June 12, 2023

ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ…


ಶುಕ್ರದೆಸೆ ನ್ಯೂಸ್:-, ಬೆಂಗಳೂರು:


ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಕೆಇಬಿ ಇಂಜಿನಿಯರ್ ಗಳು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಚಾಮರಾಜನಗರ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರು ಶಾಲಾ ಕಟ್ಟಡ ಕಾಮಗಾರಿಗೆ ಗುತ್ತಿಗೆದಾರರಿಗೆ ಬಿಲ್ ಮಂಜೂರು ಮಾಡಿಕೊಡಲು 30 ಸಾವಿರ ರೂ.ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಚಾಮರಾಜನಗರದ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಮಧುಸೂದನ್ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೆಂಪರಾಜು ಅವರು ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಚಾಮರಾಜನಗರ ತಾಲೂಕಿನ ಬಾಗಳಿ ಗ್ರಾಮದ ಸರ್ಕಾರಿ ಶಾಲೆಯ ಕಟ್ಟಡದ ಕಾಮಗಾರಿಯನ್ನು ಸೂರ್ಯ ಬಿಲ್ಡರ್‌ನ ಸುನೀಲ್‌ಕುಮಾರ್ ಎಂಬ ಗುತ್ತಿಗೆದಾರರು ನಿರ್ವಹಿಸಿದ್ದರು. ಈ ಕಾಮಗಾರಿಯ ಬಿಲ್ ಹಣವನ್ನು ಮಂಜೂರು ಮಾಡಿಕೊಡಲು ಇಬ್ಬರೂ ಅಧಿಕಾರಿಗಳು ಸುನೀಲ್ ಕುಮಾರ್ ಅವರಿಂದ 30 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಶುಕ್ರವಾರ ಸಂಜೆ ಲಂಚ ಸ್ವೀಕರಿಸುವಾಗ ಇಬ್ಬರನ್ನೂ ಕುದೇರು ಬಳಿ ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!