ರಾಜ್ಯ ಸುದ್ದಿ ಬೆಂಗಳೂರು
ನಿವೃತ್ತ ಐಎಎಸ್ ಅಧಿಕಾರಿ ‘ಬಾ ನಲ್ಲೆ ಮಧುಚಂದ್ರಕೆ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿರುವ ಕೆ.ಶಿವರಾಮ್ (K.Shivaram) ಇನ್ನಿಲ್ಲ . ಅನಾರೋಗ್ಯದಿಂದಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಇಹ್ಯಲೋಕ ತ್ಯಜಿಸಿದ್ದಾರೆ ಎಂದು ಅವರ ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.
Editor m rajappa vyasagondanahalli
By shukradeshenews Kannada | online news portal |Kannada news online
By shukradeshenews | published on ಪ್ರೇಬ್ರವರಿ 29
ಭಾರತದಲ್ಲೇ ಪ್ರಥಮ ಬಾರಿಗೆ ಕನ್ನಡದಲ್ಲಿ ಐ ಎ ಎಸ್ ಮಾಡಿದ ನಿವೃತ್ತ ಐ ಎ.ಎಸ್ ಅಧಿಕಾರಿ,ಎಂಬ ಹೆಗ್ಗಳಿಕೆ ಪಾತ್ರರಾಗಿದ್ದರು.
ಅನೇಕ ಸಿನಿಮಾಗಳಲ್ಲಿ ನಟ ನಾಯಕನಾಗಿ ಅಭಿನಯಿಸಿದ ಕೆ ಶಿವರಾಮ ನಟನಲ್ಲದೆ ಪ್ರಸ್ತುತದಲ್ಲಿ ರಾಜಕೀಯ ಕ್ಷೇತ್ರದಲ್ಲೂ ಸಹ ಕಾಣಿಸಿಕೊಂಡಿದ್ದರು ‘ಬಾ ನಲ್ಲೆ ಮಧುಚಂದ್ರಕೆ’, ವಸಂತ ಕಾವ್ಯದಂತಹ ಚಿತ್ರಗಳಲ್ಲಿ ನಾಯಕರಾಗಿ ನಟಿಸಿದ್ದಾರೆ. ಸಾಂಗ್ಲಿಯಾನ 3 ಚಿತ್ರದಲ್ಲಿ ಇವರದ್ದು ಖಳನಾಯಕನ ಪಾತ್ರ. ಹತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಶಿವರಾಮ್, ತಮ್ಮ ಮಗಳನ್ನು ನಟ ಪ್ರದೀಪ್ ಅವರಿಗೆ ಧಾರೆಯರೆದಿದ್ದರು.
ನಿನ್ನೆ ಸಂಜೆ ನನ್ನ ಅನುಗಾಲದ ಗೆಳೆಯ ಅರದೇಶಹಳ್ಳಿ ವೆಂಕಟೇಶ್ ಕೆ. ಶಿವರಾಂ ಅವರು ಸೀರಿಯಸ್ಸಾಗಿದ್ದಾರೆ. ಹೆ಼ಚ್. ಸಿ. ಜಿ ಆಸ್ಪತ್ರೆಯಲ್ಲಿದ್ದಾರೆ ಎಂದರು. ಕೂಡಲೇ ನನ್ನ ಹಿರಿಯಣ್ಣ ಡಾ. ಸ್ವಾಮಿ ಅವರಿಗೆ ಫೋನ್ ಮಾಡಿದೆ. ಅವರ ವೈಧ್ಯಕೀಯ ಭಾಷೆ ನನಗೆ ಅರ್ಥವಾಯಿತು. ವೆಂಕಟೇಶ್ ಅವರಿಗೆ ಹೋಪ್ಸ್ ಇಲ್ಲವೆಂದು ಹೇಳಿದೆ. ಇಂದು ಬೆಳಿಗ್ಗೆ ಅವರು ಇನ್ನಿಲ್ಲವೆಂಬ ಸುದ್ಧಿ ಹೊರಬಿದ್ದಿದೆ. ಕೇವಲ ಹತ್ತನ್ನೆರಡು ಗಂಟೆಗಳ ಹಿಂದಿನ ಸೀರಿಯಸ್ ಎಂಬ ಸುದ್ದಿ ಮಲಗಿ ಏಳುವಷ್ಟರಲ್ಲಿ ‘ಇನ್ನಿಲ್ಲ’ ಎಂದಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ತಿಳಿಸಿದ್ದಾರೆ.
ಅಂದಹಾಗೇ ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಹಾಗೂ ‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂತಹ ಅವರು ಇಂದು ಚಿಕಿತ್ಸೆ ಫಲಿಸದೇ ಇನ್ನಿಲ್ಲವಾಗಿದ್ದಾರೆ.
ನಟ ಕೆ.ಶಿವರಾಮ್ ಪರಿಚಯ
ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯೊಂದರಲ್ಲಿ ಬಡ ಕುಟುಂಬದಲ್ಲಿ ಏಪ್ರಿಲ್ 6, 1953 ರಂದು ಜನಸಿದ ಕೆ. ಶಿವರಾಮು 1985 ರಲ್ಲಿ ಕೆಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದರು. ಆ ಬಳಿಕ ಕನ್ನಡ ಭಾಷೆಯಲ್ಲಿ ಐಎಎಸ್ ಪರೀಕ್ಷೆ ಬರೆದು, ತೇರ್ಗಡೆಯಾದ ಭಾರತದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
1993 ರಲ್ಲಿ ತೆರೆಗೆ ಬಂದ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕೆ.ಶಿವರಾಮ್ ಪ್ರವೇಶಿಸಿದ್ದರು. ‘ವಸಂತ ಕಾವ್ಯ’, ‘ಸಾಂಗ್ಲಿಯಾನಾ ಪಾರ್ಟ್ 3’, ‘ಪ್ರತಿಭಟನೆ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ಟೈಗರ್’ ಮುಂತಾದ ಕನ್ನಡ ಚಿತ್ರಗಳಲ್ಲಿ ಕೆ.ಶಿವರಾಮ್ ಅಭಿನಯಿಸಿದ್ದಾರೆ.
ರಾಜಕೀಯಕ್ಕೂ ಧುಮುಕ್ಕಿದ್ದ ಶಿವರಾಮ್
2013 ರಲ್ಲಿ ಐಎಎಸ್ ನಿಂದ ಸ್ವಯಂ ನಿವೃತ್ತಿ ಪಡೆದ ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು. ಕೆ.ಶಿವರಾಮ್, 2014 ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತರು. ನಂತರ ಅದೇ ವರ್ಷ ದಲಿತರಿಗೆ ಸಿ.ಎಂ ಪಟ್ಟ ಸಿಗಬೇಕೆಂದು ಪರಮೇಶ್ವರ್ ಬೆಂಬಲಿಸಿ ಕಾಂಗ್ರೆಸ್ ಸೇರಿದರು. ಆದರೆ ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಬಿಜೆಪಿ ಸೇರಿದರು. ಛಲವಾದಿ ಮಹಸಭಾ ಅಧ್ಯಕ್ಷರಾಗಿದ್ದರು. ದಲಿತ ಪರ ಹೋರಾಟಕ್ಕೆ ಹೆಸರುವಾಸಿಯಾಗಿದ್ದರು. ಇಂತಹ ಅವರು ಇಂದು ನಿಧರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.
ಚಿತ್ರ ನಟ ಕೆ. ಶಿವರಾಮ್ ರವರು ಇಂದು ನಮ್ಮನ್ನೆಲ ಬಿಟ್ಟು ಅಗಲಿದ್ದಾರೆ ಅವರ ಆಗಲಿಕೆ ಈ ನಾಡಿಗೆ ತುಂಬಲಾರದ ನಷ್ಠ ಅವರ ಆಪಾರ ಕುಟುಂಬ ಬಂಧು ಬಳಗ ಸ್ನೇಹಿತರ ವರ್ಗಕ್ಕೂ ಕುಟುಂಬ ವರ್ಗಕ್ಕೆ ದುಖಭರಿಸುವಂತ ಶಕ್ತಿ ನೀಡಲಿ
–