ರಜೆ ನಿರಾಕರಿಸಿದ್ದಕ್ಕೆ ಅಪರ ಜಿಲ್ಲಾಧಿಕಾರಿ ಹುದ್ದೆಗೇ ರಾಜೀನಾಮೆ ನೀಡಿದ ದಿಟ್ಟ ಅಧಿಕಾರಿ…
ಶುಕ್ರದೆಸೆ ನ್ಯೂಸ್ :-
ರಜೆ ನಿರಾಕರಿಸಿದ್ದಕ್ಕೆ ಅಪರ ಜಿಲ್ಲಾಧಿಕಾರಿ ಹುದ್ದೆಗೇ ರಾಜೀನಾಮೆ ನೀಡಿದ ದಿಟ್ಟ ಅಧಿಕಾರಿ…
ರಜೆ ನಿರಾಕರಿಸಿದ್ದಕ್ಕೆ ಅಪರ ಜಿಲ್ಲಾಧಿಕಾರಿ ಹುದ್ದೆಗೇ ರಾಜೀನಾಮೆ ನೀಡಿದ ದಿಟ್ಟ ಅಧಿಕಾರಿ…
ಚಂದ್ರವಳ್ಳಿ ನ್ಯೂಸ್, ಛತ್ತರ್‌ಪುರ:
ಮದುವೆ, ಅಂತ್ಯ ಸಂಸ್ಕಾರ, ಗೃಹ ಪ್ರವೇಶ ಇತ್ಯಾದಿ ಕುಟುಂಬದ ಸಭೆ ಸಮಾರಂಭಗಳಿಗೆ ಕನಿಷ್ಠ ಒಂದು ದಿನ ರಜೆ ನೀಡದಂತ ಪರಿಸ್ಥಿತಿಯಲ್ಲಿ ಆಡಳಿತ ವ್ಯವಸ್ಥೆ ಇದೆ ಎಂದರೆ ಸೋಜಿಗ ಆಗುತ್ತಿದೆ. ಅಪರ ಜಿಲ್ಲಾಧಿಕಾರಿಣಿಯೊಬ್ಬರು ತಮ್ಮ ಮನೆಯ ಗೃಹ ಪ್ರವೇಶಕ್ಕೆ ರಾಜೀನಾಮೆ ನೀಡಲಿಲ್ಲ ಎನ್ನುವ ಕಾರಣಕ್ಕೆ ತನ್ನ ಹುದ್ದೆಗೆ ರಾಜೀನಾಮೆ ನೀಡುವ ಮೂಲಕ ಆಡಳಿತ ವ್ಯವಸ್ಥೆ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ವಿಷಯ ದೇಶದಲ್ಲಿ ವೈರಲ್ ಆಗಿದ್ದು ಮೇಲಾಧಿಕಾರಿಗಳ ವರ್ತನೆ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯತೆಯನ್ನು ಈ ಪ್ರಕರಣ ಒತ್ತಿ ಹೇಳಿದೆ.
ಮಧ್ಯಪ್ರದೇಶದ ಛತ್ತರ್‌ಪುರದಲ್ಲಿ ನಿಯೋಜನೆಗೊಂಡಿದ್ದ ಡೆಪ್ಯೂಟಿ ಕಲೆಕ್ಟರ್‌ರೊಬ್ಬರು ಅಂತರಾಷ್ಟ್ರೀಯ ಕಾರ್ಯಕ್ರಮ ಮತ್ತು ಅವರ ಹೊಸ ಮನೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ರಜೆ ಕೊಡದಿದಕ್ಕೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ.
ರಾಜೀನಾಮೆ ನೀಡಿದ ಅಧಿಕಾರಿ ನಿಶಾ ಬೇಂಗ್ರೆ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಅಂತರರಾಷ್ಟ್ರೀಯ ಸರ್ವ ಧರ್ಮ ಶಾಂತಿ ಸಮ್ಮೇಳನ ಮತ್ತು ವಿಶ್ವ ಶಾಂತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ರಜೆ ನಿರಾಕರಿಸಲಾಗಿದೆ ಎಂದು ಉಲ್ಲೇಖಿಸಿ ರಾಜೀನಾಮೆ ನೀಡಿದ್ದಾರೆ.
ಕಳೆದ ಜೂನ್ 25 ರಂದು ಗಗನ್ ಮಲಿಕ್ ಫೌಂಡೇಶನ್ ಆಶ್ರಯದಲ್ಲಿ ಬೆತುಲ್‌ನ ಆಮ್ಲಾದಲ್ಲಿ ಅಂತರರಾಷ್ಟ್ರೀಯ ಸರ್ವ ಧರ್ಮ ಶಾಂತಿ ಸಮ್ಮೇಳನ ಮತ್ತು ವಿಶ್ವ ಶಾಂತಿ ಪ್ರಶಸ್ತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಹಾಜರಾಗಲು ಮತ್ತು ತಮ್ಮ ಮನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉಪ ಜಿಲ್ಲಾಧಿಕಾರಿ ನಿಶಾ ಬೇಂಗ್ರೆ ಅವರು ರಜೆ ಕೋರಿದ್ದರು. ಶ್ರೀಲಂಕಾದ ಕಾನೂನು ಸಚಿವರು ಸೇರಿದಂತೆ 11 ದೇಶಗಳ ಎಲ್ಲಾ ಧರ್ಮಗಳ ಪ್ರತಿನಿಧಿಗಳು ಅಂತಾರಾಷ್ಟ್ರೀಯ ಸರ್ವಧರ್ಮ ಶಾಂತಿ ಸಮ್ಮೇಳನ ಮತ್ತು ವಿಶ್ವ ಶಾಂತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದರಲ್ಲಿ ಶ್ರೀಲಂಕಾದಿಂದ ತಥಾಗತ ಬುದ್ಧನ ಅಸ್ಥಿಯೂ ಬರಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡದ ಕಾರಣ ಉಪ ಜಿಲ್ಲಾಧಿಕಾರಿ ನಿಶಾ ಬೇಂಗ್ರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ದೇಶದ ಗಮನ ಸೆಳೆದಿದ್ದಾರೆ.
1