ರಾಜ್ಯ ಸುದ್ದಿ
IPS Transfer:15 ಐಪಿಎಸ್ ಅಧಿಕಾರಿಗಳ ವರ್ಗಾವಣೆ: ದಕ್ಷಿಣ ಕನ್ನಡ ಎಸ್ಪಿಯಾಗಿ ‘ಸಿ ಬಿ ರಿಷ್ಯಂತ್’ ನೇಮಕ
By shukradeshe news Posted on June 20, ಐಪಿಎಸ್ ಅಧಿಕಾರಿಗಳ ವರ್ಗಾವಣೆ: ದಕ್ಷಿಣ ಕನ್ನಡ ಎಸ್ಪಿಯಾಗಿ ಸಿ ಬಿ ರಿಷ್ಯಂತ್ ನೇಮಕ

ಬೆಂಗಳೂರು: ( IPS Transfer )ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. ಇಂದು ರಾಜ್ಯದ 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ಸಿ ಬಿ ರಿಷ್ಯಂತ್ ಅವರನ್ನ ನೇಮಕ ಮಾಡಿ ಆದೇಶಿಸಿದೆ. ಈ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಕ್ರಮ್ ಅಮತೆ ಅವರು ವೈದ್ಯಕೀಯ ರಜೆಯಲ್ಲಿ ತೆರಳಿದ್ದ ಹಿನ್ನಲೆಯಲ್ಲಿ ಸಿ ಬಿ ರಿಷ್ಯಂತ್ ಅವರನ್ನು ಇತ್ತೀಚೆಗೆ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಗೊಂಡಿದ್ದರು.

IPS Transfer:15 ಐಪಿಎಸ್ ಅಧಿಕಾರಿಗಳ ವರ್ಗಾವಣೆ: ದಕ್ಷಿಣ ಕನ್ನಡ ಎಸ್ಪಿಯಾಗಿ ಸಿ ಬಿ ರಿಷ್ಯಂತ್ ನೇಮಕ
C.B. Ryshyanth IPS SP Dakshina Kannada District, Mangalore

2013ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ರಿಷ್ಯಂತ್ ಅವರು ಈ ಹಿಂದೆ ದಾವಣಗೆರೆ ಜಿಲ್ಲೆಯ ಎಸ್‌ಪಿಯಾಗಿ ಸೇವೆ ಸಲ್ಲಿಸುತ್ತಿದ್ದರು, ವಿಧಾನಸಭೆ ಚುನಾವಣೆಗೆ ಮುನ್ನ ಬೆಂಗಳೂರಿನ ಕೇಂದ್ರ ಕಚೇರಿಗೆ ವರ್ಗಾವಣೆಯಾಗಿದ್ದರು. ದಾವಣಗೆರೆ ಜಿಲ್ಲೆಯಲ್ಲಿ ಉತ್ತಮ ಕೆಲಸ ನಿರ್ವಹಿಸಿದ್ದರು.ಬೆಂಗಳೂರು ಮೂಲದ ಸಿಬಿ ರಿಷ್ಯಂತ್ ಅವರು ಈ ಹಿಂದೆ ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ ಮತ್ತು ದಾವಣಗೆರೆಯಲ್ಲಿ ಎಎಸ್‌ಪಿ ಹಾಗೂ ಎಸ್ ಪಿ ಅಗಿ ಸೇವೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!