posted by shukradeshenews. Kannada jlr 5

ಇಂದು ಬೆಂಗಳೂರು ವಿಧಾನಸೌಧದಲ್ಲಿ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಪ್ರಸನ್ನಾನಂದಪುರಿ ಜಗದ್ಗುರುಗಳ ನೇತೃತ್ವದಲ್ಲಿ ವಾಲ್ಮೀಕಿ ಸಮಾಜದ ಸಚಿವರುಗಳು,ಶಾಸಕರುಗಳ ಒಕ್ಕೊರಲಿನ ನಿಯೋಗದೊಂದಿಗೆ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ನಾಯಕ ಸಮಾಜದ ಅಭಿವೃದ್ಧಿಗೆ ಮೀಸಲಾತಿ ಗೊಂದಲ ನಿವಾರಣೆಗೆ ಪರಿಹಾರ ನೀಡುವಂತೆ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಸೇರಿದಂತೆ ಮಂತ್ರಿಮಂಡಲ ಸಚೀವ ಸಂಪುಟ ನಾಯಕರೊಂದಿಗೆ ಸ್ವಾಮಿಜೀಗಳು ಕೆಲವೊತ್ತು ಚರ್ಚೆ ನಡೆಸಿದರು

ಸಮಾಜದ ಬಹುದಿನದ ಬೇಡಿಕೆಯಾದ 7.5 ಮೀಸಲಾತಿಗಾಗಿ ಕಳೆದ ಹದಿನೈದು ಇಪ್ಪತ್ತು ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಮೀಸಲಾತಿ ಗೊಂದಲ ನಿವಾರಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳೆ, ಸಹಕಾರ ಸಚಿವರಾದ ಕೆ.ಎನ್. ರಾಜಣ್ಣ,ಜಗಳೂರು ಕ್ಷೇತ್ರದ ಶಾಸಕರಾದ ಚಿಕ್ಕಮ್ಮನಹಟ್ಟಿ ಬಿ ದೇವೇಂದ್ರಪ್ಪ, ಚಳಕೆರೆ ಕ್ಷೇತ್ರದ ಶಾಸಕ ಟಿ, ರಘುಮೂರ್ತಿ ಶಾಸಕರಾದ, ತುಕಾರಾಂ, ಅನಿಲ್ ಚಿಕ್ಕಮಾದು, ರಾಜ ವೆಂಕಟಪ್ಪ ನಾಯಕ, ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You missed

error: Content is protected !!