ಶಾಶ್ವತ ಬರಪೀಡಿತ ಪ್ರದೇಶವೆಂದು ಘೋಷಿಸಿ ಗುಳೆ ತಪ್ಪಿಸಲು ರೈತ ಸಂಘಟನೆ ಆಗ್ರಹ.

ಜಗಳೂರು ಸುದ್ದಿ:ತಾಲೂಕನ್ನು ಶಾಶ್ವತ ಬರಪೀಡಿತ ಪ್ರದೇಶ ಎಂದು ಘೋಷಿಸಲು ಹಾಗೂ ರೈತ ಕೃಷಿಕಾರ್ಮಿಕರಿಗೆ ಉದ್ಯೋಗ ನೀಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಪ್ರತಿಭಟನೆ‌ ನಡೆಸಲಾಯಿತು.

ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾಕಾರರು ಸರಕಾರದ ವಿರುದ್ದ ಘೋಷಣೆ‌ಕೂಗುತ್ತಾ ಮಹಾತ್ಮಗಾಂಧಿ ವೃತ್ತದ ಮೂಲಕ,ಅಂಬೇಡ್ಕರ್ ವೃತ್ತದಿಂದ ತಾಲೂಕು ಕಛೇರಿ ಮುಂಬಾಗ ಜಮಾಯಿಸಿ ಲಿಖಿತ ಮನವಿಸಲ್ಲಿಸಿದರು.

ಜಿಲ್ಲಾ ಪ್ರಧಾನಕಾರ್ಯದರ್ಶಿ ಮಾತನಾಡಿ,ಪ್ರಸಕ್ತ ಸಾಲಿನಲ್ಲಿ ಸರಿಯಾಗಿ ಮಳೆ ಬಾರದೆ ಮುಖ್ಯಬೆಳೆಗಳಾದ ಮೆಕ್ಕೆಜೋಳ,ಶೇಂಗಾ,ಸೂರ್ಯಕಾಂತಿ,ರಾಗಿ,ಈರುಳ್ಳಿ,ತರಕಾರಿ ಬೆಳೆಗಳು ಒಣಗುತ್ತಿವೆ.ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ರೈತರು ಕಂಗಾಲಾಗಿದ್ದಾರೆ.ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು.ರೈತಕೃಷಿ ಕಾರ್ಮಿಕರು ಗುಳೆ ಹೋಗುವುದನ್ನು ತಪ್ಪಿಸುವ ಸಲುವಾಗಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.

ತಾಲೂಕಿನಲ್ಲಿ ಅಧಿಕಾರಿಗಳು ಬೆಳೆ ಸಮೀಕ್ಷೆ ವರದಿ ಸಲ್ಲಿಸಬೇಕು.ಅಲ್ಪ ಸ್ವಲ್ಪ ಕೊಳವೆ ಬಾವಿಗಳಿಂದ ನೀರು ಹಾಯಿಸಲು ಗುಣಮಟ್ಟದ ವಿದ್ಯುತ್ ಸರಬರಾಜು ಮಾಡದೆ ಬೆಸ್ಕಾಂ ಇಲಾಖೆಯು ರೈತರೊಂದಿಗೆ ಕಣ್ಣಾಮುಚ್ಚಾಲೆ ಆಟ ಆಡುತ್ತಿದೆ.ಶೀಘ್ರ ಸಮಸ್ಯೆ ಬಗೆಹರಿಸದಿದ್ದರೆ ಉಗ್ರಸ್ವರೂಪದ ಹೊರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

ಸಂದರ್ಭದಲ್ಲಿ ಸಂಘಟನೆಯ ದಿಬ್ಬದಹಳ್ಳಿ ಗಂಗಾಧರಪ್ಪ,ಜಿಲ್ಲಾ‌ಕಾರ್ಯದರ್ಶಿ ಗೌಡಗೊಂಡನಹಳ್ಳಿ ಸತೀಶ್,ಪದಾಧಿಕಾರಿಗಳಾದ ವಿರೇಶ್,ಪ್ರಹ್ಲಾದಪ್ಪ,ತಿಪ್ಪೇಸ್ವಾಮಿ,ಏಕಾಂತಪ್ಪ,ಸಹದೇವರೆಡ್ಡಿ,ತಿಪ್ಪೇಸ್ವಾಮಿ,ರಂಗಪ್ಪ,ಶರಣಮ್ಮ,ಸೇರಿದಂತೆ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You missed

error: Content is protected !!