ನಾನು ಕಾಂಗ್ರೆಸ್ ಶಾಸಕಿಯಲ್ಲ, ಸದಸ್ಯತ್ವನೂ ಪಡೆದಿಲ್ಲ: ಲತಾ ಮಲ್ಲಿಕಾರ್ಜುನ
Byshukradeshenews Posted on October 5, 2023
Editor m rajappa vyasagondanahalli
By shukradeshenews Kannada | online news portal |Kannada news online
By shukradeshenews | published on October 5
COMMENTS
ಹರಪನಹಳ್ಳಿ, ಅ.೦5: ನಾನು ಕಾಂಗ್ರೆಸ್ (Congress) ಶಾಸಕಿಯಲ್ಲ, ಸರ್ಕಾರದ ಪ್ರತಿನಿಧಿ. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸದಸ್ಯತ್ವ ಪಡೆದಿಲ್ಲ ಎಂದು ವಿಜಯನಗರ ಜಿಲ್ಲೆಯ ಹರಪನಹಳ್ಳಿ ಕ್ಷೇತ್ರದ ಶಾಸಕಿ, ಲತಾ ಮಲ್ಲಿಕಾರ್ಜುನ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಕ್ಷೇತ್ರದ ನಿಟ್ಟೂರು ಗ್ರಾಮದಲ್ಲಿ ಕುಡಿಯುವ ನೀರಿನ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ ಜೊತೆ ವೇದಿಕೆ ಹಂಚಿಕೊಂಡಿದ್ದ ಶಾಸಕಿ ಲತಾ ಮಲ್ಲಿಕಾರ್ಜುನ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ಸಿನಲ್ಲಿ ಲಿಂಗಾಯತರಿಗೆ ಸೂಕ್ತ ಸ್ಥಾನವಿಲ್ಲ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆ ಬೆನ್ನಲ್ಲೇ, ಶಾಸಕಿ ಲತಾ ಮಲ್ಲಿಕಾರ್ಜುನ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ವಂಚಿತಗೊಂಡು ತನ್ನ ಶಕ್ತಿಬಲದಿಂದ ಪಕ್ಷೇತರವಾಗಿ ಗೆದ್ದಿರುವ ಲತಾ ಮಲ್ಲಿಕಾರ್ಜುನ, ಸರ್ಕಾರ ರಚನೆಯಾಗುವ ಸಂದರ್ಭದಲ್ಲಿ ಕಾಂಗ್ರೆಸ್ ಸೇರಿ ವಿಪ್ ಕೂಡ ಪಡೆದು ಮತ ಚಲಾಯಿಸಿದ್ದರು.ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಪುತ್ರಿ ಅನ್ನುವ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಶಾಸಕಿ ಲತಾ ಮಲ್ಲಿಕಾರ್ಜುನರನ್ನು ಅತ್ಯಂತ ವಿಶ್ವಾಸದಿಂದ ನಡೆಸಿಕೊಳ್ಳುತ್ತಿದ್ದರು. ಎಂದು ಹೇಳಿದ್ದಾರೆ.