ಕೇಂದ್ರ ಅಧ್ಯಯನ ತಂಡದೊಂದಿಗೆ ಶಾಸಕ.ಬಿ.ದೇವೇಂದ್ರಪ್ಪ ಜಮೀನುಗಳಿಗೆ ಬೇಟಿ ಬರಪರಿಸ್ಥಿತಿ ಬಗ್ಗೆ ಮನವರಿಕೆ ಮಾಡಿಕೊಟ್ಟರು
Editor m rajappa vyasagondanahalli
By shukradeshenews Kannada | online news portal |Kannada news online
By shukradeshenews | published on October 7
ಜಗಳೂರು ಸುದ್ದಿ:ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ತಾಲೂಕಿನ ಹಿರೇಮಲ್ಲನಹೊಳೆ ಕೆರೆ ಹಾಗೂ ಶೇಂಗಾ ಬೆಳೆ ,ಭರಮಸಮುದ್ರ ಬಳಿ ಮೆಕ್ಕೆಜೋಳ,ಜಮೀನುಗಳಿಗೆ ಭೇಟಿ ನೀಡಿ,ಬೆಳೆ ವೀಕ್ಷಸಿ
ಶಾಸಕ ಬಿ.ದೆವೇಂದ್ರಪ್ಪ ನಂತರ ಮಾತನಾಡಿ,ರಾಜ್ಯದ 224 ಕ್ಷೇತ್ರಗಳಲ್ಲಿ ಜಗಳೂರು ತಾಲೂಕು ನಂಜುಂಡಪ್ಪ ವರದಿ ಪ್ರಕಾರ ಅತ್ಯಂತ ಹಿಂದುಳಿದ ತಾಲೂಕಾಗಿದೆ. ಸ್ವಾತಂತ್ರ್ಯ ನಂತರ ಕೇವಲ ನಾಲ್ಕು ವರ್ಷ ಮಾತ್ರ ಮಳೆ ಬೆಳೆ ಫಸಲು ಚೆನ್ನಾಗಿದೆ.ಸಾಗುವಳಿ ನಂತರ ಬೆಳೆಗಳ ಸಾಲಿನಲ್ಲಿ ಕನಿಷ್ಠ 30 ಮಿ.ಮೀ ಮಳೆಯಿಲ್ಲದೆ ಸಸಿಗಳು ಮಣ್ಣಿನ ಸಮತೋಲನವಾಗಿದೆ.ಮಣ್ಣು ಹೆಪ್ಪುಗಟ್ಟಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸರ್ಕಾರದ ಮಾರ್ಗಸೂಚಿಯನ್ವಯ ಜಿಲ್ಲೆಯ ಬರಪರಿಸ್ಥಿತಿಯ ವಾಸ್ತವ ಸ್ಥಿತಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಕೇಂದ್ರ ಬರ ಅಧ್ಯಯನ ಮೂರನೇ ತಂಡದ ನೇತೃತ್ವವಹಿಸಿರುವ ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್ ಹೇಳಿದರು.
ಈಗಾಗಲೇ ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಬರ ಅಧ್ಯಯನ ಕಾರ್ಯಕೈಗೊಂಡು, ಶನಿವಾರ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ, ಬರ ಪರಿಸ್ಥಿತಿಯ ಅಧ್ಯಯನ ಮಾಡಲಾಗುತ್ತಿದೆ. ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ರೈತರೊಂದಿಗೆ ಸಂವಾದ ನಡೆಸಿ, ಮಾಹಿತಿ ಪಡೆಯಲಾಗುತ್ತಿದೆ. ಇದರ ಜೊತೆಗೆ ಜಿಲ್ಲಾಡಳಿತವು ಸಹ ಬರದ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದೆ ಎಂದು ತಿಳಿಸಿದ ಅವರು, ಜಿಲ್ಲೆಯ ವಾಸ್ತವ ಸ್ಥಿತಿಯ ವರದಿಯನ್ನು ರಾಜ್ಯದ ಬರ ಅಧ್ಯಯನ ತಂಡದ ನೇತೃತ್ವ ವಹಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ಅವರಿಗೆ ಸಲ್ಲಿಸಲಾಗುವುದು, ಬಳಿಕ ರಾಜ್ಯದ ಸಂಗ್ರಹಿತ ಕ್ರೋಢೀಕೃತ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ
ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ ಇಟ್ನಾಳ್, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್,ಉಪನಿರ್ದೇಶಕ ಶ್ರೀನಿವಾಸ್,ತೋಟಗಾರಿಕೆ ಇಲಾಖೆ ಎಕ್ಸೂಟಿವ್ ಇಂಜಿನಿಯರ್ ರವೀಂದ್ರ ನಾಯ್ಕ್,
ಎಡಿ ತೋಟಯ್ಯ,ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಿಥುನ್ ಕಿಮಾವತ್,ಸಿಪಿಐ ಶ್ರೀನಿವಾಸ್ ರಾವ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ
ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.