ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ನಿಧನಕ್ಕೆ ಮೇಣದಬತ್ತಿ ಹಚ್ಚಿ ಸಂತಾಪ

ಜಗಳೂರು ಸುದ್ದಿ:ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಕನ್ನಡ ಚಲನಚಿತ್ರ ನಟ ಕೆ.ಶಿವರಾಮ್ ಅವರ ನಿಧನಕ್ಕೆ ಮೇಣದ ಬತ್ತಿ ಹಚ್ಚಿ ಸಂತಾಪ ಸೂಚಿಸಲಾಯಿತು.

ಈ ವೇಳೆ ಸಮಾಜಕಲ್ಯಾಣ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಬಿ. ಮಹೇಶ್ವರಪ್ಪ ಮಾತನಾಡಿ,ಕೆ.ಶಿವರಾಮ್ ಅವರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಬಡವರಿಗೆ ಸೂರು ಕಲ್ಪಿಸಿದರು.ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ರೂಪಿಸಿದ ಮೊದಲ ಅಧಿಕಾರಿಯಾಗಿದ್ದರು.ಅಲ್ಲದೆ ಸಿನಿಮಾರಂಗದಲ್ಲಿ ಉತ್ತಮ ನಟನೆಯೊಂದಿಗೆ ಬಹುಮುಖ‌ಪ್ರತಿಭೆಯಾಗಿ ಹೊರಹೊಮ್ಮಿದರು.ಸಮಾಜಮುಖಿಯಾಗಿರುವ ಅಧಿಕಾರಿ ನಮ್ಮನ್ನು ಅಗಲಿರುವುದು ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಬೇಸರ ವ್ಯಕ್ತಪಡಿಸಿದರು.

ಬಿಜೆಪಿ ಮುಖಂಡ ಬಿಸ್ತುವಳ್ಳಿ ಬಾಬು ಮಾತನಾಡಿ,ಬಿಜೆಪಿ ಪಕ್ಷದಲ್ಲಿ ಸಂಘಟನೆಯೊಂದಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಬಳಿ ಗುರುತಿಸಿಕೊಂಡಿದ್ದ ಕೆ.ಶಿವರಾಮ್ ಅವರ ಅಕಾಲಿಕ ಮರಣ ನೋವು ತಂದಿದೆ ಎಂದರು.

ಸಂದರ್ಭದಲ್ಲಿ ಪ್ರಾಂಶುಪಾಲ ನಾಗಲಿಂಗಪ್ಪ,ಛಲವಾದಿ ಸಮಾಜದ ಗೌರವ ಅಧ್ಯಕ್ಷ ಸಿ.ಲಕ್ಷ್ಮಣ,ಮುಖಂಡರಾದ ಓಬಣ್ಣ,ರಾಜಪ್ಪ ವ್ಯಾಸಗೊಂಡನಹಳ್ಳಿ,ಬಿದರಕೆರೆ ರವಿಕುಮಾರ್,ಸತೀಶ್ ಮಲೆಮಾಚಿಕೆರೆ,ವಕೀಲರಾದ ಮರೇನಹಳ್ಳಿ ಬಸವರಾಜ್ ಸಣ್ಣ ಓಬಯ್ಯ,ಚಿಕ್ಕಮ್ಮನಹಟ್ಟಿ ಮಂಜಣ್ಣ,ಲೋಕೇಶ್,ಮಾದಿಹಳ್ಳಿ ಮಂಜುನಾಥ್,ನಾಗೇಶ್,ಗೌರಿಪುರ ಕುಬೇರಪ್ಪ,ಗಿರೀಶ್ ಸೇರಿದಂತೆ ಇದ್ದರು.

Leave a Reply

Your email address will not be published. Required fields are marked *

You missed

error: Content is protected !!