Editor m rajappa vyasagondanahalli

By shukradeshenews Kannada | online news portal |Kannada news online   

By shukradeshenews | published on October 16

ಕಿತ್ತೂರು ರಾಣಿ ಚನ್ನಮ್ಮ ಹಾಗೂ ಮಹರ್ಷಿ ವಾಲ್ಮೀಕಿ ಜಯಂತಿಗಳ ಆಚರಣೆ ಅರ್ಥಪೂರ್ಣವಾಗಿ ಆಚರಿಸಲು ತಾಲ್ಲೂಕು ಆಡಳಿತ ಸಜ್ಜಾಗಲಿದ್ದೆ ಎಂದು ತಹಶೀಲ್ದಾರ್ ಸೈಯದ್ ಖಲಿಮ್ ಉಲ್  ತಿಳಿಸಿದರು 

ಪಟ್ಟಣದ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಕಿತ್ತೂರುರಾಣಿ ಚನ್ನಮ್ಮ ಜಯಂತಿ ಹಾಗೂ ಮಹರ್ಷಿ ವಾಲ್ಮೀಕಿ ಇವೆರಡು ಜಯಂತಿ ಆಚರಣೆ ಮಾಡುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಸೋಮವಾರ  ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು ಒಳಗೊಂಡಂತೆ ವಿವಿಧ ಸಮುದಾಯದವರೊಂದಿಗೆ

 ಪೂರ್ವಭಾವಿ ಸಭೆ ಕರೆಯಲಾಗಿತ್ತು .

ಸಭೆಯನ್ನುದ್ದೆಶಿಸಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಹಾಗೂ ತಹಶೀಲ್ದಾರ್  ರವರು ಮಾತನಾಡಿದರು ಪ್ರತಿ ವರ್ಷದಂತೆ ಈ ಬಾರಿ ತಾಲ್ಲೂಕಿನಲ್ಲಿ ದಿ.ಅಕ್ಟೋಬರ್ .23 ರಂದು ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ದಿ.28 ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆಗೆ ತಮಗೆ ನೀಡಿದ ಜವಾಬ್ದಾರಿಯನ್ನು ನಿರ್ವಹಿಸುವಂತೆ ಸೂಚನೆ ನೀಡಿದರು.

ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಎರಡು ಜಯಂತಿ ಆಚರಣೆ ವೇಳೆ ತಾಲ್ಲೂಕು ಮಟ್ಟದ ಅಧಿಕಾರಿಗಳು  ಜನಪ್ರತಿನಿಧಿಗಳು ಸೇರಿದಂತೆ ಸಾರ್ವಜನಿಕರು ಭಾಗವಹಿ ಕಾರ್ಯಕ್ರಮವನ್ನ ಯಶಸ್ವಿಗೋಳಿಸುವಂತೆ ತಿಳಿಸಿದರು

ಈ ಸಂದರ್ಭದಲ್ಲಿ ಪಪಂ ಸದಸ್ಯ ಲುಖ್ಮನ್ ಖಾನ್ . ನಾಯಕ ಸಮಾಜದ ಮಾಜಿ ಕಾರ್ಯಧರ್ಶಿ. ನಾಯಕ ಸಮಾಜದ ಅಧ್ಯಕ್ಷರಾದ ಬಡಪ್ಪ.ದಸಂಸ ಸಂಚಾಲಕ ಕುಬೇರಪ್ಪ. ಮುಖಂಡ ಗೌರಿಪುರ ಸತ್ಯಮೂರ್ತಿ.ಹಿರಿಯನಾಗರಿಕರ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ.ನಿವೃತ್ತ ಸಮಾಜ ಕಲ್ಯಾಣ ಅಧಿಕಾರಿ ಮಹೇಶ್. ದಲಿತ ಸಂಘಟನೆಗಳ ಒಕ್ಕೂಟದ ಅದ್ಯಕ್ಷ ಎಂ ರಾಜಪ್ಪ ವ್ಯಾಸಗೊಂಡನಹಳ್ಳಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಹಾಜರಿದ್ದರು.

Leave a Reply

Your email address will not be published. Required fields are marked *

You missed

error: Content is protected !!