ಜಗಳೂರು ತಾಲ್ಲೂಕಿನ ಗುತ್ತಿದುರ್ಗ ಗ್ರಾಮದ ಗ್ರಾಮ ಸಹಾಯಕ ಶಾಂತಪ್ಪ ಅಂಬೇಡ್ಕರ್ ಜಯಂತಿ ಅಂಗವಾಗಿ ಕೇರಳ ರಾಜ್ಯದಲ್ಲಿ ಪ್ರವಾಸದಲ್ಲಿದ್ದಾಗ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ ಡಾ. ಬಿ ಆರ್ ಅಂಬೆಡ್ಕರ್ ಜಯಂತಿ ಆಚರಣೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.
ಈತ ತಾಲ್ಲೂಕಿನ ಬಿಳಿಚೋಡು ನಾಡ ಕಛೇರಿಯಲ್ಲಿ ಗ್ರಾಮ ಸೇವಕರಾಗಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿದುರ್ಗದ ಶಾಂತಪ್ಪ ಇವರು ಮತ್ತು ಇವರ ಕುಟುಂಬದ ಸದಸ್ಯರೊಂದಿಗೆ ಕೇರಳಕ್ಕೆ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲೋ ಸಹ ಬಾಬಾ ಸಾಹೇಬ್ ಭಾರತರತ್ನ ಡಾ. ಆರ್ ಅಂಬೇಡ್ಕರ್ ಅವರ 134 ನೇ ಜನ್ಮದಿನಾಚರಣೆಯನ್ನು ಕುಟುಂಬದ ಸದಸ್ಯರೊಂದಿಗೆ ಮಹಾನಾಯಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕೇರಳ ರಾಜ್ಯದಲ್ಲಿ ಸಂಭ್ರಮದಿಂದ ಜಯಂತಿ ಆಚರಣೆ ಮಾಡುವ ಮೂಲಕ ಅವರ ವಿಚಾಧಾರೆಗಳು ಮನೆ ಮನೆಗಳಲ್ಲಿ ಬೆಳಗುವಂತೆ ಪ್ರತಿಯೋಬ್ಬ ನಾಗರೀಕರು ಕೂಡ ಜಯಂತಿ ಆಚರಣೆ ಅವಶ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.