online news portal | Kannada news online
Search
Shukradeshe suddi Kannada | online news portal | Kannada news online
Kannada | online news portal | Kannada news online
Byshukradeshenews iPublished on August 18 , 2023
ದೇವರಾಜ್ ಅರಸು ಜಯಂತಿ ಪೂರ್ವಭಾವಿ ಸಭೆ.
ಜಗಳೂರು ಸುದ್ದಿ:ಆಗಸ್ಟ್ 20 ರಂದು ದೇವರಾಜ್ ಅರಸ್ ಅವರ 108ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಗ್ರೇಡ್ -2ತಹಶೀಲ್ದಾರ್ ಮಂಜಾನಂದ ಅವರು ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಆವರಣದ ಸಾಮರ್ಥ್ಯ ಸೌಧ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕರಾದ ಬಿ.ದೆವೇಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು.ಕಾರ್ಯಕ್ರಮಕ್ಕೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಸಾರ್ವಜನಿಕರು,ದೇವರಾಜ್ ಅರಸು ಅವರ ಅಭಿಮಾನಿಗಳು ಕಡ್ಡಾಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಬಿಸಿಎಂ ಇಲಾಖೆ ವಿಸ್ತರಣಾಧಿಕಾರಿ ಅಸ್ಮಾಬಾನು ಮಾತನಾಡಿ,ಬಿಸಿಎಂ ಇಲಾಖೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಹಾಸ್ಟೆಲ್ ಗಳಲ್ಲಿ ಕಡ್ಡಾಯವಾಗಿ ದೇವರಾಜ್ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಂತರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕಾರ್ಯಕ್ರಮ ಕ್ಕೆ ವಿದ್ಯಾರ್ಥಿಗಳೊಂದಿಗೆ ನಿಲಯ ಮೇಲ್ವಿಚಾರಕರುಭಾಗವಹಿಸಬೇಕು.ಪೂರ್ವಯೋಜಿತವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ,ಭಾಷಣ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.
ಸಂದರ್ಭದಲ್ಲಿ ಪ.ಪಂ ಮುಖ್ಯಾಧಿಕಾರಿ ಲೋಕ್ಯಾನಾಯ್ಕ,ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ನಿಲಯ ಮೇಲ್ವಿಚಾರಕರಾದ ದೆವೇಂದ್ರಪ್ಪ,ಸೇರಿದಂತೆ ಇದ್ದರು.