Shukradeshe News kannada
ಮಲೆನಾಡುಚಿಕ್ಕಮಗಳೂರುISRO: ಚಂದ್ರಯಾನ-3 ತಂಡದಲ್ಲಿ ಬಾಳೆಹೊನ್ನೂರು ಯುವತಿ ಭಾಗಿ‌
ಮಲೆನಾಡು ಚಿಕ್ಕಮಗಳೂರು
ISRO: ಚಂದ್ರಯಾನ-3 ತಂಡದಲ್ಲಿ ಬಾಳೆಹೊನ್ನೂರು ಯುವತಿ ಬಾಗಿಯಾಗಿದ್ದಾರೆ.

isro: ಬಾಳೆಹೊನ್ನೂರು: (ನ್ಯೂಸ್ ಶುಕ್ರದೆಸೆ ವರದಿ) ಭಾರತ ಕಾತರದಿಂದ ಕಾಯುತ್ತಿರುವ ‘ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ’ಯ ಚಂದ್ರಯಾನ 3 ಮಿಷನ್ ಯಶಸ್ವಿಯಾಗಿ ಉಡಾವಣೆಯಾಗಿದೆ. ಈ ತಂಡದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ತುಪ್ಪೂರು ಗ್ರಾಮದ ಡಾ. ಕೆ.ನಂದಿನಿ ಇರುವುದು ಹೆಮ್ಮೆ ಮೂಡಿಸಿದೆ.

ಹೌದು ತುಪ್ಪೂರು ಗ್ರಾಮದ ಕಾಫಿ ಉದ್ಯಮ, ವ್ಯವಹಾರ ನಡೆಸುತ್ತಿರುವ ಕೇಶವಮೂರ್ತಿ, ಮಂಗಳ ದಂಪತಿ ಪುತ್ರಿ ಡಾ. ಕೆ.ನಂದಿನಿ ಕಳೆದ 8 ವರ್ಷಗಳಿಂದ ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಚಂದ್ರಯಾನ 3 ಯಶಸ್ವಿ ಉಡಾವಣೆಯಲ್ಲಿ ಈಕೆಯೂ ಪಾಲ್ಗೊಂಡಿರುವುದು ಬಾಳೆಹೊನ್ನೂರಿಗೆ ಕೀರ್ತಿ ತಂದಿದ್ದಾರೆ.

ಡಾ. ಕೆ.ನಂದಿನಿ ಅವರು 2019ರ ಚಂದ್ರಯಾನ 2ರ ತಂಡದಲ್ಲೂ ಭಾಗವಹಿಸಿದ್ದು, ಸತತ ಎರಡನೇ ಬಾರಿಯೂ ಕಾರ್ಯನಿರ್ವಹಿಸಿದ್ದಾರೆ.

ಇಸ್ರೋ ವಿಜ್ಞಾನಿಗಳಿಂದ ಮತ್ತೊಂದು ಐತಿಹಾಸಿಕ ಸಾಧನೆ; ಚಂದ್ರಯಾನ-3 ಉಡಾವಣೆ ಯಶಸ್ವಿ

Leave a Reply

Your email address will not be published. Required fields are marked *

You missed

error: Content is protected !!