ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಗೆಲುವಿಗೆ ಪಟಾಕಿ ಸಿಡಿಸಿ ಸಂಭ್ರಮ
ಜಗಳೂರು ಸುದ್ದಿ:ಪಟ್ಟಣದ ಮಹಾತ್ಮಗಾಂಧಿ ವೃತ್ತದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರ ಗೆಲುವಿಗೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿಸಿಡಿಸಿ ಸಂಭ್ರಮಿಸಲಾಯಿತು.
ಈ ವೇಳೆ ಕೆಪಿಸಿಸಿ ಎಸ್ ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ ಮಾತನಾಡಿ,’ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರ 1751ಮತಗಳ ಅಂತರದ ಗೆಲುವಿಗೆ ಮೊದಲ ಪ್ರಾಶಸ್ತ್ಯದ ಮತಚಲಾಯಿಸಿ ಸಹಕರಿಸಿದ ಕ್ಷೇತ್ರದ ಶಿಕ್ಷಕ ಹಾಗೂ ಉಪನ್ಯಾಸಕರಿಗೆ ಅಭಿನಂದನೆಗಳು.ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತರೂಢ ಸರಕಾರವಿದ್ದು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ವಿಧಾನಪರಿಷತ್ತು ಸದಸ್ಯರು ತಾಲೂಕಿನ ಅನುದಾನಿತ,ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಹಾಗೂ ಶಿಕ್ಷಕರ ಆರ್ಥಿಕ ಭದ್ರತೆ,ಸಮಸ್ಯೆಗಳ ಬೇಡಿಕೆ ಈಡೇರಿಕೆಗೆ ಸಾಕ್ಷಿಯಾಗಿ ವ್ಯಾಪಕ ಬೆಂಬಲ ವ್ಯಕ್ತವಾಗಲಿದೆ’ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕ್ಷೇತ್ರದಲ್ಲಿ ವಿಧಾನಸಭಾ ಕ್ಷೇತ್ರದ ಚುನಾವಣೆಯಿಂದ ಲೋಕಸಭಾ,ವಿಧಾನಪರಿಷತ್ತು ಚುನಾವಣೆವರೆಗೂ ನಿರಂತರವಾಗಿ ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕೈಜೋಡಿಸಿದ್ದು ಇವುಗಳು ಮುಂಬರುವ ಜಿ.ಪಂ ಹಾಗೂ ತಾ.ಪಂ ಚುನಾವಣೆಗೆ ಕೈಗನ್ನಡಿಯಾಗಿವೆ.ಗೆಲುವಿನ ಹರ್ಷದಲ್ಲಿ ನಿರ್ಲಕ್ಷ್ಯಿಸದೆ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಬೇಕು ಎಂದು ಕಿವಿಮಾತು ಹೇಳಿದರು.
ಕೆಪಿಸಿಸಿ ಎಸ್ ಟಿ ಘಟಕದ ರಾಜ್ಯ ಪ್ರಧಾನಕಾರ್ಯದರ್ಶಿ ಎಂ.ಡಿ.ಕೀರ್ತಿಕುಮಾರ್ ಮಾತನಾಡಿ,’ಜಗಳೂರು ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿ ಮಾರ್ಪಟ್ಟಿದ್ದು.ಮುಂದಿನ ಸ್ಥಳೀಯ ಚುನಾವಣೆಗಳಲ್ಲಿ ಟಿಕೇಟ್ ಯಾರೊಬ್ಬರಿಗೆ ನೀಡಿದರೂ ಕಾರ್ಯಕರ್ತರು ಆಂತರಿಕ ವೈಮನಸ್ಸು ತೊರೆದು ಒಗ್ಗಟ್ಟಿನಿಂದ ಚುನಾವಣೆ ಎದುರಿಸೋಣ.ಸ್ಥಳೀಯ ಶಾಸಕರ ಹಾಗೂ ನೂತನ ಸಂಸದರ ಕೈಬಲಪಡಿಸಿ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಸಹಕರಿಸೋಣ’ ಎಂದು ಕರೆ ನೀಡಿದರು.
ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್,ಪ.ಪಂ ಸದಸ್ಯರಾದ ರವಿಕುಮಾರ್,ಶಕೀಲ್ ಅಹಮ್ಮದ್,ಮುಖಂಡರಾದ ತಿಪ್ಪೇಸ್ವಾಮಿಗೌಡ,ಪಲ್ಲಾಗಟ್ಟೆ ಶೇಖರಪ್ಪ,ಶಿವನಗೌಡ್ರು,ಬಿ.ಮಹೇಶ್ವರಪ್ಪ,ಶಂಭುಲಿಂಗಪ್ಪ,ಸಿ.ತಿಪ್ಪೇಸ್ವಾಮಿ,ಷಂಷುದ್ದೀನ್,ಪ.ಪಂ ಮಾಜಿ ಅಧ್ಯಕ್ಷ ಮಂಜುನಾಥ್,ಎಂ.ಎಸ್.ಪಾಟೀಲ್,ವೀರಣ್ಣಗೌಡ,ವಕೀಲರ ಸಂಘದ ತಾಲೂಕುಘಟಕದ ಅಧ್ಯಕ್ಷ ಮರೇನಹಳ್ಳಿ ಟಿ.ಬಸವರಾಜ್,ವಕೀಲ ತಿಪ್ಪೇಸ್ವಾಮಿ ಸಿಎಂಹೊಳೆ,ವಿಜಯ್ ಕೆಂಚೋಳ್,ರಮೇಶ್ ಗೊಲ್ಲರಹಟ್ಟಿ,ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.