ಚಿತ್ರದುರ್ಗ: ನಗರದ ಪ್ರತಿಷ್ಠಿತ ಮುರುಘಾ ಮಠದ ಸ್ವಾಮಿ ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಜಾಮೀನು ಪಡೆದು ಜೈಲಿನಿಂದ ಬಿಡುಗಡೆ

Editor m rajappa vyasagondanahalli

By shukradeshenews Kannada | online news portal |Kannada news online   

By shukradeshenews | published on ನವೆಂಬರ್ ೧೬

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿ ಶರಣರು ಇಂದು  ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಶ್ರೀಗಳ ವಿರುದ್ಧ ಎರಡು ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಕಳೆದ ವರ್ಷದ ಡಿಸೆಂಬರ್​ನಿಂದ ಶ್ರೀಗಳು ಚಿತ್ರದುರ್ಗಾ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು.11 ಲೈಂಗಿಕ ದೌರ್ಜನ್ಯ ಪೋಕ್ಸ್ ಪ್ರಕರಣದಡಿ  ಕಳೆದ 14‌ತಿಂಗಳು ಜೈಲು ಸೇರಿ ನ್ಯಾಯಾಂಗ ಬಂದನಲ್ಲಿದ್ದ ಮುರಾಘಶ್ರೀ ಬಿಡುಗಡೆ   

ಕೋರ್ಟ್ ಜಾಮೀನಲ್ಲಿ ಬಿಡುಗಡೆ ಆಗಿರುವ ಮುರುಘಾ ಶರಣರಿಗೆ ಕೋರ್ಟ್ ವಿಧಿಸಿದ 7 ಷರತ್ತುಗಳೇನು?

ಇಡೀ ದೇಶ ಮತ್ತು ರಾಜ್ಯದ ಗಮನ ಸೆಳೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಶರಣರು ಗುರುವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.  ಶ್ರೀಗಳು ನೇರವಾಗಿ ದಾವಣಗೆರೆಯ ಶಾಖಾ ಮಠದ ಶಿವಯೋಗಿ ಮಂದಿರಕ್ಕೆ ತೆರಳಿ ಗದ್ದುಗೆಯ ದರ್ಶನ ಪಡೆದಿದ್ದಾರೆ. 

. ಒಟ್ಟಾರೆಯಾಗಿ ಮುರುಘಾ ಶರಣರು 14 ತಿಂಗಳ ಕಾಲ ಜೈಲುವಾಸ ಅನುಭವಿಸಿ ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ದು, ನೇರವಾಗಿ ದಾವಣಗೆರೆಗೆ ತೆರಳಿದರು. ಶಾಖಾ ಮಠದ ಶಿವಯೋಗಿ ಮಂದಿರಕ್ಕೆ ತೆರಳಿ ಗದ್ದಿಗೆಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಲು ನಿರಾಕರಿಸಿದರು ಎನು ಮಾತನಾಡೋಲ್ಲ, ನಮ್ಮ ವಕೀಲರ ಈ ಕೇಸಿನ ಬಗ್ಗೆ ನಿಮ್ಮಗೆ ಮಾಹಿತಿಯನ್ನು ನೀಡುತ್ತಾರೆ. ಮುಂದಿನ ದಿನಗಳಲ್ಲಿ ಎಲ್ಲದಕ್ಕೂ ಉತ್ತರ ನೀಡುತ್ತೇವೆ ಎಂದು ತಿಳಿಸಿದರು.

ಇತ್ತೀಚೆಗೆ ಜಾಮೀನು ನೀಡಿದ್ದ ಹೈಕೋರ್ಟ್

ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ರಾಜೇಂದ್ರ ಮಠದ ಡಾ. ಶಿವಮೂರ್ತಿ ಶರಣರಿಗೆ ಹೈಕೋರ್ಟ್ ಒಂದು ಪ್ರಕರಣದಲ್ಲಿ ಇತ್ತೀಚೆಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ, ಮತ್ತೊಂದು ಪ್ರಕರಣದಿಂದ ಜಾಮೀನು ಲಭ್ಯವಾಗವೇಕಾಗಿದ್ದ ಪರಿಣಾಮ ಜೈಲಿನಿಂದ ಬಿಡುಗಡೆ ಆಗುವುದಕ್ಕೆ ಸಾಧ್ಯವಾಗಿರಲಿಲ್ಲ. ಇದೀಗ ಮತ್ತೊಂದು ಪ್ರಕರಣದಲ್ಲೂ ಜಾಮೀನು ಸಿಕ್ಕಿದೆ.

ಕೋರ್ಟ್ ಷರತ್ತುಗಳಿವು…

ಮುರುಘಾ ಶರಣರಿಗೆ ಹೈಕೋರ್ಟ್ ಏಳು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ. ಅವುಗಳೆಂದರೆ

ನ್ಯಾಯಾಲಯ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಬೇಕು.

ಯಾವುದೇ ಕಾರಣಕ್ಕೂ ಸಾಕ್ಷ್ಯ ನಾಶ ಮಾಡುವಂತಿಲ್ಲ.

ಜಾಮೀನು ಪಡೆಯುವ ಮೊದಲು ಇಬ್ಬರ ಶ್ಯೂರಿಟಿ ನೀಡಬೇಕು.

ವಿದೇಶಕ್ಕೆ ಹೋಗದಂತೆ ಪಾಸ್ ಪೋರ್ಟ್ ಸರೆಂಡರ್ ಮಾಡಬೇಕು.

2 ಲಕ್ಷ ರೂ. ಬೆಲೆಬಾಳುವ ಬೇಲ್ ಬಾಂಡ್ ನೀಡಬೇಕು.

ವಿಚಾರಣಾ ನ್ಯಾಯಾಲಯ ಹೈಕೋರ್ಟ್ ನ ಜಾಮೀನು ಅರ್ಜಿ ಆದೇಶ ಮೇಲೆ ಪ್ರಭಾವಗೊಳ್ಳಬಾರದು.

ಇದೇ ರೀತಿ ಅಪರಾಧವಾದ ಎಸಗುವಂತಿಲ್ಲ.

ಲೈಂಗಿಕ ದೌರ್ಜನ್ಯ ಕೇಸ್‌ ಆರೋಪಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗೆ ಹೈಕೋರ್ಟ್‌ ಜಾಮೀನು! ಜೈಲಿಂದ ಬಿಡುಗಡೆ?ಪ್ರಕರಣದ ಹಿನ್ನೆಲೆ ಮುರುಘಾ ಮಠದ ಅಪ್ರಾಪ್ತ ವಯಸ್ಸಿನ ಬಾಲಕಿಯರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಮೈಸೂರಿನ ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ಸೇರಿ ಐವರ ವಿರುದ್ಧ 2022ರ ಆಗಸ್ಟ್ 26ರಂದು ದೂರು ದಾಖಲಿಸಿದ್ದರು. ಆನಂತರ ಅದನ್ನು ವ್ಯಾಪ್ತಿ ಹೊಂದಿರುವ ಚಿತ್ರದುರ್ಗದ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿತ್ತು. ಶರಣರನ್ನು 2022ರ ಸೆಪ್ಟೆಂಬರ್ 1ರಂದು ಬಂಧಿಸಲಾಗಿತ್ತು.

ಈ ನಡುವೆ ಶ್ರೀಗಳ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯಿದೆ ಸೆಕ್ಷನ್‌ಗಳಾದ 17, 5(L), 6, ಐಪಿಸಿ ಸೆಕ್ಷನ್‌ಗಳಾದ 376(2)(ಎನ್), 376(ಡಿಎ), 376(3), 201, 202, 506 ಜೊತೆಗೆ 34, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯಿದೆ ಸೆಕ್ಷನ್ 3(ಎಫ್) ಮತ್ತು 7 ಹಾಗೂ ಬಾಲ ನ್ಯಾಯ (ಮಕ್ಕಳ ರಕ್ಷಣೆ ಮತ್ತು ಆರೈಕೆ) ಸೆಕ್ಷನ್ 75ರ ಅಡಿ ಚಿತ್ರದುರ್ಗದ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ. ಇದರಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಪೋಕ್ಸೋ ಕಾಯಿದೆ 17,5(1),6, ಐಪಿಸಿ ಸೆಕ್ಷನ್‌ಗಳಾದ 376(2)(ಎನ್), 376(ಡಿಎ), 376(3), 201, 202, 506 ಜೊತೆಗೆ 34, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಗಳ ಮೇಲಿನ ದೌರ್ಜನ್ಯ ನಿಷೇಧ ಕಾಯಿದೆ ಸೆಕ್ಷನ್‌ಗಳಾದ 3(1)(ಡಬ್ಲ್ಯು)(i)(ii), 3(20(v)(va), ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯಿದೆ ಸೆಕ್ಷನ್ 3(ಎಫ್) ಮತ್ತು 7 ಹಾಗೂ ಬಾಲ ನ್ಯಾಯ (ಮಕ್ಕಳ ರಕ್ಷಣೆ ಮತ್ತು ಆರೈಕೆ) ಸೆಕ್ಷನ್ 75ರ ಅಡಿ ಚಿತ್ರದುರ್ಗದ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಮತ್ತೊಂದು ಪ್ರಕರಣದಲ್ಲಿಯೂ ಜಾಮೀನು ಮಂಜೂರಾಗಿದೆ.

ಲೈಂಗಿಕ ದೌರ್ಜನ್ಯ ಕೇಸ್‌ ಆರೋಪಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗೆ ಹೈಕೋರ್ಟ್‌ ಜಾಮೀನು! ಜೈಲಿಂದ ಬಿಡುಗಡೆ?

Leave a Reply

Your email address will not be published. Required fields are marked *

You missed

error: Content is protected !!