Kannada | online news portal | Kannada news online
Search
Shukradeshe suddi Kannada | online news portal | Kannada news online
Kannada | online news portal | Kannada news online
ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ
Byshukradeshenews iPublished on August 1, 2023
ದಾವಣಗೆರೆ: ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ನಗರದ ಚಿಗಟೇರಿ ಜಿಲ್ಲಾಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಆಸ್ಪತ್ರೆಯ ಎಲ್ಲಾ ವಾರ್ಡ್‍ಗಳಿಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿದರು ಮತ್ತು, ರೋಗಿಗಳಿಗೆ ಔಷದಗಳ ಕೊರತೆಯಾಗದಂತೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ತಿಳಿಸಿದರು.
ಶಿಥಿಲಾವಸ್ಥೆ ಕಟ್ಟಡಗಳನ್ನು ಪರಿಶೀಲಿಸಿ ಶೀಘ್ರ ದುರಸ್ತಿ ಕಾರ್ಯ ಕೈಗೊಳ್ಳಲು ಸೂಚಿಸಿದರು, ವಿಶೇಷವಾಗಿ ಡಯಾಲಿಸಿಸ್ ಘಟಕಕ್ಕೆ ಭೇಟಿ ನೀಡಿ ಡಯಾಲಿಸಿಸ್ ರೋಗಿಗಳಿಗೆ ಯಾವುದೇ ರೀತಿ ಕೊರತೆಯಾಗದಂತೆ ನೋಡಿಕೊಳ್ಳಬೇಕು, ಆಸ್ಪತ್ರೆಯ ಕೊಠಡಿಗಳು ಹಾಗೂ ಹೊರ ಆವರಣ ಸ್ವಚ್ಛತೆ ಕುರಿತು ಗಮನ ಹರಿಸಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಾಕರಿಗೆ ಸೂಚನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ್, ಜಿಲ್ಲಾ ಶಸ್ತ್ರ ಚಿಕಿತ್ಸಾಧಿಕಾರಿ ಡಾ. ಷಣ್ಮುಖ ಉಪಸ್ಥಿತರಿದ್ದರು.
…
ಚಿಗಟೇರಿ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ