Editor m rajappa vyasagondanahalli

By shukradeshenews Kannada | online news portal |Kannada news online   

By shukradeshenews | published on January 20

ಸುದ್ದಿ ಜಗಳೂರು

ಜ.26 ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆ

ಜಗಳೂರು ಸುದ್ದಿ:ಪಟ್ಟಣದ ತಾಲೂಕು ಕಛೇರಿ ಸಭಾಂಗಣದಲ್ಲಿ ಜನವರಿ 26 ಗಣರಾಜ್ಯೋತ್ಸವದ ಪೂರ್ವಭಾವಿ ಸಭೆ ನಡೆಸಲಾಯಿತು.

ಈ ವೇಳೆ ತಹಶೀಲ್ದಾರ್ ಸಯ್ಯದ್ ಕಲೀಂ ಉಲ್ಲಾ ಮಾತನಾಡಿ,ಜನೆವರಿ 26 ರ ಬೆಳಿಗ್ಗೆ ಅಂಬೇಡ್ಕರ್ ವೃತ್ತದಿಂದ ಬಯಲು ರಂಗಮಂದಿರದವರೆಗೆ ಮೆರವಣಿಗೆ ನಂತರ ಧ್ವಜಾರೋಹಣ,ವೇದಿಕೆ ಕಾರ್ಯಕ್ರಮವಿರುತ್ತದೆ.ಅಧಿಕಾರಿಗಳು ಗೈರಾಗದೆ ಆಯಾ ಕಛೇರಿಗಳಲ್ಲಿ ಕಡ್ಡಾಯವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಸಿ ನಂತರ ವೇದಿಕೆ ಕಾರ್ಯಕ್ರಮಕ್ಕೆ ಭಾಗವಹಿಸಬೇಕು.ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.

ಸಂದರ್ಭದಲ್ಲಿ ತಾ.ಪಂ‌.ಇಓ ಕರಿಬಸಪ್ಪ,ಸಮಾಜಕಲ್ಯಾಣ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಬಿ.ಮಹೇಶ್ವರಪ್ಪ,ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಿಥುನ್ ಕಿಮಾವತ್,ಬಿಸಿಎಂ ಇಲಾಖೆಯ ಅಸ್ಮಾ,ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ತೋಟದಯ್ಯ,ಸೇರಿದಂತೆ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You missed

error: Content is protected !!