ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ:ನ್ಯಾ.ಆರ್.ಚೇತನ್

ಜಗಳೂರು ಸುದ್ದಿ:ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರೀಕನ ಹೊಣೆಯಾಗಬೇಕಿದೆ ಎಂದು ಜೆಎಂಎಫ್‌ಸಿ ಮತ್ತು ಸಿವಿಲ್ ನ್ಯಾಯಾಧೀಶ ಆರ್.ಚೇತನ್ ಹೇಳಿದರು.

ಪಟ್ಟಣದ ಕೋರ್ಟ್ ಆವರಣದಲ್ಲಿ ಪ್ರಾದೇಶಿಕ ಹಾಗೂ ಸಾಮಾಜಿಕ ವಲಯ ಅರಣ್ಯ ಇಲಾಖೆ,ವಕೀಲರ ಸಂಘದ ಸಹಯೋಗದಲ್ಲಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮಕ್ಕೆ ಸಸಿನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

‘ಪ್ರಕೃತಿಯಲ್ಲಿನ ಗಿಡಮರಗಳನ್ನು ಕಾಳಜಿವಹಿಸಿ ರಕ್ಷಿಸಿದರೆ ಪ್ರಾಣಿ ಸಂಕುಲಕ್ಕೆ ಶುದ್ದ ಗಾಳಿ ಪೂರೈಕೆಯಾಗುವುದಲ್ಲದೆ.ಪ್ರಾಕೃತಿಕ ಸಮತೋಲನ ಕಾಪಾಡಲು ಸಾಧ್ಯ’ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಕೀಲರ ಸಂಘದ ತಾಲೂಕು ಅಧ್ಯಕ್ಷ ಮರೇನಹಳ್ಳಿ ಟಿ. ಬಸವರಾಜ್ ಮಾತನಾಡಿ,’ಪ್ರಕೃತಿ ನಾಶದಿಂದ ಜೀವ ಸಂಕುಲಕ್ಕೆ ಆಪತ್ತು.ಸಸಿನೆಡುವ ಕಾರ್ಯಕ್ರಮಗಳು ಕೇವಲ ಪರಿಸರ ದಿನಾಚರಣೆಗೆ ಸೀಮಿತವಾಗದೆ ವರ್ಷವಿಡೀ ನೆರೆಹೊರೆಯಲ್ಲಿ ಸಸಿಗಳನ್ನು ನೆಟ್ಟು ಲಾಲನೆ ಪಾಲನೆ ಮಾಡಬೇಕು. ಗಿಡಮರಗಳನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬರೂ ಸಂಕಲ್ಪ ಗೈಯಬೇಕು’ಎಂದು ಕರೆ ನೀಡಿದರು.

ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ಬಿ.ಟಿ. ಶ್ರೀನಿವಾಸ್ ಮಾತನಾಡಿ,ವಿಶ್ವಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಅಭಿಯಾನದಡಿ ಪಟ್ಟಣದ ಸರಕಾರಿ ಪ್ರಥಮದರ್ಜೆ ಕಾಲೇಜು, ಕೋರ್ಟ್ ಮತ್ತು ತಾಲೂಕು ಪಂಚಾಯಿತಿ ಆವರಣ,ಬಿದರಕೆರೆ,ಪಲ್ಲಾಗಟ್ಟೆ,ತಮಲೇಹಳ್ಳಿ,ಸೇರಿದಂತೆ ಗ್ರಾಮೀಣ ಭಾಗದ ವಿವಿಧ ಶಾಲಾಕಾಲೇಜುಗಳ ಆವರಣಗಳಲ್ಲಿ ಕನಿಷ್ಠ 10 ಸಾವಿರಕ್ಕೂ ಅಧಿಕ ಹಲವು ಬಗೆಯ ಸಸಿಗಳನ್ನು ನೆಡುವ ಗುರಿಹೊಂದಲಾಗಿದೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಮನವಿಮಾಡಿದರು.

ಸಂದರ್ಭದಲ್ಲಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಮಹೇಶ್ವರಪ್ಪ,ವಕೀಲರಾದ ರುದ್ರೇಶ್,ಆರ್.ಓಬಳೇಶ್,ನಾಗೇಶ್,ತಿಪ್ಪೇಸ್ವಾಮಿ, ಶ್ರೀನಿವಾಸ್,ಅರಣ್ಯ ಇಲಾಖೆ ಸಿಬ್ಬಂದಿಗಳಾದ ಹಾಲೇಹಳ್ಳಿ ನಾಗರಾಜ್ ,ಚೇತನ್,ಸೇರಿದಂತೆ ಇದ್ದರು.

Leave a Reply

Your email address will not be published. Required fields are marked *

You missed

error: Content is protected !!