ಚಿತ್ರದುರ್ಗ: ಕೆಲಸ ಖಾಲಿ ಇದೆ, ವೇತನ 16,839 ರೂ.ಗಳು
By m.rajappa vyasagondanahalli
Published: shukradeshe news
ಚಿತ್ರದುರ್ಗ, ಜೂನ್ 011 ಜಿಲ್ಲಾ ಶಸ್ತ್ರಚಿಕಿತ್ಸಕರ ಕಾರ್ಯಾಲಯ, ಜಿಲ್ಲಾ ಆಸ್ಪತ್ರೆ, ಚಿತ್ರದುರ್ಗ. ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಲು 21/6/2024 ಕೊನೆಯ ದಿನವಾಗಿದೆ.
ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಚಿತ್ರದುರ್ಗ ಇಲ್ಲಿಗೆ ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಚಿತ್ರದುರ್ಗದಲ್ಲಿ 100 ಹಾಸಿಗೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮಂಜೂರಾಗಿದ್ದು, ಈ ಆಸ್ಪತ್ರೆಯಲ್ಲಿ ಅಗತ್ಯವಿರುವ ಮಾನವ ಸಂಪನ್ಮೂಲವನ್ನು ಪಡೆಯಲು ವಿವಿಧ ಹುದ್ದೆಗಳಿಗೆ ರೋಸ್ಟರ್ ಮತ್ತು ಮೆರಿಟ್ ಆಧರಿಸಿ ಗುತ್ತಿಗೆ ಆಧಾರದಲ್ಲಿ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.