ಬೆಂಗಳೂರು ಮಾ.2: ರಾಜ್ಯ ಸರ್ಕಾರಿ ನೌಕರರಿಗೆ ಶೇ 17% ರಷ್ಟು ಮದ್ಯಂತರ ವೇತನ ಹೆಚ್ಚಳ ಮಾಡಿ ಆದೇಶ ಮಾಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ರಾಜ್ಯ ಸರ್ಕಾರಿ ನೌಕರರ ಸಂಘದವರು ಸಿಎಂ ಆರ್ ಟಿ ನಗರದ ನಿವಾಸದ ಬಳಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ನೌಕರರ ಸಂಘದ ಮಾಜಿ ಅಧ್ಯಕ್ಷ ಬೈರಪ್ಪ ಹಾಗೂ ಮತ್ತಿತರರು ಹಾಜರಿದ್ದರು.