ರಾಜ್ಯ
By shukradeshe news Kannada July 13 Editor m rajappa m Vyasagondanahalli

ಮಾಜಿ ಸಚಿವ, ಶಾಸಕ ಮುನಿರತ್ನಗೆ ಸಂಕಷ್ಟ: ಅಕ್ರಮ ಗಣಿಗಾರಿಕೆ ಆರೋಪದಡಿ ಎಫ್ಐಆರ್ ದಾಖಲು
ಮಾಜಿ ಸಚಿವ, ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನಗೆ ಸಂಕಷ್ಟ ಎದುರಾಗಿದೆ. ಭೂಮಿ ದಾಖಲೆ ಸಂಬಂಧ ಎಫ್ಐಆರ್ ದಾಖಲಾಗಿದ್ದು ಮುನಿರತ್ನ ಅವರನ್ನು A4 ಆರೋಪಿ ಎಂದು ಗುರುತಿಸಲಾಗಿದೆ.

MLA Muniratnaಶಾಸಕ ಮುನಿರತ್ನ
ಬೆಂಗಳೂರು: ನಗರದ ಹೊರವಲಯದ ಹುಣಸಮಾರನಹಳ್ಳಿಯ ಕ್ವಾರಿಯಲ್ಲಿ ಕಲ್ಲು ಗಣಿಗಾರಿಕೆ ನಡೆಸಲು ಸ್ಫೋಟ ನಡೆಸಿದ ಆರೋಪದ ಮೇಲೆ ಸ್ಫೋಟಕ ಕಾಯ್ದೆ ಮತ್ತು ಕರ್ನಾಟಕ ಭೂ ಕಂದಾಯ ಕಾಯ್ದೆಯಡಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ಕು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಯಲಹಂಕ ತಹಶೀಲ್ದಾರ್ ಅನಿಲ್ ಅರೋಲಿಕರ್ ನೀಡಿದ ದೂರಿನ ಮೇರೆಗೆ ಚಿಕ್ಕಜಾಲ ಪೊಲೀಸರು ಮುನಿರತ್ನ, ಆನಂದನ್, ಗಣೇಶ್ ವಿ ಮತ್ತು ರಾಧಮ್ಮ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ಅಕ್ರಮ’ ಗಣಿಗಾರಿಕೆ ಚಟುವಟಿಕೆಗಳನ್ನು ನಿಲ್ಲಿಸುವಂತೆ ಜೈ ಭೀಮ್ ಸೇನೆಯು ತಹಸೀಲ್ದಾರ್‌ಗೆ ಮನವಿ ಮಾಡಿದೆ ಎಂದು ಎಫ್‌ಐಆರ್ ಹೇಳಿದೆ.

ಕಲ್ಲುಗಣಿಗಾರಿಕೆಗೆ ಸಿಡಿಮದ್ದು ಬಳಸುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ದೂರಿನ ಮೇರೆಗೆ ಕ್ಷೇತ್ರ ಸಮೀಕ್ಷೆ ನಡೆಸಿದ್ದು, ಕಲ್ಲುಗಣಿಗಾರಿಕೆಗೆ ಸ್ಫೋಟಕ ಬಳಸಿರುವುದು ಪತ್ತೆಯಾಗಿದೆ.

ಎಫ್‌ಐಆರ್‌ನಲ್ಲಿ ಈ ಚಟುವಟಿಕೆಗಳು ಆ ಪ್ರದೇಶದಲ್ಲಿ ಭೂಮಿಗೆ ಹಾನಿ ಮಾಡುತ್ತಿವೆ. ಕಲ್ಲುಗಳ ಮಾರಾಟದಿಂದ ರಾಜ್ಯ ಸರ್ಕಾರಕ್ಕೂ ನಷ್ಟವಾಗುತ್ತಿದೆ. ಕ್ವಾರಿ ಗಣಿಗಾರಿಕೆ ನಡೆಸುವವರು ಸಕ್ಷಮ ಪ್ರಾಧಿಕಾರದಿಂದ ಯಾವುದೇ ಅನುಮತಿ ಪಡೆದಿಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಎಫ್‌ಐಆರ್ ತಿಳಿಸಿದೆ.

ಹುಣಸಮಾರನಹಳ್ಳಿ ಗ್ರಾಮಸ್ಥರಿಂದ ಧರಣಿ: ಹುಣಸಮಾರನಹಳ್ಳಿ ಗ್ರಾಮಸ್ಥರು ಗಣಿಗಾರಿಕೆ ವಿರುದ್ಧ ಧರಣಿ ನಡೆಸಿದ್ದರು. ಧರಣಿ ಹಿನ್ನೆಲೆ ಸ್ಥಳ ಪರಿಶೀಲನೆ ನಡೆಸಿದ್ದ ತಹಶೀಲ್ದಾರ್ ಅವರು ದೂರು ದಾಖಲು ಮಾಡಿದ್ದರು. ಹುಣಸಮಾರನಹಳ್ಳಿ ಸರ್ವೆ ನಂಬರ್ 177/3, 178/1.2.3 ಹಾಗೂ ಸೊಣಪ್ಪನಹಳ್ಳಿ ಸರ್ವೆ ನಂ. 34/1 2 3, 17/7 8,9ರಲ್ಲಿ ಗಣಿಗಾರಿಕೆ ಮಾಡಲಾಗಿದ್ದು, ಆರೋಪಿಗಳಾದ ಆನಂದನ್, ಗಣೇಶ್, ರಾಧಮ್ಮ, ಶಾಸಕ ಮುನಿರತ್ನ ವಿರುದ್ಧ ಸ್ಫೋಟಕ ಕಾಯ್ದೆ 1884 US 9B(1b) , ಕರ್ನಾಟಕ ಭೂ ಕಂದಾಯ ಕಾಯ್ದೆ 1964ರಡಿ ಕೇಸ್ ದಾಖಲಾಗಿದೆ.

Leave a Reply

Your email address will not be published. Required fields are marked *

You missed

error: Content is protected !!