ಸುದ್ದಿರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ಆಧುನಿಕ ತರಬೇತಿಗಾಗಿ ಅರ್ಜಿ ಅಹ್ವಾನ
ByshukradeshenewsPosted on June 21, 2023ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ಆಧುನಿಕ ತರಬೇತಿಗಾಗಿ ಅರ್ಜಿ ಅಹ್ವಾನ
COMMENTS

ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಜೂನ್ 22 ಮತ್ತು 23 ರಂದು ನಗರದ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ 25 ಜನ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ.

ತರಬೇತಿಯಲ್ಲಿ ಭಾಗವಹಿಸುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್‍ಪೋರ್ಟ್ ಸೈಜ್ ಫೋಟೋ ಮತ್ತು ಪ.ಜಾತಿ ಮತ್ತು ಪ. ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್‍ದೊಂದಿಗೆ ತರಬೇತಿಗೆ ಹಾಜರಾಗಬೇಕು. ತರಬೇತಿಯಲ್ಲಿ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ದಾವಣಗೆರೆ ದೂ. ಸಂ 08192-233787ಗೆ ಸಂಪರ್ಕಿಸಲು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಪಶು ವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!