ಲೈಂಗಿಕ ಹಗರಣ | ಸಂಸದ ಪ್ರಜ್ವಲ್‌ ವಿರುದ್ಧ ಎಸ್ಐಟಿ ಲುಕ್‌ಔಟ್ ನೋಟಿಸ್ ಜಾರಿ: ಸಚಿವ ಪರಮೇಶ್ವರ್
ಪ್ರಜ್ವಲ್‌ ರೇವಣ್ಣ
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ತಿಳಿಸಿದರು.

ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಕ್ರಮ ಕೈಗೊಳ್ಳುವಂತೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ” ಎಂದರು.

“ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾದ ಆರೋಪ ಹೊತ್ತ ಮಾಜಿ ಸಚಿವ ಎಚ್ ಡಿ ರೇವಣ್ಣ ಎಸ್ ಐ ಟಿ ವಿಚಾರಣೆಗೆ ಹಾಜರಾಗದಿದ್ದರೆ ಅವರನ್ನು ಸಹ ಬಂಧಿಸಲಾಗುವುದು” ಎಂದು ಹೇಳಿದರು.

ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ‌ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಹಾಗೂ ಅವರ ಮಗ ಪ್ರಜ್ವಲ್ ಆರೋಪಿಗಳಾಗಿದ್ದಾರೆ. ಪ್ರಕರಣ ದಾಖಲಾಗುವ‌ ಮುನ್ನವೇ ಪ್ರಜ್ವಲ್‌ ದೇಶದಿಂದ‌ ಪರಾರಿಯಾಗಿದ್ದಾರೆ. ವಿಚಾರಣೆಗೆ ನೋಟಿಸ್ ನೀಡಿದರೂ ಹಾಜರಾಗಿಲ್ಲ.

ಪ್ರಜ್ವಲ್ ವಿದೇಶದಲ್ಲಿರುವ ಬಗ್ಗೆ ಎಸ್ಐಟಿ ಅಧಿಕಾರಿಗಳು ಮಾಹಿತಿ ಕಲೆ‌ ಹಾಕಿದ್ದಾರೆ. ಪ್ರಜ್ವಲ್ ಪತ್ತೆಗಾಗಿ‌ ಲುಕ್ ಔಟ್ ನೋಟಿಸ್ ಜಾರಿ‌ ಮಾಡಿ, ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರವಾನಿಸಿದ್ದಾರೆ. ಲುಕ್‌ಔಟ್ ನೋಟಿಸ್ ಬಳಿಕವೂ ಪ್ರಜ್ವಲ್‌ ಪತ್ತೆಯಾಗದಿದ್ದರೆ, ಆತನ ಪತ್ತೆಗೆ ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಜಾರಿಯಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

You missed

error: Content is protected !!