Editor m rajappa vyasagondanahalli
By shukradeshenews Kannada | online news portal |Kannada news online
By shukradeshenews | published on June 3
ಜಗಳೂರಿನಲ್ಲಿ ಶೇ.98ರಷ್ಟು ಶಾಂತಿಯುತ ಮತದಾನ:ಕಾಂಗ್ರೆಸ್ ಅಭ್ಯರ್ಥಿ ಪತ್ನಿ ಪೂರ್ಣಿಮಾ ಶ್ರೀನಿವಾಸ್ ಭೇಟಿ.
ಜಗಳೂರು ಸುದ್ದಿ:ಪಟ್ಟಣದ ತಾಲೂಕು ಕಛೇರಿ ಸಭಾಂಗಣದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಮತದಾನ ಶಾಂತಿಯುತವಾಗಿ ನಡೆಯಿತು.
ಬೆಳಿಗ್ಗೆ 8 ಗಂಟೆಯಿಂದ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ 4 ಗಂಟೆವರೆಗೂ ಯಾವುದೇ ತೊಂದರೆಗಳಿಲ್ಲದೆ.ಒಟ್ಟು 351 ಮತದಾರರಲ್ಲಿ 344 ಮತಗಳನ್ನು ಚಲಾಯಿಸಿದ್ದು.63 ಮಹಿಳೆಯರು 281 ಪುರುಷರು ಸೇರಿದಂತೆ ಶೇ.98 ರಷ್ಟು ಮತದಾನವಾಯಿತು.
ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಭೇಟಿ:ಮತದಾನ ಸ್ಥಳಕ್ಕೆ ಮಾಜಿ ಶಾಸಕಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪತ್ನಿ ಪೂರ್ಣಿಮಾಶ್ರೀನಿವಾಸ್ ಭೇಟಿ ನೀಡಿ ಮತದಾನ ಪ್ರಕ್ರಿಯೆ ವೀಕ್ಷಿಸಿ ಮತದಾರರಿಗೆ ಅಭಿನಂದನೆ ಸಲ್ಲಿಸಿದರು.
ಮಾಜಿಶಾಸಕರಾದ ಎಸ್.ವಿ.ರಾಮಚಂದ್ರಪ್ಪ,ಎಚ್.ಪಿ.ರಾಜೇಶ್,ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಸಿ. ಮಹೇಶ್,ಬಿಜೆಪಿ ಅಭ್ಯರ್ಥಿ ಪರ ಮತದಾರರಿಗೆ ಮತಚಲಾಯಿಸಲು ಮನವಿಮಾಡಿದರು.
ಕೆಪಿಸಿಸಿ ಎಸ್ ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ,ಕೆಪಿಸಿಸಿ ಎಸ್ ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ.ಕೀರ್ತಿಕುಮಾರ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್ ,ಬ್ಲಾಕ್ ಕಾಂಗ್ರೆಸ್ ಎಸ್ ಸಿ ಘಟಕದ ಅಧ್ಯಕ್ಷ ಬಿ.ಮಹೇಶ್ವರಪ್ಪ,ಸೇರಿದಂತೆ ಮುಖಂಡರುಗಳು ಕಾಂಗ್ರೆಸ್ ಅಭ್ಯರ್ಥಿಪರ ಮತಯಾಚನೆಮಾಡಿದರು.
ರಾಜಕಾರಣದಿಂದ ದೂರವಿದ್ದ ಸರ್ಕಾರಿ ನೌಕರರಿಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ತು ಚುನಾವಣೆಯಲ್ಲಿ ಪಕ್ಷಗಳ ಜಿದ್ದಾಜಿದ್ದಿ ಮತದಾನ ಪ್ರಕ್ರಿಯೆ ಸಾರ್ವಜನಿಕರಿಗೆ ಕುತೂಹಲಮೂಡಿಸಿತು.