ಇಹಲೋಕ ತ್ಯಜಿಸಿದ ಕಲಾಸರಸ್ವತಿ ಮೇರುನಟಿ ಲೀಲಾವತಿ
ಕನ್ನಡದ ಕಲಾಸರಸ್ವತಿ ಲೀಲಾವತಿ ಇನ್ನಿಲ್ಲ. ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಮೇರುನಟಿ ಶುಕ್ರವಾರ (ಡಿಸೆಂಬರ್ 8) ಸಂಜೆ ನೆಲಮಂಗಲದ ತೋಟದ ಮನೆಯಲ್ಲಿ ಕೊನೆಯುಸಿರೆಳೆದರು.
Editor m rajappa vyasagondanahalli
By shukradeshenews Kannada | online news portal |Kannada news online
By shukradeshenews | published on ಡಿಸೆಂಬರ್ 8
ಬೆಂಗಳೂರು: ಕನ್ನಡದ ಕಲಾಸರಸ್ವತಿ ಲೀಲಾವತಿ ಇನ್ನಿಲ್ಲ. ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಮೇರುನಟಿ ಶುಕ್ರವಾರ (ಡಿಸೆಂಬರ್ 8) ಸಂಜೆ ನೆಲಮಂಗಲದ ತೋಟದ ಮನೆಯಲ್ಲಿ ಕೊನೆಯುಸಿರೆಳೆದರು.
86 ವರ್ಷಗಳ ಸುದೀರ್ಘ ಜೀವನದಲ್ಲಿ ಹೋರಾಟದ ಕೆಚ್ಚಿನಿಂದಲೇ ಬದುಕಿನದ ಅವರು ಕೆಲವು ತಿಂಗಳಿಂದ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು. ನೆಲಮಂಗಲದ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದ ಅವರಿಗೆ ಶುಕ್ರವಾರ ಸಂಜೆ ಆರೋಗ್ಯ ತೀವ್ರವಾಗಿ ಕೈಕೊಟ್ಟಿತು.
600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅಪಾರ ಖ್ಯಾತಿ ಗಳಿಸಿದ್ದ ಲೀಲಾವತಿ ನಿಧನಕ್ಕೆ ಅಭಿಮಾನಿಗಳು, ಸೆಲೆಬ್ರಿಟಿಗಳು, ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ನಟನೆ ಮಾತ್ರವಲ್ಲದೇ ಸಾಮಾಜಿಕ ಕೆಲಸಗಳ ಮೂಲಕವೂ ಲೀಲಾವತಿ ಗುರುತಿಸಿಕೊಂಡಿದ್ದರು. ಪುತ್ರ ವಿನೋದ್ ರಾಜ್ ಅವರನ್ನು ಲೀಲಾವತಿ ಅಗಲಿದ್ದಾರೆ.
ನಟಿ ಲೀಲಾವತಿ ಅವರು ನೆಲಮಂಗಲದ ಸೋಲದೇವನಹಳ್ಳಿ ಬಳಿ ಪುತ್ರ ವಿನೋದ್ ರಾಜ್ ಜೊತೆ ವಾಸವಾಗಿದ್ದರು. ಸಿನಿಮಾದಿಂದ ದೂರ ಉಳಿದುಕೊಂಡಿದ್ದ ಅವರು ಕೃಷಿ ಕೆಲಸದಲ್ಲಿ ತೊಡಗಿಕೊಂಡಿದ್ದರು. ವಿನೋದ್ ರಾಜ್ ಕೂಡ ಕೃಷಿ ಕೆಲಸ ಮಾಡುತ್ತಿದ್ದಾರೆ. ಲೀಲಾವತಿ ಅವರ ಅನಾರೋಗ್ಯದ ವಿಷಯ ತಿಳಿದ ಬಳಿಕ ಕನ್ನಡ ಚಿತ್ರರಂಗದ ಅನೇಕರು ಸೋಲದೇವನಹಳ್ಳಿಗೆ ಬಂದು ಆರೋಗ್ಯ ವಿಚಾರಿಸಿದ್ದರು. ಶಿವರಾಜ್ಕುಮಾರ್, ಗೀತಾ ಶಿವರಾಜ್ಕುಮಾರ್, ದರ್ಶನ್, ಅಭಿಷೇಕ್ ಅಂಬರೀಷ್, ಅರ್ಜುನ್ ಸರ್ಜಾ, ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕರು ಬಂದು ವಿನೋದ್ ರಾಜ್ಗೆ ಧೈರ್ಯ ತುಂಬಿದ್ದರು.
ಲೀಲಾವತಿ ಅವರು ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರೂ ಕೂಡ ಸಿನಿಮಾ ಕಲಾವಿದರ ಬಗ್ಗೆ ಕಾಳಜಿ ಹೊಂದಿದ್ದರು. ಅನೇಕ ಕಲಾವಿದರಿಗೆ ಮಾಸಾಶನ ಸಿಗುವಂತೆ ಮಾಡಿದ್ದರು. ಪ್ರಾಣಿಗಳ ಬಗ್ಗೆ ಅವರಿಗೆ ಅಪಾರ ಪ್ರೀತಿ ಇತ್ತು. ಅದೇ ಕಾರಣಕ್ಕಾಗಿ ಅವರು ಸ್ವಂತ ಹಣದಲ್ಲಿ ಸೋಲದೇವನಹಳ್ಳಿ ಬಳಿ ಪಶು ಆಸ್ಪತ್ರೆ ನಿರ್ಮಿಸಿದ್ದರು. ಆ ಆಸ್ಪತ್ರೆ ಉದ್ಘಾಟನೆ ಆದ ಕೆಲವೇ ದಿನಗಳ ಬಳಿಕ ಅವರು ಇಹಲೋಕ ತ್ಯಜಿಸಿದ್ದಾರೆ.
ಅಮ್ಮನ ನೋವಿನಲ್ಲೇ ಕುಸಿದು ಬಿದ್ದ ವಿನೋದ್ ರಾಜ್
ಸಾಂಡಲ್ ವುಡ್
ಅಮ್ಮನ ನೋವಿನಲ್ಲೇ ಕುಸಿದು ಬಿದ್ದ ವಿನೋದ್ ರಾಜ್
ಕನ್ನಡ ಚಲನಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಿಧಿವಶರಾಗಿದ್ದಾರೆ. ನೆಲಮಂಗಲದ ತೋಟದ ಮನೆಯಲ್ಲಿ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಇದೀಗ ವಿಧಿವಶರಾದರು