಹಾಗೂ ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆಪಿ ಪಾಲಯ್ಯ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಮಾಡಿದರು.ಈ ವೇಳೆ ಅಂಬೇಡ್ಕರ್ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ನೀಲಿ ಟವಲ್ ಹಾಕಿಕೊಂಡು ಶಾಸಕರುನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಅಸಗೋಡು ಜಯಸಿಂಹ. ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆಪಿ ಪಾಲಯ್ಯ. ಕಾಂಗ್ರೆಸ್ ಉಸ್ತುವಾರಿ ಕಲ್ಲೇಶ್ ರಾಜ್ ಪಟೇಲ್.ಬ್ಲಾಕ್ ಅಧ್ಯಕ್ಷ ಷಂಷೀರ್ ಆಹಮದ್. ಅರಸಿಕೆರೆ ಬ್ಲಾಕ್ ಅಧ್ಯಕ್ಷ ಮಂಜಣ್ಣ.ಮಾಜಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪಿ ಎಸ್ ಸುರೇಶ್ ಗೌಡ್ರು.ವಾಲಿಬಾಲ್ ತಿಮ್ಮರೆಡ್ಡಿ.ಮುಖಂಡ ತಿಪ್ಪೇಸ್ವಾಮಿ. ದಲಿತ ಮುಖಂಡ ಜಿ ಎಚ್ ಶಂಭುಲಿಂಗಪ್ಪ. ಮುಖಂಡ ಪಲ್ಲಾಗಟ್ಟೆ ಶೇಖರಪ್ಪ.ಕಾಂಗ್ರೆಸ್ ಕಾರ್ಮಿಕ ಸಂಘದ ಮುಖಂಡ ರುದ್ರೇಶ್.ಸೇರಿದಂತೆ ಆಪಾರ ಕಾರ್ಯಕರ್ತರು ಹಾಜರಿದ್ದರು.