ವಿವಿಧ ಕಟ್ಟಡ ಕಾಮಗಾರಿಗಳಿಗೆ ಶಾಸಕ ಬಿ.ದೇವೇಂದ್ರಪ್ಪ ಭೂಮಿ ಪೂಜೆ
ಜಗಳೂರು ಸುದ್ದಿ:ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಶಾಸಕ.ಬಿ.ದೇವೇಂದ್ರಪ್ಪ ತಿಳಿಸಿರು.
ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಹೆಚ್ಚುವರಿ ಕಟ್ಟಡ ಹಾಗೂ ಕೆಇಬಿ ಇಲಾಖೆ ನೂತನ ಕಟ್ಟಡಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಕೊಠಡಿಗಳ ಅವಶ್ಯಕತೆಯಿದೆ.ಅಲ್ಲದೆ ಗ್ರಂಥಾಲಯ,ಕಂಪ್ಯೂಟರ್ ಲ್ಯಾಬ್ ಗೆ ₹75 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೂರು ಹೊಸ ಕೊಠಡಿಗಳು ಅನುಕೂಲವಾಗಲಿವೆ.ಹಂತ ಹಂತವಾಗಿ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು ಎಂದರು.
ಕೆಇಬಿ ಇಲಾಖೆ ಉಪವಿಭಾಗ ಕಛೇರಿಯ ಹಳೇ ಕಟ್ಟಡ ಕಿಷ್ಕಿಂದೆಯಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕಿತ್ತು.
ಆದ್ದರಿಂದ ಹಳೇ ಕಟ್ಟಡವನ್ನು ತೆರವುಗೊಳಿಸಿ ₹85,51,872 ಲಕ್ಷ ವೆಚ್ಚದಲ್ಲಿ ನೂತನ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಸಂದರ್ಭದಲ್ಲಿ ಗುತ್ತಿಗೆದಾರರಾದ ಸಿ.ಪರುಶರಾಮ್,ಕುಮಾರ್,ಕೆಪಿಸಿಸಿ ಎಸ್ ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ,ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಟೇಲ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್,ಮುಖಂಡರಾದ ಪಲ್ಲಾಗಟ್ಟೆ ಶೇಖರಪ್ಪ,ಗೌಸ್ ಪೀರ್,ಮಾಳಮ್ಮನಹಳ್ಳಿ ವೆಂಕಟೇಶ್,ಕೆಇಬಿ ಎಇಇ ಸುಧಾಮಣಿ,ಪ್ರಾಂಶುಪಾಲ ಜಗದೀಶ್,ಬಿಆರ್ ಸಿ ಡಿಡಿ ಹಾಲಪ್ಪ ಸೇರಿದಂತೆ ಇದ್ದರು.