Editor m rajappa vyasagondanahalli
By shukradeshenews Kannada | online news portal |Kannada news online
By shukradeshenews | published. October 1
ಜಿ.ಬಿ ವಿನಯಕುಮಾರ್ ಅಭಿಮಾನಿ ಬಳಗದಿಂದ ಇಂದು ಗಾಂಧೀಜಿ- ಶಾಸ್ತ್ರೀಜಿ ಜನ್ಮದಿನಾಚರಣೆ
ವಿನಯಕುಮಾರ್ ಜಿ.ಬಿ. ಅಭಿಮಾನಿಗಳ ಬಳಗ ಕಕ್ಕರಗೊಳ್ಳ ಇವರ ಆಶ್ರಯದಲ್ಲಿ ನಗರದ ಪಿಬಿ ರಸ್ತೆಯಲ್ಲಿರುವ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಇಂದು ಬೆಳಗ್ಗೆ ೧೧ ಕ್ಕೆ
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ,
ಲಾಲ್ ಬಹದ್ದೂರ್ ಶಾಸ್ತ್ರೀಜಿ ಜನ್ಮದಿನಾಚರಣೆ ಹಾಗೂ ಹಿರಿಯ ನಾಗರೀಕರ ದಿನಾಚರಣೆ ಅಂಗವಾಗಿ ವಿಕಲಚೇತನರಿಗೆ ವೀಲ್ ಚೇರ್, ವಾಕರ್ ಮತ್ತು ಶ್ರವಣ ಸಾಧನ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಸಾಣೇಹಳ್ಳಿ ತರಳಬಾಳು ಶಾಖಾಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ,ಸಾನಿಧ್ಯ ವಹಿಸಲಿದ್ದಾರೆ.ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹಾಗೂ ವಾಲ್ಮೀಕಿಗುರುಪೀಠದ ಪ್ರಸನ್ನಾನಂದ ಪುರಿ ಶ್ರೀ ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದಾರೆ. ಹೊನ್ನಾಳಿ ಹಿರೇಕಲ್ಮಠದ ಶ್ರೀ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹಾಗೂ ನಂದಿಗುಡಿ ಮಠದ ಶ್ರೀ ಸಿದ್ದರಾಮ ಶಿವಾಚಾರ್ಯ ಸ್ವಾಮೀಜಿ ಸಲಕರಣೆಗಳ ವಿತರಣೆ ಮಾಡಲಿದ್ದಾರೆ.ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಜಿಯವರ ಭಾವಚಿತ್ರಕ್ಕೆ ಹೊಸದುರ್ಗದ ಶ್ರೀ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮೀಜಿ,ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಇಮ್ಮಡಿ ಸಿದ್ಧರಾಮೇಶ್ವರ ಶ್ರೀ, ಡಾ. ಬಸವ ಮಡಿವಾಳ ಮಾಚೀದೇವ ಸ್ವಾಮೀಜಿ,
ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ,ಶ್ರೀ ಓಂಕಾರ ಶಿವಾಚಾರ್ಯ ಸ್ವಾಮಿಜಿ,ಮೌಲ್ವಿ ಶಾಹಿದ್ ರಜಾ ಪುಷ್ಪನಮನ ಸಲ್ಲಿಸಲಿದ್ದಾರೆ. ಬೆಂಗಳೂರು ಇನ್ಸೈಟ್ಸ್ ಐಎಎಸ್ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರಾದ ಜಿ.ಬಿ ವಿನಯ ಕುಮಾರ್ ಕಕ್ಕರಗೊಳ್ಳ ಅಧ್ಯಕ್ಷತೆ ವಹಿಸಲಿದ್ದಾರೆ.