ದಲಿತ-ಬಂಡಾಯ ಕವಿ, ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಲಕ್ಕೂರು ಆನಂದ ನಿಧನ

Editor m rajappa vyasagondanahalli

By shukradeshenews Kannada | online news portal |Kannada news online   

By shukradeshenews | published on

shukradeshe news

ದಲಿತ-ಬಂಡಾಯ ಕವಿ, ಸಂಶೋಧಕ, ವಿಮರ್ಶಕ, ಸಂಘಟನಾಕಾರ, ಅನುವಾದಕಾರ ಲಕ್ಕೂರು ಆನಂದ ಅವರು ಮೇ 20ರಂದು ನಿಧನ ಹೊಂದಿದ್ದಾರೆ.

44ರ ಹರೆಯದ ಲಕ್ಕೂರು ಸಿ. ಆನಂದ ಅವರು ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರಿನವರು. ದಲಿತ- ಬಂಡಾಯ ಕಾವ್ಯ ಮಾರ್ಗದ ಮೂರನೇ ತಲೆಮಾರಿನವರಾಗಿದ್ದಾರೆ. ಕವಿ, ವಿಮರ್ಶಕ, ಅನುವಾದಕರಾಗಿಯೂ ಗುರುತಿಸಿಕೊಂಡಿರುವ ಆನಂದ ಅವರ ಮಾತೃಭಾಷೆ ತೆಲುಗು. ಇವರು ಕೆಂಗೇರಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ವಿಸಾಜಿ ಗುಲ್ಬರ್ಗ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದರು.
ಲಕ್ಕೂರು ಆನಂದ ಅವರು ಇದುವರೆಗೆ ಐದು ಕವನ ಸಂಕಲನ, ಐದು ಅನುವಾದಿತ ಕೃತಿಗಳು ಹಾಗೂ ಒಂದು ಸಂಶೋಧನಾ ಗ್ರಂಥವನ್ನು ಹೊರತಂದಿದ್ದಾರೆ. ಮಾತಂಗ ಮಾದಿಗರ ಸಂಸ್ಕೃತಿಯ ಬಗ್ಗೆ ಆನಂದ ಅವರು ಆಳವಾದ ಅಧ್ಯಯನ ನಡೆಸಿದ್ದಾರೆ. ಇತ್ತೀಚೆಗೆ ತೆಲುಗು ಭಾಷೆಯಿಂದ ಕನ್ನಡಕ್ಕೆ ಅನುವಾದವಾದ ರಾಣಿ ಶಿವ ಶಂಕರ ಶರ್ಮರ ‘ಕೊನೆಯ ಬ್ರಾಹ್ಮಣ’ ಕೃತಿ ಇದೀಗ ಅಭಿನವ ಪ್ರಕಾಶನದಿಂದ ಕನ್ನಡದಲ್ಲಿ ಪ್ರಕಟವಾಗಿದೆ. ಲಕ್ಕೂರು ಆನಂದ ಅವರೇ ತೆಲುಗು ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಿದ್ದಾರೆ.
ಲಕ್ಕೂರು ಆನಂದ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ, ಆಂಧ್ರದ ಶ್ರೀ ಶ್ರೀ ಕಾವ್ಯ, ದೆಹಲಿಯ ದಲಿತ ಸಾಹಿತ್ಯ ಪರಿಷತ್ತು ಪ್ರಶಸ್ತಿ, ದು ನಿಂ ಬೆಳಗಲಿ ಪ್ರಶಸ್ತಿ, ವಿಭಾ ಸಾಹಿತ್ಯ ಪ್ರಶಸ್ತಿ, ಕಡೆಂಗೋಡ್ಲು ಶಂಕರಭಟ್ಟ ಪ್ರಶಸ್ತಿ, ಡಾ ತಿಪ್ಪೇರುದ್ರ ಸ್ವಾಮಿ ಪ್ರಶಸ್ತಿ ಲಭಿಸಿದೆ. ತಮಗೆ ಬಂದ ಪ್ರಶಸ್ತಿಗಳನ್ನು ಅವರು, ‘ರಾಜ್ಯದ ಎಲ್ಲಾ ದಮನಿತ ಸಮುದಾಯಗಳಿಗೆ’ ಅರ್ಪಿಸಿದ್ದಾರೆ.

ಊರಿಂದ ಊರಿಗೆ, ಇಪ್ಪತ್ತರ ಕಲ್ಲಿನ ಮೇಲೆ, ಬಟವಾಡೆಯಾಗದ ರಸೀತಿ, ಇತಿ ನಿನ್ನ ವಿಧೇಯನು, ಉರಿವ ಏಕಾಂತ ದೀಪ ಇವರ ಕವನ ಸಂಕಲನಗಳು. ಸ್ಮೃತಿ ಕಿಣಾನ್ತಂ, ಕೊನೆ ಬ್ರಾಹ್ಮಣ, ಆಕಾಶ ದೇವರ, ನಗ್ನ ಮುನಿಯ ಸಮಗ್ರ ಕಥೆಗಳು, ಅರುದ್ರ ಇವರ ಅನುವಾದಿತ ಕೃತಿಗಳು.

ಲಕ್ಕೂರು ಆನಂದ ಅವರು ಗುಲ್ಬರ್ಗ ವಿವಿಯಲ್ಲಿ ಡಾ. ವಿಜಯ್‌ ಕುಮಾರ್‌ ಅವರ ಅಧೀನದಲ್ಲಿ ಪಿಹೆಚ್‌ಡಿ ಮಾಡುತ್ತಿದ್ದರು. ನಾವು ಘಟನಾ ಸ್ಥಳಕ್ಕೆ ತೆರಳಿದ್ದೆವು, ಮೃತದೇಹವನ್ನು ಇದೀಗ ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗಲಾಗಿದೆ. ಅವರು ಉತ್ತಮ ಕವಿ, ಉತ್ತಮ ಅನುವಾದಕ ಮತ್ತು ಅಮೋಘ ಪ್ರತಿಭೆಯನ್ನು ಹೊಂದಿದ್ದರು. ತೆಲಗು ಕವಿ ಚಲಂ ಅವರ ಪತ್ರಗಳನ್ನು ಉತ್ತಮವಾಗಿ ಅನುವಾದ ಮಾಡಿದ್ದರು, ಬಹಳ ಆತ್ಮೀಯರಾಗಿದ್ದರು, ಅವರ ಅಗಲಿಕೆಯಿಂದ ಅಪಾರ ನೋವು ಉಂಟಾಗಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!