ಶುಕ್ರದೆಸೆ ನ್ಯೂಸ್:-

ಗುಡೇಕೋಟೆಯಲ್ಲಿ ಪರಿಸರ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮ

ಗುಡೇಕೋಟೆ:- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗುಡೇಕೋಟೆ ವಲಯ ಕಛೇರಿಯ ಆವರಣದಲ್ಲಿ ಬುಧವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮೊದಲಿಗೆ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು.

ಬಳಿಕ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೂಡ್ಲಿಗಿ ತಾಲೂಕು ಕೃಷಿ ಮೇಲ್ವಿಚಾರಕರಾದ ಮಹಾಲಿಂಗಯ್ಯ ರವರು ನಡೆದಾಡುವ ದೇವರು ಮಾತನಾಡುವ ಮಂಜುನಾಥ ಎಂದೆ ಪ್ರಸಿದ್ಧಿ ಪಡೆದಿರುವ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗಡೆಯವರ ಮಾರ್ಗದರ್ಶನದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕರ್ನಾಟಕ ರಾಜ್ಯದ್ಯಂತ ಹಮ್ಮಿಕೊಂಡಿರುವ ಈ ಒಂದು ಪರಿಸರ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ರೈತರ ಸಮ್ಮುಖದಲ್ಲಿ ಸದಸ್ಯರಿಗೆ ಸಸಿಗಳನ್ನು ವಿತರಿಸಿ ಅವುಗಳನ್ನು ನೆಟ್ಟು ಪೋಷಿಸಲು ಮಾಹಿತಿ ನೀಡಲಾಯಿತು. ಪರಿಸರದಿಂದ ಆಗುವ ಅನುಕೂಲತೆಗಳ ಬಗ್ಗೆ ಸದಸ್ಯರಿಗೆ ಮನವರಿಕೆ ಮಾಡಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಪಂ ಸದಸ್ಯ ಎನ್ ಕೃಷ್ಣ ರವರು ವಹಿಸಿ ಕಾರ್ಯಕ್ರಮದ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಕೂಡ್ಲಿಗಿ ತಾಲೂಕು ಯೋಜನಾಧಿಕಾರಿ ಸಂತೋಷ್ ಕುಮಾರ್.ಕೃಷಿ ಮೇಲ್ವಿಚಾರಕರಾದ ಮಹಾಲಿಂಗಯ್ಯ.ಗ್ರಾಪಂ ಸದಸ್ಯರಾದ ಎನ್ ಕೃಷ್ಣ,ಕೆ ಮುರಳಿರಾಜ್, ತಳವಾರ್ ಪ್ರಹ್ಲಾದ್, ರೈತ ಸಂಪರ್ಕ ಕೇಂದ್ರದ ಅಧಿಕಾರಿ ರಾಜಶೇಖರ, ಗುಡೇಕೋಟೆ ವಲಯ ಮೇಲ್ವಿಚಾರಕರಾದ ಜ್ಯೋತಿಗುಡಿ, ಉಮೇಶ್,ಜ್ಞಾನವಿಕಾಸ ಕೇಂದ್ರದ ಮೇಲ್ವಿಚಾರಕರಾದ ಸಕ್ಕುಬಾಯಿ ,ಸೇವಾಪ್ರತಿನಿಧಿ ಕವಿತಾ.ಮಹಾಲಕ್ಷ್ಮೀ.ನೇತ್ರವತಿ.ಲಕ್ಷ್ಮೀ. ವೀಣಾ.ಸುನೀಲ್.ಗಂಧರ್ವ.ಸೇರಿದಂತೆ ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You missed

error: Content is protected !!