posted by shukradeshenews Kannada jlr July 6
news jlr 6
ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ರವರ ಕೊಡುಗೆ ದೇಶಕ್ಕೆ ಆಪಾರ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ ಮಹೇಶ್ ಹೇಳಿದರು.
ಪಟ್ಟಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಕಛೇರಿಯಲ್ಲಿ ಬಾಬುಜಗಜೀವನ್ ರಾಮ್ 37 ನೇ ಪುಣ್ಯ ಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಂತರ ಮಾತನಾಡಿದರು.
ದೇಶಾದ್ಯಂತ ‘ಬಾಬುಜಿ’ ಎಂದೇ ಕರೆಯಲ್ಪಡುವ ಜಗಜೀವನ ರಾಮ್ ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ ಹಾಗೂ ಅತ್ಯುತ್ತ್ತಮ ಸಂಸದೀಯ ಪಟುವಾಗಿದ್ದರು. ಬಾಬು ಜಗಜೀವನ ರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿ, ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಮತ್ತು ಮೊದಲ ಉಪ ಪ್ರಧಾನಿಯಾಗಿ ನಮ್ಮ ದೇಶಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ.
ಭಾರತ ದೇಶದಲ್ಲಿ ಜಿಡ್ಡುಗಟ್ಟಿದ್ದ ಮೇಲು-ಕೀಳು ತಾರತಮ್ಯ, ಜಾತಿ ಪದ್ಧತಿ, ಅಸ್ಪೃಶ್ಯ ಎಂಬ ಮನೋಭಾವನೆಗಳನ್ನು ತೊಡೆದು ಹಾಕಲು ಸಾಮಾಜಿಕ ನೆಲೆಗಟ್ಟಿನಲ್ಲಿ ಹೋರಾಡಿದವರು ಅನೇಕರು. ಆದರೆ ಅವರ ಏಳಿಗೆಗೆ ಹೆಚ್ಚಿನ ಚುರುಕು ನೀಡಿ ಒಂದು ಸ್ಪಷ್ಟ ರೂಪ ಕೊಟ್ಟ ಕೆಲವೇ ಕೆಲವು ನಾಯಕರಲ್ಲಿ ಬಾಬು ಜಗಜೀವನ ರಾಮ್ ಒಬ್ಬರು. ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ಮುಖಂಡರಾದ ಹನುಮಂತಪ್ಪ. ರಾಮಣ್ಣ. ಕಛೇರಿ ಸಿಬ್ಬಂದಿಗಳಾದ ಉಮೇಶ್.ಮಲ್ಲಿಕಾರ್ಜುನ. ಗೀರಿ. ಸೇರಿದಂತೆ ಹಾಜರಿದ್ದರು.