ಪುಣೆ :ಮಹಾರಾಷ್ಟ್ರದ ಲೋನಾವಾಲಾದಲ್ಲಿ ಭಾನುವಾರ ಎಡೆಬಿಡದೆ ಸುರಿಯುತ್ತಿರುವ ಮಳೆ(Heavy Rain)ಯಿಂದಾಗಿ ಭೂಶಿ ಅಣೆಕಟ್ಟು(Bhushi Dam) ತುಂಬಿ ಹರಿದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ ಐವರು ನೀರಿನಲ್ಲಿ ಮುಳುಗಿ(Drown In Water) ಸಾವನ್ನಪ್ಪಿದ್ದಾರೆ.
ಮಧ್ಯಾಹ್ನ 1:30ಕ್ಕೆ ಘಟನೆ ನಡೆದಿದ್ದು, ಶೋಧ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ.

ಪುಣೆ ಎಸ್ಪಿ ಪಂಕಜ್ ದೇಶ್‌ಮುಖ್‌ ಈ ಬಗ್ಗೆ ಮಾಹಿತಿ ನೀಡಿದ್ದು, 2 ಶವಗಳನ್ನು ಹೊರತೆಗೆಯಲಾಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಎಲ್ಲಾ ಐದು ಜನರು ಪುಣೆ ಸಯ್ಯದ್ ನಗರಕ್ಕೆ ಸೇರಿದ ಒಂದೇ ಕುಟುಂಬದವರು ಎಂದು ಹೇಳಿದ್ದಾರೆ. ನಾವು 40 ವರ್ಷದ ಮಹಿಳೆ ಮತ್ತು 13 ವರ್ಷದ ಬಾಲಕಿಯ ಶವಗಳನ್ನು ವಶಪಡಿಸಿಕೊಂಡಿದ್ದೇವೆ. ಘಟನೆಯಲ್ಲಿ 6 ವರ್ಷದ ಇಬ್ಬರು ಬಾಲಕಿಯರು ಹಾಗೂ 4 ವರ್ಷದ ಬಾಲಕ ನಾಪತ್ತೆಯಾಗಿದ್ದಾರೆ. ಅವರು ಭೂಶಿ ಅಣೆಕಟ್ಟಿನಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಜಲಪಾತದಿಂದ ಕೆಳಕ್ಕೆ ಬಿದ್ದು ನೀರುಪಾಲಾಗಿದ್ದಾರೆ ಎಂದು ದೇಶಮುಖ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You missed

error: Content is protected !!