Editor m rajappa vyasagondanahalli

By shukradeshenews Kannada | online news portal |Kannada news online   

By shukradeshenews | published on September 15

ವಿವಿಧ ಬೇಡಿಕೆಗಳ‌ಈಡೇರಿಕೆಗಾಗಿ ಆಗ್ರಹಿಸಿ ಅಂಗವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಫೆಡರೇಷನ್ ಪ್ರತಿಭಟನೆ

ಜಗಳೂರು ಸುದ್ದಿ:ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಎಐಟಿಯುಸಿ ಸಂಯೋಜಿತ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್ ವತಿಯಿಂದ ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾಕಾರರು ಮಹಾತ್ಮಗಾಂಧಿ ವೃತ್ತ,ಸೇರಿದಂತೆ ಸರಕಾರದ ವಿರುದ್ದ ಘೋಷಣೆ ಕೂಗುತ್ತಾ ಅಂಬೇಡ್ಕರ್ ವೃತ್ತದ ಮೂಲಕ ತಹಶೀಲ್ದಾರ್ ಕಛೇರಿಗೆ ತೆರಳಿ ನಂತರ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿಯೇ ಕಟ್ಟಡ ಕಾರ್ಮಿಕ ಮತ್ತು ಕಲ್ಯಾಣ ಇಲಾಖೆಯಿಂದ ಪರ್ಯಾಯವಾಗಿ ಶಿಶುಪಾಲನಾ ಕೇಂದ್ರ ಹಾಗೂ ಶಾಲಾ ಪೂರ್ವ ಶಿಕ್ಷಣ ತರಬೇತಿ ಕೇಂದ್ರಗಳನ್ನು ತೆರಯುವ ಆದೇಶವನ್ನು ಕೂಡಲೇ ರದ್ದುಪಡಿಸಬೇಕು.ಅಲ್ಲದೆ 48 ವರ್ಷಗಳಿಂದ ಐಸಿಡಿಎಸ್ ಯೋಜನೆಯಡಿ 6 ವರ್ಷದ ವಯೋಮಾನದವರಿಗೆ ಶಿಶು ಅಭಿವೃದ್ದಿ ಯೋಜನೆಯಡಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಲಾಲನೆ ಪಾಲನೆ,ಪೌಷ್ಠಿಕ ಆಹಾರ ಇತ್ಯಾದಿ ಸೇವೆಗಳನ್ನು ನಡೆಸುತ್ತಾ ಬಂದಿದ್ದು ಮುಂದುವರೆಸಬೇಕು.ಅಲ್ಲದೆ ಕಾರ್ಯಕರ್ತೆಯರಿಗೆ ₹ 15000 , ಸಹಾಯಕಿಯರಿಗೆ ₹10000 ಹಾಗೂ ನಿವೃತ್ತಿಹೊಂದಿದವರಿಗೆ ₹ 3ಲಕ್ಷ ಇಡಿಗಂಟು ನೀಡುವ 6 ನೇ ವೇತನದ ಭರವಸೆಯನ್ನು ಶೀಘ್ರ ಈಡೇರಿಸಬೇಕು ಎಂದು ಆಗ್ರಹಿಸಿದರು.

ಸಂದರ್ಭದಲ್ಲಿ ಎಐಟಿಯುಸಿ ತಾಲೂಕು ಪದಾಧಿಕಾರಿಗಳಾದ ಮಹಮ್ಮದ್ ಭಾಷಾ,ಸುಶೀಲಮ್ಮ,ಭರಮಕ್ಕ,ಹಾಲಮ್ಮ,ಗೌರಮ್ಮ,ಶಶಿಕಲಾ,ವೀರಣ್ಣ,ಮಾದಿಹಳ್ಳಿ ಮಂಜಪ್ಪ,ಮಂಜಮ್ಮ ಸೇರಿದಂತೆ ನೂರಾರು ಕಾರ್ಯಕರ್ತೆಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You missed

error: Content is protected !!