ಅಧಿಕಾರ ಕಳೆದುಕೊಂಡ ಬಿಜೆಪಿಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ: ದಿನೇಶ್‌ ಗುಂಡೂರಾವ್‌
ಶುಕ್ರದೆಸೆ ‌ನ್ಯೂಸ್:-

June 6, 2023
ಕರ್ನಾಟಕ ರಾಜಕೀಯ ರಾಜ್ಯ
‘ಬೊಮ್ಮಾಯಿ ಅವರೇ ನೀವು ಕಾನೂನು ಉಲ್ಲಂಘಿಸುವವರ ಪರವೇ?’
‘ನಿಮ್ಮ ಮೋದಿ ನಡೆ ನಿಮಗೆ ತುರ್ತುಪರಿಸ್ಥಿತಿ ಎಂದು ಅನ್ನಿಸುತ್ತಿಲ್ಲವೇ?’
ಅಧಿಕಾರ ಕಳೆದುಕೊಂಡಿರುವ ಬಿಜೆಪಿಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ವಾಗ್ದಾಳಿ ನಡೆಸಿದ್ದಾರೆ.

“ಕಾಂಗ್ರೆಸ್‌ಗೆ ಎರಡೇ ದಿನದಲ್ಲಿ ಅಧಿಕಾರದ ಅಮಲು ಹೆಚ್ಚಾಗಿದೆ. ಅತೀ ಶೀಘ್ರದಲ್ಲಿ ರಾಜ್ಯದೊಳಗೆ ತುರ್ತು ಪರಿಸ್ಥಿತಿ ತಲೆದೋರಬಹುದು” ಎಂದು ಬೆಳಗಾವಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ನಡೆಯನ್ನು ಟೀಕಿಸಿದ್ದರು.

ಬೊಮ್ಮಾಯಿ ಮಾತಿಗೆ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ಗುಂಡೂರಾವ್‌, “ಬೊಮ್ಮಾಯಿಯವರೇ ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ತುರ್ತು ಪರಿಸ್ಥಿತಿಯ ಲಕ್ಷಣವಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಜವಾಬ್ಧಾರಿಯುತ ಸರ್ಕಾರದ ಕರ್ತವ್ಯ. ನಮ್ಮ ಸರ್ಕಾರ ಮಾಡುತ್ತಿರುವುದು ಅದನ್ನೆ” ಎಂದು ತಿರುಗೇಟು ನೀಡಿದ್ದಾರೆ.

“ಬೊಮ್ಮಾಯಿಯವರೇ ಒಂದು ಜವಾಬ್ಧಾರಿಯುತ ಸರ್ಕಾರವಾಗಿ ಸಮಾಜದ ಸ್ವಾಸ್ಥ್ಯ ಕಾಪಾಡುವುದು ನಮ್ಮ ಕರ್ತವ್ಯ. ಕಾನೂನು ಕೈಗೆತ್ತಿಕೊಳ್ಳುವವರ, ಸಂವಿಧಾನ ಬಾಹಿರ ಕೃತ್ಯ ನಡೆಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ನಿಮ್ಮ ಪ್ರಕಾರ ತುರ್ತು ಪರಿಸ್ಥಿತಿಯಾದರೆ ನಿಮ್ಮ ವಿವೇಚನಾ ಶಕ್ತಿಯ ಬಗ್ಗೆ ಅನುಕಂಪವಿದೆ. ನೀವು ಕಾನೂನು ಉಲ್ಲಂಘಿಸುವವರ ಪರವೇ?” ಎಂದು ಕುಟುಕಿದ್ದಾರೆ.

“ಬೊಮ್ಮಾಯಿಯವರೇ, ಯಾವ ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುತ್ತಿದ್ದೀರಿ? ತನ್ನ ರಾಜಕೀಯ ವಿರೋಧಿಗಳನ್ನ ಮಟ್ಟ ಹಾಕಲು ತನಿಖಾ ಏಜೇನ್ಸಿಗಳನ್ನು, ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ವಾಕ್ ಸ್ವಾತಂತ್ರ್ಯ ಹತ್ತಿಕ್ಕುತ್ತಿರುವ ನಿಮ್ಮ ಮೋದಿ ಸರ್ಕಾರದ ನಡೆ ನಿಮಗೆ ತುರ್ತುಪರಿಸ್ಥಿತಿ ಎಂದು ಅನ್ನಿಸುತ್ತಿಲ್ಲವೇ?ʼ” ಎಂದು ವ್ಯಂಗ್ಯವಾಡಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!