ಮಾದಕ ವ್ಯಸನದಿಂದ ಕೌಟುಂಬಿಕ ನೆಮ್ಮದಿ ಹಾಳು ಭವಿಷ್ಯಕ್ಕೆ ಮಾರಕ:ಶ್ರೀನಿವಾಸ್

ಜಗಳೂರು ಸುದ್ದಿ:ಮಾದಕ ವ್ಯಸನದಿಂದ ಕೌಟುಂಬಿಕ ನೆಮ್ಮದಿ ಹಾಳು ಹಾಗೂ ಮಕ್ಕಳ ಉಜ್ವಲ ಭವಿಷ್ಯಕ್ಕೆ ಮಾರಕ ಎಂದು ಪೊಲೀಸ್ ನಿರೀಕ್ಷಕ ಶ್ರೀನಿವಾಸ್ ರಾವ್ ಕಳವಳ ವ್ಯಕ್ತಪಡಿಸಿದರು.

ಪಟ್ಟಣದ ಪ್ರವಾಸಿಮಂದಿರದಿಂದ ಪ್ರಮುಖಬೀದಿಗಳಲ್ಲಿ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ‘ಮಾದಕ ವ್ಯಸನದ ದುಷ್ಪರಿಣಾಮ’ ಕುರಿತು ಜಾಗೃತಿ ಜಾಥದಲ್ಲಿ ಭಾಗವಹಿಸಿ ನಂತರ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಪ್ರತಿಜ್ಞಾವಿಧಿ ನಡೆಸಿವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು.

‘ಮಾದಕ ವಸ್ತಗಳು ವ್ಯಕ್ತಿಯ ಆರೋಗ್ಯದ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುತ್ತವೆ.ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಹಾಗೂ ಕುಟುಂಬದ ಸದಸ್ಯರಿಗೆ ಮಾದಕವಸ್ತು ಮತ್ತು ಮಾದಕ ದ್ರವ್ಯ ಸೇವನೆಯಿಂದ ದೂರವಿರಲು ಮನವರಿಕೆ ಮಾಡಿಕೊಡಬೇಕು’ ಎಂದು ಕಿವಿಮಾತು ಹೇಳಿದರು.

‘ಮಾದಕ ವ್ಯಸನದಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಅಸಾಧ್ಯ.ವ್ಯಸನಿಯ ವೈಯಕ್ತಿಕ ಆರೋಗ್ಯ ಹಾಳು,ಕೌಟುಂಬಿಕವಾಗಿ ಆರ್ಥಿಕ ಸಂಕಷ್ಟ ಎದುರಾಗುವುದು ಇದರಿಂದ ಮಾನಸಿಕ ಅಸ್ವಸ್ಥತೆಗೆ ಬಲಿಯಾಗಿ ಭವಿಷ್ಯಕ್ಕೆ ಸಂಚಕಾರ ಉಂಟಾಗುತ್ತದೆ.ಆದ್ದರಿಂದ ಯುವಸಮೂಹ ಜಾಗೃತರಾಗಬೇಕು ಅಂತೆಯೇ ಪ್ರತಿಯೊಬ್ಬರೂ ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು’ ಎಂದು ಕರೆ ನೀಡಿದರು.

ಸಂದರ್ಭದಲ್ಲಿ ಪಿಎಸ್ ಐಗಳಾದ ಸಾಗರ್,ಮಂಜುನಾಥ್,ಆಶಾ,ಸಿಬ್ಬಂದಿಗಳಾದ ಶಶಿಧರ್,ರಮೇಶ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You missed

error: Content is protected !!