- 75 ಕೋಟಿ ರೂಗಳಲ್ಲಿ ನಿರ್ಮಿಸಿರುವ ನೂತನ ವಾಲ್ಮೀಕಿ ಭವನ ಲೋಕಾರ್ಪಣೆ
- ಸಂಪಾದಕ .ಎಂ ರಾಜಪ್ಪ ವ್ಯಾಸಗೊಂಡನಹಳ್ಳಿ
- ಜೆ ಎಲ್ ಆರ್ ನ್ಯೂಸ್
- ಸುದ್ದಿ ಜಗಳೂರು
ಜಗಳೂರು ಪಟ್ಟಣದ ಓಂಕಾರೇಶ್ವರ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ವಾಲ್ಮೀಕಿ ಭವನವನ್ನು ಮಹರ್ಷಿ ವಾಲ್ಮೀಕಿ ಜಯಂತಿ ದಿನದ ಅಂಗವಾಗಿ ಲೋಕಾರ್ಪಣೆಗೊಳ್ಳಲಿದೆ . ದಿನಾಂಕ_17 _10_20024 ರ ಗುರುವಾರ ಬೆಳೆಗ್ಗೆ 11 ಗಂಟೆಗೆ ಶ್ರೀ ಮಹರ್ಷಿ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಜಗಳೂರು ತಾಲ್ಲೂಕು ಆಡಳಿತ ವತಿಯಿಂದ ಏರ್ಪಡಿಸಲಾಗಿರುವ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಅದ್ದೂರಿಯಾಗಿ ಜರುಗಲಿದೆ.
ಇದೆ ವೇಳೆ ಕ್ಷೇತ್ರದ ಶಾಸಕರಾದ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪರವರು ನೂತನ ವಾಲ್ಮೀಕಿ ಭವನ ಕಟ್ಟಡ ಲೋಕಾರ್ಪಣೆ ಮಾಡಲಿದ್ದು ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ. ಮಾಜಿ ಶಾಸಕರಾದ ಎಸ್ ವಿ ರಾಮಚಂದ್ರಪ್ಪ ಹಾಗೂ ಹೆಚ್.ಪಿ ರಾಜೇಶ್.ಸೇರಿದಂತೆ ವಾಲ್ಮೀಕಿ ಪ್ರಶಸ್ತಿ ಅಯ್ಕೆ ಸಮಿತಿ ಸದಸ್ಯರು ಮತ್ತು ಮಾಜಿ ಜಿಪಂ.ಸದಸ್ಯರಾದ ಕೆ.ಪಿ ಪಾಲಯ್ಯ. ಕಾಂಗ್ರೆಸ್ ರಾಜ್ಯ ಎಸ್ ಟಿ ಘಟಕದ ಪ್ರಧಾನಕಾರ್ಯರ್ಶಿ ಕೀರ್ತಿಕುಮಾರ್ ಸೇರಿದಂತೆ ವಿವಿಧ ಗಣ್ಯರು ಪಾಲ್ಗೋಳ್ಳಲಿದ್ದಾರೆ .ಜಯಂತಿ ವೇದಿಕೆ ಸಮಾರಂಭದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಧ್ಯಕ್ಷರು ತಹಶೀಲ್ದಾರ ಸೈಯದ್ ಖಲೀಂ ಉಲಾ ಕಾರ್ಯಕ್ರಮದ ಅದ್ಯಕ್ಷತೆ ವಹಿಸಲಿದ್ದು ..ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನ ಯಶಸ್ವಿಗೋಳಿಸುವಂತೆ ಎಂದು ಸಮಾಜ ಕಲ್ಯಾಣ ಪರಿಶಿಷ್ಟ ವರ್ಗಗಳ ಇಲಾಖೆ ಸಹಾಯಕ ನಿರ್ದೇಶಕರಾದ ಮಂಜುನಾಥ ತಿಳಿಸಿದ್ದಾರೆ.