ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ | ಉಚಿತ ವಸತಿ, ಊಟ
By
News Desk shukradeshe News
2 June 2024

2024
ಚಿತ್ರದುರ್ಗ: ಬೆಂಗಳೂರು ಶಿವಕುಮಾರ ಸ್ವಾಮೀಜಿಗಳ ನೌಕರರ ಸಂಘ ಹಾಗೂ ಶ್ರೀ ಗುಬ್ಬಿ ತೋಟದಪ್ಪನವರ ಧರ್ಮಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ವೀರಶೈವ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಶಿವಮೊಗ್ಗದಲ್ಲಿ ವ್ಯಾಸಂಗ ಮಾಡುತ್ತಿರುವ ವೀರಶೈವ ಸಮಾಜದಲ್ಲಿರುವ ಪ್ರತಿಭಾವಂತ ಹಾಗೂ ಬಡ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಾತಿ ಕಲ್ಪಿಸಲಾಗಿದೆ. 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ಖಾಲಿಯಿರುವ ಸ್ಥಾನಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಶಿವಮೊಗ್ಗ ನಗರದ ನವುಲೆ ಡಾಲರ್ಸ್‌ ಕಾಲೋನಿ ಹಿಂಭಾಗದಲ್ಲಿರುವ ಶಿವಕುಮಾರ ಸ್ವಾಮೀಜಿಗಳ ನೌಕರರ ಸಂಘದ ವಸತಿನಿಲಯದಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜೂನ್‌30 ರೊಳಗಾಗಿ ಸಲ್ಲಿಸುವಂತೆ ಸಂಘದ ಕಾರ್ಯದರ್ಶಿ ಡಾ.ಶಿವಯೋಗಿ ಬಿ.ಯಲಿ ತಿಳಿಸಿದ್ದಾರೆ.

ಆಹ್ವಾನವಿದ್ಯಾರ್ಥಿ ನಿಲಯವೀರಶೈವಶಿವಮೊಗ್ಗ.

Leave a Reply

Your email address will not be published. Required fields are marked *

You missed

error: Content is protected !!