ಎಸ್‌.ಎಸ್‌.ಮಲ್ಲಿಕಾರ್ಜುನ್‌ ಪತ್ನಿ ಪ್ರಭಾ ಮಲ್ಲಿಕಾರ್ಜುನ್‌ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ .

Editor m rajappa vyasagondanahalli

By shukradeshenews Kannada | online news portal |Kannada news online   

By shukradeshenews | published on march 22 

: ಬಿಜೆಪಿ ಭದ್ರಕೋಟೆ ಛಿದ್ರ ಮಾಡಲು ಈ ಬಾರಿ ಎಐಸಿಸಿ ತಂತ್ರಗಾರಿಕೆ ರೂಪಿಸಲು ಹೊಸ ತಂತ್ರ. ಪ್ರತಿಷ್ಠೆಯಾಗಿ ಸ್ವೀಕರಿಸುವ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ದಾವಣಗೆರೆ ಜಿಲ್ಲೆಯಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸುವ ನಿಟ್ಟಿನಲ್ಲಿ ಅಳೆದು ತೂಗಿ ಪ್ರಭಾ ಮಲ್ಲಿಕಾರ್ಜುನ್‌ ಅವರಿಗೆ ಟಿಕೆಟ್ ನೀಡಿದೆ. ದಾವಣಗೆರೆ ಜಿಲ್ಲೆಯಾದಾಗಿನಿಂದಲೂ ಇದುವರೆಗೆ ಕಾಂಗ್ರೆಸ್‌ಗೆ ಲೋಕಸಭೆ ಚುನಾವಣೆಯಲ್ಲಿ ಗೆಲುವು ದಕ್ಕಿಲ್ಲ. ಈ ಬಾರಿ ಡಾ.ಪ್ರಭಾ ಮಲ್ಲಿಕಾರ್ಜುನ್ ಟಿಕೆಟ್‌ ನೀಡಿದ್ದು, ಈ ಮೂಲಕ ಕಾಂಗ್ರೆಸ್‌ ಗೆಲುವಿನ ಭರವಸೆಯಲ್ಲಿದೆ.

ಸಿಎಂ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ವಿನಯ್ ಕುಮಾರ್ ಪರ ಬಹುತೇಕ ಒಲವು ಇತ್ತು. ಸಿದ್ದರಾಮಯ್ಯ ಅವರು ಕೊಪ್ಪಳ, ಮೈಸೂರು ಹಾಗೂ ದಾವಣಗೆರೆಯಲ್ಲಿ ಕುರುಬ ಸಮುದಾಯದವರಿಗೆ ಟಿಕೆಟ್ ನೀಡಬೇಕು ಎಂಬ ಮನವಿಯನ್ನು ಹೈಕಮಾಂಡ್‌ಗೆ ಮಾಡಿದ್ದರು. ಇನ್ನು ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಅವರ ಹೆಸರು ಪ್ರಬಲವಾಗಿ ಕೇಳಿ ಬಂದಿತ್ತು.

ಗಮನ ಸೆಳೆದಿದ್ದ ಪ್ರಭಾ ಮಲ್ಲಿಕಾರ್ಜುನ್‌: ಸಮಾಜ ಸೇವೆ, ಆರೋಗ್ಯ ಶಿಬಿರ, ಉಚಿತ ತಪಾಸಣಾ ಶಿಬಿರ, ಕ್ಯಾನ್ಸರ್ ಬಗ್ಗೆ ಜಾಗೃತಿ, ಬಡವರಿಗೆ ಸಹಾಯ ಮಾಡುವ ಮೂಲಕ ಗಮನ ಸೆಳೆದಿರುವ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿತ್ತು. ಅದೇ ರೀತಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಕೆಲಸ ಮಾಡಿರುವ ಹಾಗೂ ಪಾದಯಾತ್ರೆ ಮೂಲಕ ಜಿಲ್ಲೆಯ ಜನರ ಮನೆಮಾತಾಗಿರುವ ವಿನಯ್ ಕುಮಾರ್ ಅವರ ಹೆಸರು ಸಹ ಅಷ್ಟೇ ಪ್ರಬಲವಾಗಿ ಕೇಳಿ ಬರತೊಡಗಿತ್ತು. ಆದರೆ ಕೊನೆಗೂ ಪ್ರಭಾ ಮಲ್ಲಿಕಾರ್ಜುನ್‌ ಅವರಿಗೆ ಟಿಕೆಟ್‌ ನೀಡಲಾಗಿದೆ.

ಚನ್ನಯ್ಯ ಒಡೆಯರ್ ಅವರು ಮೂರು ಬಾರಿ ದಾವಣಗೆರೆ ಜಿಲ್ಲೆಯಲ್ಲಿ ಸಂಸದರಾಗಿ ಆಯ್ಕೆಯಾಗಿದ್ದು ಬಿಟ್ಟರೆ, ಉಳಿದಂತೆ ಸಾದು ಲಿಂಗಾಯತ ಸಮಾಜದವರೇ ಸಂಸದರಾಗಿರುವುದು ವಿಶೇಷ. ಚಿತ್ರದುರ್ಗ-ದಾವಣಗೆರೆ ಲೋಕಸಭಾ ಕ್ಷೇತ್ರ ಇದ್ದಾಗಲೂ ಕಾಂಗ್ರೆಸ್‌ನಿಂದ ಲಿಂಗಾಯತ ಸಮುದಾಯದವರನ್ನು ಹೊರತುಪಡಿಸಿದಂತೆ ಚನ್ನಯ್ಯ ಒಡೆಯರ್ ಮಾತ್ರ ಎಂಪಿ ಆಗಿದ್ದರು.

ಒಟ್ಟಾರೆ ಲೋಕಸಭಾ ಕ್ಷೇತ್ರದ ಇತಿಹಾಸ ಗಮನಿಸಿದರೆ ಆರು ಬಾರಿ ಕಾಂಗ್ರೆಸ್ ಹಾಗೂ ಆರು ಬಾರಿ ಬಿಜೆಪಿ ಗೆದ್ದಿದೆ. ಆದರೆ ಈ ಬಾರಿ ಗೆಲ್ಲುತ್ತಾರೆ ಎಂಬುದೇ ಕುತೂಹಲ.

ಪಾದಯಾತ್ರೆ ಯಶಸ್ಸು: ವಿನಯ್ ಕುಮಾರ್ ಅವರ ಪರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿತ್ತು. ಚನ್ನಗಿರಿ, ಜಗಳೂರು, ಹರಪನಹಳ್ಳಿ, ದಾವಣಗೆರೆ, ಹೊನ್ನಾಳಿ, ಹರಿಹರ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿಯೂ ವಿನಯ್ ಕುಮಾರ್ ಅವರ ಪರ ಒಲವು ಇತ್ತು. ಯಾಕೆಂದರೆ ವಿನಯ್ ಕುಮಾರ್ ಇನ್ನೂ ಯುವಕರು. ಶಿಕ್ಷಣ ಕ್ಷೇತ್ರದಲ್ಲಿಯೂ ಕೆಲಸ ಮಾಡಿದ್ದಾರೆ. ಜಿಲ್ಲೆಯಾದ್ಯಂತ ಪಾದಯಾತ್ರೆ ನಡೆಸಿ ಜನರ ಮಾತಾಗಿದ್ದಾರೆ ಎಂಬ ಚರ್ಚೆ ಆಗಿತ್ತು.

ಇನ್ನು ಅವರು ಎಲ್ಲಾ ಸಮುದಾಯದವರ ಪ್ರೀತಿ, ವಿಶ್ವಾಸ ಸಂಪಾದನೆ ಮಾಡಿದ್ದಾರೆ. ಹಾಗಾಗಿ, ಯುವಕರಿಗೆ ಟಿಕೆಟ್ ನೀಡಿದರೆ ಗೆಲುವು ಕಷ್ಟವಾಗದು ಎಂದು ಹೇಳಲಾಗಿತ್ತು. ಎಸ್.ಎಸ್.ಮಲ್ಲಿಕಾರ್ಜುನ್, ಶಾಮನೂರು ಶಿವಶಂಕರಪ್ಪ ಅವರ ಆಶೀರ್ವಾದ ಸಿಕ್ಕರೆ, ಅಹಿಂದ ಮತ ಕಾಂಗ್ರೆಸ್‌ಗೆಗೆ ಬಿದ್ದರೆ ವಿನಯ್ ಕುಮಾರ್ ಗೆಲುವು ಕಷ್ಟವಾಗದು ಎಂಬ ವಿಶ್ಲೇಷಣೆಯೂ ನಡೆದಿತ್ತು. ಹಾಗಾಗಿ, ವಿನಯ್ ಕುಮಾರ್ ಹೆಸರು ಹೈಕಮಾಂಡ್ ಮಟ್ಟದಲ್ಲಿ ತುಂಬಾನೇ ಚರ್ಚೆಯಾಗಿತ್ತು.

ವಿನಯ್ ಕುಮಾರ್ ಪಾದಯಾತ್ರೆ, ಕಾರ್ಯಕ್ರಮಗಳು, ಅಂಗವಿಕಲರು, ಆಟೋ ಚಾಲಕರು, ಆಟೋ ಚಾಲಕರ ಮಕ್ಕಳಿಗೆ ಸಹಾಯ, ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಪೀಠೋಪಕರಣ, ಶೂ, ಸಹಾಯ ಹಸ್ತ, ಸಂಘ ಸಂಸ್ಥೆಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸಮಾಜ ಸೇವೆಯಲ್ಲಿಯೂ ಮುಂದಿದ್ದಾರೆ. ರಾಜಕೀಯದಲ್ಲಿ ಚತುರತೆಯ ಮಾತು ಆಡುತ್ತಾರೆ. ಅಲ್ಲದೆ, ತಂತ್ರಗಾರಿಕೆ ರೂಪಿಸುವುದರಲ್ಲಿ ನಿಪುಣರು. ಸಂಘಟನೆಯ ಶಕ್ತಿ ಇರುವ ಕಾರಣಕ್ಕೆ ಬಿಜೆಪಿ ಮಣಿಸಲು ಕಾಂಗ್ರೆಸ್ ಹೈಕಮಾಂಡ್ ನಲ್ಲಿಯೂ ಈ ಬಗ್ಗೆ ದೀರ್ಘ ಹೊತ್ತು ಚರ್ಚೆಯಾಗಿತ್ತು.

ಪ್ರಭಾ ಮಲ್ಲಿಕಾರ್ಜುನ್‌ ಮೇಲೆ ಒತ್ತಡ: ಇನ್ನು ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸಮಾಜ ಸೇವೆ, ಉಚಿತ ಆರೋಗ್ಯ ತಪಾಸಣೆ ಶಿಬಿರ, ಜನರೊಟ್ಟಿಗೆ ಬೆರೆಯುವ ರೀತಿ, ಬಡವರಿಗೆ ಸಹಾಯ, ಎಸ್.ಎಸ್.ಕೇರ್ ಟ್ರಸ್ಟ್‌ನಡಿ ಸಾವಿರಾರು ಜನರಿಗೆ ಆರೋಗ್ಯ ದಾಸೋಹ ಸೇರಿದಂತೆ ಎಲ್ಲರನ್ನೂ ಗಮನ ಸೆಳೆಯುತ್ತಿರುವ ನಾಯಕಿ. ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲೆಡೆ ಸ್ಪರ್ಧೆ ಮಾಡಬೇಕು ಎಂಬ ಒತ್ತಡ ಬಂದಿತ್ತು.

ಪ್ರಭಾ ಮಲ್ಲಿಕಾರ್ಜುನ್ ಅವರ ಕಾರ್ಯವೈಖರಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಿದ್ದರು. ಮಾವ ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಬಿರುಸಿನ ಪ್ರಚಾರ ನಡೆಸಿದ್ದ ಪ್ರಭಾ ಮಲ್ಲಿಕಾರ್ಜುನ್ ಅವರ ಕಾರ್ಯವೈಖರಿ ಸೂಜಿಗಲ್ಲಿನಂತೆ ಸೆಳೆದಿತ್ತು.

ಎಷ್ಟರ ಮಟ್ಟಿಗೆ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಪ್ರಭಾ ಮಲ್ಲಿಕಾರ್ಜುನ್ ಅವರು ಸ್ಪರ್ಧೆ ಮಾಡುತ್ತಾರೆ ಎಂದೆಲ್ಲಾ ಕಾರ್ಯಕರ್ತರು ಮಾತನಾಡಲಾರಂಭಿಸಿದ್ದರು. ಅಷ್ಟು ಜನಪ್ರಿಯತೆ ಗಳಿಸಿದ್ದರು. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಿದರೆ ಸಾದು ಲಿಂಗಾಯತ ಸಮುದಾಯದ ಮತಗಳು, ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳ ಫಲ, ಅಲ್ಪಸಂಖ್ಯಾತರ ಮತಗಳು ಬಂದರೆ ಗೆಲುವು ಖಚಿತ ಎಂಬ ಮಾತು ಕೇಳಿಬಂದಿವೆ‌

ಎಷ್ಟರ ಮಟ್ಟಿಗೆ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಪ್ರಭಾ ಮಲ್ಲಿಕಾರ್ಜುನ್ ಅವರು ಸ್ಪರ್ಧೆ ಮಾಡುತ್ತಾರೆ ಎಂದೆಲ್ಲಾ ಕಾರ್ಯಕರ್ತರು ಮಾತನಾಡಲಾರಂಭಿಸಿದ್ದರು. ಅಷ್ಟು ಜನಪ್ರಿಯತೆ ಗಳಿಸಿದ್ದರು. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಿದರೆ ಸಾದು ಲಿಂಗಾಯತ ಸಮುದಾಯದ ಮತಗಳು, ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳ ಫಲ, ಅಲ್ಪಸಂಖ್ಯಾತರ ಮತಗಳು ಬಂದರೆ ಗೆಲುವು ಖಚಿತ ಎಂಬ ಮಾತು ಕೇಳಿಬಂದಿವೆ‌

Leave a Reply

Your email address will not be published. Required fields are marked *

You missed

error: Content is protected !!