ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಚಿಕ್ಕಮ್ಮನಹಟ್ಟಿ ಬಿ.ದೇವೆಂದ್ರಪ್ಪ ರೋಡ ಶೊ ನಡೆಸಿ ತಾಲ್ಲೂಕು ಕಛೇರಿಯಲ್ಲಿ ಚುನಾವಣೆ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಕೆ . ಶುಕ್ರದೆಸೆ ನ್ಯೂಸ್: ಜಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚಿಕ್ಕಮ್ಮನಹಟ್ಟಿ ಬಿ .ದೇವೆಂದ್ರಪ್ಪರವರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಪಟ್ಟಣದ ಈಶ್ವರ ದೇವಾಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ನಂತರ ಪಟ್ಟಣದ ಮುಖ್ಯಬೀದಿಯಲ್ಲಿ ವಾದ್ಯ ಗೋಷ್ಠಿಗಳೊಂದಿಗೆ ತೆರದ ವಾಹನದಲ್ಲಿ ಮೆರವಣಿಗೆ ಮೂಲಕ ತಾಲ್ಲೂಕು ತಹಶೀಲ್ದಾರ್ ಕಛೇರಿಗೆ ತೆರಳಿ ಚುನಾವಣೆ ಅಧಿಕಾರಿ ಎಸ್ ರವಿ ಅವರಿಗೆ ನಾಮಪತ್ರ ಸಲ್ಲಿಸಿದರು ಪಟ್ಟಣದ ಈಶ್ವರ ದೇಗುಲದಿಂದ ಪ್ರಾರಂಭವಾದ ಮೆರವಣಿಗೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡು ಚುನಾವಣಾ ಕಹಳೆ ಮೊಳಗಿಸಿದರು.
ಮೆರವಣಿಗೆ ತಾಲ್ಲೂಕು ಕಛೇರಿವರೆಗೆ ಸಾಗಿತು.ನಂತರ ಕಾಂಗ್ರೆಸ್ ಅಭ್ಯರ್ಥಿ ನಾಮ ಪತ್ರ ಸಲ್ಲಿಸಲು ತಾಲ್ಲೂಕು ಕಛೇರಿ ಒಳ ಪ್ರವೇಶವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಜೈಘೋಷಣೆ ಕೂಗಿದರು.
ಕಾಂಗ್ರೆಸ್ ಪಕ್ಷದ ರೋಡ್ ಶೋ ಮೆರವಣಿಗೆಯ ಅಂಗವಾಗಿ ಗುರುವಾರ ಬೆಳಿಗ್ಗೆಯಿಂದಲೇ ಕಾಂಗ್ರೇಸ್ ಬಾವುಟಗಳು ಎಲ್ಲೆಡೆ ರಾರಾಜಿಸುತ್ತಿದ್ದವು. ಟೆಂಪೊ, ಟ್ರ್ಯಾಕ್ಟರ್ ಸೇರಿದಂತೆ ವಿವಿಧ ವಾಹನಗಳಲ್ಲಿ ಬಂದ ಕಾಂಗ್ರೆಸ್ ಕಾರ್ಯಕರ್ತರು ರಸ್ತೆಯಲ್ಲಿ ಸಂಚರಿಸುತ್ತಿದ್ದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಕಾರ್ಯಕರ್ತರು ಜೈಕಾರ ಹಾಕಿದರು ವಾದ್ಯ ಗೋಷ್ಠಿಗಳಿಂದ ಕಾರ್ಯಕರ್ತರು ಉತ್ಸಹದಿಂದ ಕುಣಿದು ಕುಪ್ಪಳುಸಿದರು. ಈ ಸಂದರ್ಭದಲ್ಲಿ ಮಾಜಿ ಕಾಂಗೈ ಅಧ್ಯಕ್ಷರಾದ ಪಿ ಎಸ್ ಸುರೇಶ್ ಗೌಡ್ರು .ಕಾಂಗ್ರೆಸ್ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ ಪಿ ಪಾಲಯ್ಯ. ಅರಸಿಕೆರೆ ಬ್ಲಾಕ್ ಅಧ್ಯಕ್ಷರಾದ ಕಂಬತ್ತಹಳ್ಳಿ ಮಂಜಣ್ಣ .ಕಾಂಗ್ರೆಸ್ ಉಸ್ತುವಾರಿ ಕಲ್ಲೇಶ್ ರಾಜ್ ಪಟೇಲ್.ಮಾಜಿ ಕೌಶಲ್ಯ ನಿಗಮ ಮಂಡಳಿ ಅಧ್ಯಕ್ಷೆ ಪುಷ್ಪಾಲಕ್ಷ್ಮಸ್ವಾಮಿ.ಬ್ಲಾಕ್ ಕಾಂಗೈ ಅಧ್ಯಕ್ಷ ಷಂಷೀರ್ ಆಹಮದ್.ಮೆದಗಿಕೆರೆ ಈರಣ್ಣಗೌಡ್ರು.ಸೇರಿದಂತೆ ಮುಂತಾದವರು ಹಾಜರಿದ್ದರು.