By shukradeshe news Editor m rajappa m Vyasagondanahalli
ಶುಕ್ರದೆಸೆ ನ್ಯೂಸ್ ಸಂಪಾದಕ ರಾಜಪ್ಪ ವ್ಯಾಸಗೊಂಡನಹಳ್ಳಿ
July 8, 2023,
ಜಗಳೂರು ; ಅಡಿಕೆ, ಬಾಳೆ ದಾಳಿಂಬೆ ಬೆಳೆಗಳಿಗೆ
ಜಲೈ 15 ಕಡೆಯ ದಿನ ; ಹವಾಮಾನ ಆಧಾರಿತ ಬೆಳೆ ವಿಮೆ ಕಟ್ಟಲು
ಪ್ರಕೃತಿ ವಿಕೋಪಗಳು, ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ, ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯ ನಷ್ಟದ ಪರಿಹಾರವನ್ನು ಬೆಳೆ ವಿಮೆ , ಗ್ರಾಮ ಪಂಚಾಯಿತಿ, ಹೋಬಳಿ ವಾರು ನಿರ್ಧರಿಸಿ ಬೆಳೆ ನಷ್ಟದ ಪರಿಹಾರವನ್ನು ನೀಡುವುದರ ಮೂಲಕ ರೈತರಿಗೆ ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ (ವಿಮಾ) ಯೋಜನೆಯು ನೆರವಾಗಲಿದೆ ಎಂದು ತಿಳಿದ್ದಾರೆ.
ಅಡಕೆ .ದಾಳಿಂಬೆ ಇನ್ನಿತರೆ ತೊಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ ಕಟ್ಟಲು ದಿ ಜುಲೈ 15 ಕೊನೆ ದಿನ ರೈತರು ವಿಮೆ ಕಟ್ಟಿ ಈ ಸೌಲಭ್ಯ ಸದುಪಯೋಗ ಪಡೆದುಕೊಳ್ಳುವಂತೆ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಾದ ವೆಂಕಟೇಶ ಮೂರ್ತಿ ಮನವಿ ಮಾಡಿಕೊಂಡಿದ್ದಾರೆ.
ಬೆಳೆ ನಷ್ಟ ಪರಿಹಾರಕ್ಕಾಗಿ ರೈತರು ಅತ್ತಿರದ ಬ್ಯಾಂಕುಗಳಲ್ಲಿ ಅಥವಾ ಗ್ರಾಮ ಒನ್ ಸೇವಾ ಕೇಂದ್ರದಲ್ಲಿ ವಿಮೆ ಮಾಡಿಸುವಂತೆ
ತೋಟಗಾರಿಕೆಯ ವಿವಿಧ ಬೆಳೆಗಳಿಗೂ ಬೆಳೆ ವಿಮೆ ಮಾಡಿಸಿ
ಹೆಚ್ಚಿನ ಮಾಹಿತಿಗಾಗಿ ಅತ್ತಿರದ ತೋಟಗಾರಿಕೆ ಇಲಾಖೆ ಅಧಿಕಾರಿಗಳುನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ
ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಕಸಬಾ 7019819101
ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಬಿಳಿಚೋಡು 8904721145
ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಸೊಕ್ಕೆ ಹೊಬಳಿ 7899942287