ಜಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಿಲಿಂಡರ್ ಬೆಲೆ ಏರಿಕೆ, ಮತ್ತು ಭ್ರಷ್ಟಾಚಾರ ಖಂಡಿಸಿ ಉಗ್ರ ಪ್ರತಿಭಟನೆ ನಡೆಸಲಾಯಿತು.

ಜಗಳೂರು:ಆಳುವ ಸರ್ಕಾರಗಳ ಜನ ವಿರೋಧಿ ನೀತಿ ಖಂಡಿಸಿ ಮಾಜಿ ಶಾಸಕ ಎಚ್.ಪಿ. ರಾಜೇಶ್ ಪ್ರತಿಭಟನೆ ನೇತ್ರತ್ವ ವಹಿಸಿಕೊಂಡು ಮಾತನಾಡಿದರು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರು ಜಗಳೂರು ಪಟ್ಟಣದ ಪ್ರವಾಸಿ ಮಂದಿರದಿಂದ ದಾವಣಗೆರೆ ಮುಖ್ಯ ರಸ್ತೆ ಮೂಲಕ ತಹಶೀಲ್ದಾರ್ ಕಚೇರಿಯವರೆಗೆ ಸಿಲಿಂಡರ್ ಹೊತ್ತು ಸಾಗಿದ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಈ ವೇಳೆ ಮಾಜಿ ಶಾಸಕ ಎಚ್.ಪಿ.ರಾಜೇಶ್,ಮಾತನಾಡಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ. ನಮ್ಮ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ ಎಲ್ಲಾ ಬ್ಲಾಕ್ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ನಮ್ಮದು ಬಡವರ ರಾಷ್ಟ್ರ, ಭಾರತ ದೇಶದಲ್ಲಿ ಜನ ಸಂಕಷ್ಟದಲ್ಲಿದ್ದಾರೆ. ಹಳ್ಳಿಯ ಜನ ಇನ್ನೂ ಮೂಲ ಸೌಕರ್ಯಗಳಿಂದ ಮುಕ್ತರಾಗಿಲ್ಲ. ಬಡಜನರ ಹೊಟ್ಟೆಯ ಮೇಲೆ ಹೊಡೆಯುವ ಕಾರ್ಯವನ್ನು ಕೇಂದ್ರ ಸರಕಾರ ಮಾಡಿದೆ. ಕೇಂದ್ರ ರಾಜ್ಯ ಸರಕಾರದ ಬಡವರ ವಿರೋಧಿ ಧೋರಣೆ ಖಂಡಿಸಿ ಜನಜಾಗೃತಿ ಮೂಡಿಸುತ್ತಿದ್ದೇವೆ. ತಕ್ಷಣವೇ ಬೆಲೆ ಏರಿಕೆ ವಾಪಾಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಕೆ.ಪಿ.ಸಿ. ಸಿ ಎಸ್‍ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ ಮಾತನಾಡಿ,ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಅವರ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತದಾಳಿಯಲ್ಲಿ 8 ಕೋಟಿಗೂ ಅಧಿಕ ಹಣ ಸಿಕ್ಕಿದೆ. ಇಲ್ಲಿಯವರೆಗೆ ಕೇವಲ ಶೇ.40 ಸರಕಾರ ನೋಡಿದ್ದೆವು. ಈಗ ಶೇ.80ರಷ್ಟು ಭ್ರಷ್ಟಾಚಾರದ ಬಿಜೆಪಿ ಸರಕಾರವಾಗಿದೆ. ಈ ಸರಕಾರ ಎಷ್ಟು ಭ್ರಷ್ಟಾಚಾರದಿಂದ ಕೂಡಿದೆ ಎಂಬುದಕ್ಕೆ ಇದಕ್ಕಿಂತಾ ನಿದರ್ಶನ ಬೇಕಾ ಎಂದು ಪ್ರಶ್ನಿಸಿದರು. ಮಾಡಾಳ್ ವಿರೂಪಾಕ್ಷಪ್ಪ ಅವರು ಚುನಾವಣೆಗಾಗಿ ಹಣ ಸಂಗ್ರಹಕ್ಕಾಗಿ ಇಷ್ಟೆಲ್ಲಾ ಭ್ರಷ್ಟಾಚಾರ ಮಾಡಿರುವುದು ಸಾಬೀತಾಗಿದೆ. ಕೂಡಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನೈತಿಕೆ ಹೊಣೆ ಹೊತ್ತು ರಾಜೀನಾಮೆ ನೀಡಿ ಚುನಾವಣೆಗೆ ಸಜ್ಜಾಗಬೇಕು ಎಂದು ಆಗ್ರಹಿಸಿದರು.

ಕೆಪಿಸಿಸಿ ಜಗಳೂರು ಉಸ್ತುವಾರಿ ಕಲ್ಲೇಶ್ ರಾಜ್ ಮಾತನಾಡಿ, ಕೇಂದ್ರ ಸರಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದಾಗ ಗ್ಯಾಸ್ ಸಿಲಿಂಡರ್ ಬೆಲೆ ಕೇವಲ 450 ರೂ ಇತ್ತು. ಇಂದು ಸಿಲಿಂಡರ್ ಬೆಲೆ 1125ಕ್ಕೆ ಏರಿಕೆ ಯಾಗಿದೆ. ಕೇವಲ ಹತ್ತು ವರ್ಷದಲ್ಲಿ ಹತ್ತುಪಟ್ಟು ಏರಿಸಿರುವ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ ಜನವಿರೋಧಿ ನೀತಿ ಸಾಕ್ಷಿಯಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಕೆಂಚಮ್ಮ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ಲೋಕೇಶ್, ಬಸವಾಪುರ ರವಿಚಂದ್ರ, ಮಾಜಿ ತಾಲೂಕು ಪಂಚಾಯತಿ ಸದಸ್ಯ ಕುಬೇಂದ್ರಪ್ಪ.ಹೊನ್ನೂರ್ ಸ್ವಾಮಿ,ಗುತ್ತಿದುರ್ಗ ರುದ್ರೇಶ್, ತಾನಾಜಿ ಗೋಸಾಯಿ, ಹಟ್ಟಿ ತಿಪ್ಪೇಸ್ವಾಮಿ,ಮರೇನಹಳ್ಳಿ ಶೇಖರಪ್ಪ,ದಾಸಪ್ಪ ಜಯಣ್ಣ , ಮರೇನಹಳ್ಳಿ ಕುಮಾರ. ಬoಗಾರಪ್ಪ.ವಿಜಯ್ ಮಂಜುನಾಥ್.ಶಕೀಲ್ ಅಹ್ಮದ್. ಶ್ರೀನಿವಾಸ್.ಸಿದ್ದಪ್ಪ. ನಾಗರಾಜ್. ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You missed

error: Content is protected !!