ಬೆಂಗಳೂರು

ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡದ್ದ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಗುರುವಾರ ತಡರಾತ್ರೆ ಬಂಧಿಸಿದ್ದಾರೆ.

ವಾರೆಂಟ್ ಜಾರಿಯಾದರೂ ಜಗದೀಶ್ ಕೋರ್ಟ್‍ಗೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಕೋರ್ಟ್ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಹೊರಡಿಸಿತ್ತು. ಜಗದೀಶ್ ಗೋವಾದಲ್ಲಿ ಪತ್ತೆಯಾಗಿದ್ದು, ಮಾಹಿತಿ ಪಡೆದ ಕೊಸಿಹಳ್ಳಿ ಪೊಲೀಸರು ಆತನನ್ನು ಬಂಧಿಸಿ ಕರೆತರುತ್ತಿದ್ದಾರೆ.

ಜಗದೀಶ್ ವಿರುದ್ಧ 2022ರಲ್ಲಿ ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಈ ಸಂಬಂಧ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಆದರೆ ಅವರು ಕೋರ್ಟ್‍ಗೆ ಹಾಜರಾಗದೇ ತಪ್ಪಿಸಿಕೊಂಡಿದ್ದರು.

Leave a Reply

Your email address will not be published. Required fields are marked *

You missed

error: Content is protected !!