ಎಸ್. ಎಂ. ಕೃಷ್ಣ ಸದಾ ನನ್ನ ಹಿತೈಷಿಗಳಾಗಿದ್ದರು: ಸಿದ್ದರಾಮಯ್ಯ ಸಂತಾಪ ಸರ್ಕಾರಿ ಗೌರವದೊಂದಿಗೆ ಎಸ್.ಎಂ.ಕೃಷ್ಣ ಅಂತ್ಯಕ್ರಿಯೆ: ನಾಳೆ ಸರ್ಕಾರಿ ರಜೆ

Editor By m.rajappa vyasagondanahalli shukradeshe news
Tuesday, December 10, 2024,
ಬೆಂಗಳೂರು, ಮಾರ್ಚ್ 10: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಎಸ್‌ ಎಂ ಕೃಷ್ಣ ಅವರ ಅಂತ್ಯಸಂಸ್ಕಾರವನ್ನ ಸಕಲ ಸರ್ಕಾರಿ ಗೌರವದೊಂದಿದೆ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

ದಿವಂಗತರ ಅಂತ್ಯಕ್ರಿಯೆಯನ್ನು ದಿನಾಂಕ: 11.12.2024ರಂದು ಬುಧವಾರ ಹುಟ್ಟುರು ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರೆವೇರಿಸಲಾಗುವುದು ಮತ್ತು ದಿನಾಂಕ:10.12.2024 ರಿಂದ 12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಆದೇಶ ಹೊರಡಿಸಿದೆ.

SM Krishna Death: ಮಂಡ್ಯದಲ್ಲಿ ಶಾಲೆಗಳು ಬಂದ್, ನಾಳೆ ರಾಜ್ಯಾದ್ಯಂತ ರಜೆ ಘೋಷಣೆ
“SM Krishna Death: ಮಂಡ್ಯದಲ್ಲಿ ಶಾಲೆಗಳು ಬಂದ್, ನಾಳೆ ರಾಜ್ಯಾದ್ಯಂತ ರಜೆ ಘೋಷಣೆ”
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

S.M. Krishna ನಿಧನಕ್ಕೆ ಬಿ.ಎಸ್ ಯಡಿಯೂರಪ್ಪ ಸಂತಾಪ

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಶ್ರೀ.ಎಸ್.ಎಂ.ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರ ಬೆಳಗಿನ ಜಾವ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ ಮೂಲಕ ಆದೇಶ ಪ್ರಕಟಿಸಿದೆ.

ಮುಂದುವರೆದು ದಿವಂಗತರ ಅಂತ್ಯಕ್ರಿಯೆಯನ್ನು 11.12.20240 ಬುಧವಾರದಂದು ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ದಿವಂಗತರ ಗೌರವಾರ್ಥವಾಗಿ ದಿನಾಂಕ:11.12.2024ರ ಬುಧವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ. ದಿನಾಂಕ:10.12.2024 ರಿಂದ ದಿನಾಂಕ:12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಮಾಡಲಾಗುವುದು ಹಾಗೂ ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸುವುದು.

SM Krishna: ಮದ್ದೂರಿನಲ್ಲಿ ಗೆಲುವು ಮತ್ತು ಎಸ್‌. ಎಂ. ಕೃಷ್ಣ ಮುಖ್ಯಮಂತ್ರಿ ಹುದ್ದೆ
“SM Krishna: ಮದ್ದೂರಿನಲ್ಲಿ ಗೆಲುವು ಮತ್ತು ಎಸ್‌. ಎಂ. ಕೃಷ್ಣ ಮುಖ್ಯಮಂತ್ರಿ ಹುದ್ದೆ “

ಶಿಸ್ತು ಬದ್ದ ರಾಜಕಾರಣಿ ಎಸ್.ಎಂ ಕೆ: ಸಚಿವ ಡಾ.ಎಂ.ಸಿ. ಸುಧಾಕರ್ ಸ್ಮರಸಿದರು

ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ಸಚಿವರು ಹಾಗೂ ರಾಜ್ಯದ ಮುತ್ಸದ್ದಿ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ನಿಧನದಿಂದಾಗಿ ನಾಡಿನ ಜನತೆ ಶಿಸ್ತು ಬದ್ಧ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಕಂಬನಿ ಮಿಡಿದಿದ್ದಾರೆ. ರಾಜಕೀಯದ ಜೊತೆಗೆ ಕಲೆ, ಸಾಹಿತ್ಯ, ಕ್ರೀಡೆ ಗಳಲ್ಲೂ ಅತ್ಯಂತ ಆಸಕ್ತರಾಗಿದ್ದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರು ಯುವರಾಜಕಾರಣಿಗಳಿಗೆ ಆದರ್ಶಪ್ರಾಯರು.

ರಾಜ್ಯದ ಮುಖ್ಯಮಂತ್ರಿ ಆಗಿದ್ದಾಗ ಅವರು ಸಲ್ಲಿಸಿದ ಸೇವೆಯಿಂದಾಗಿ ಬೆಂಗಳೂರು ಇಂದು ಐಟಿಬಿಟಿ ಸಿಟಿಯಾಗಿ ಬೃಹದಾಕಾರವಾಗಿ ಬೆಳೆಯಲು ಸಾಧ್ಯವಾಗಿದೆ. ಸಾಮಾಜಿಕ ಕಳಕಳಿ, ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿಯ ದೂರ ದೃಷ್ಟಿ ಹಾಗೂ ಕಟ್ಟುನಿಟ್ಟಿನ ಆಡಳಿತ ಶೈಲಿ ನಮ್ಮಂತವರಿಗೆ ಸದಾ ಪ್ರೇರೇಪಣೆ ನೀಡುವಂತದ್ದು ಎಂದು ಡಾ. ಎಂ.ಸಿ.ಸುಧಾಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

SM Krishna Death: ನಾಳೆ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಎಸ್‌ ಎಂ ಕೃಷ್ಣ ಅವರ ಅಂತ್ಯಕ್ರಿಯೆ
“SM Krishna Death: ನಾಳೆ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಎಸ್‌ ಎಂ ಕೃಷ್ಣ ಅವರ ಅಂತ್ಯಕ್ರಿಯೆ”

ಕರ್ನಾಟಕ ರಾಜ್ಯ ಒಬ್ಬ ಧೀಮಂತ ಮುಖಂಡರನ್ನು ಕಳೆದುಕೊಂಡಿದೆ ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಭಗವಂತನು ಆತ್ಮಸ್ಥೈರ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಸಚಿವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದರು.

: ಚಾಮರಾಜಪೇಟೆಯಲ್ಲಿ ಕಣಕ್ಕಿಳಿದು ಅಚ್ಚರಿ ಮೂಡಿಸಿದ್ದ ಎಸ್‌. ಎಂ. ಕೃಷ್ಣ
SM Krishna: ಚಾಮರಾಜಪೇಟೆಯಲ್ಲಿ ಕಣಕ್ಕಿಳಿದು ಅಚ್ಚರಿ ಮೂಡಿಸಿದ್ದ ಎಸ್‌. ಎಂ. ಕೃಷ್ಣ

SM Krishna: ರಾಜಕೀಯ ಗುರು ಎಸ್‌ಎಂ ಕೃಷ್ಣ ಬಗ್ಗೆ ನಟಿ ರಮ್ಯಾ ಹೇಳಿದ್ದೇನು?
SM Krishna: ರಾಜಕೀಯ ಗುರು ಎಸ್‌ಎಂ ಕೃಷ್ಣ ಬಗ್ಗೆ ನಟಿ ರಮ್ಯಾ ಹೇಳಿದ್ದೇನು?

SM Krishna: ಬೆಂಗಳೂರು ಐಟಿ ಪಿತಾಮಹ, ಕನ್ನಡಿಗರ ಪಾಲಿನ ಉದ್ಯೋಗದಾತ ಎಸ್‌.ಎಂ. ಕೃಷ್ಣ ಸಾಧಿಸಿದ್ದು ಏನು?
SM Krishna: ಬೆಂಗಳೂರು ಐಟಿ ಪಿತಾಮಹ, ಕನ್ನಡಿಗರ ಪಾಲಿನ ಉದ್ಯೋಗದಾತ ಎಸ್‌.ಎಂ. ಕೃಷ್ಣ ಸಾಧಿಸಿದ್ದು ಏನು?

SM Krishna: ಎಸ್. ಎಂ. ಕೃಷ್ಣ ಸದಾ ನನ್ನ ಹಿತೈಷಿಗಳಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Reply

Your email address will not be published. Required fields are marked *

You missed

error: Content is protected !!