2022-23ನೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ, 5,24,209 ಮಂದಿ ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದವರಲ್ಲಿ ಶೇ.74.67 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ರಾಜ್ಯದ 1,109 ಕೇಂದ್ರಗಳಲ್ಲಿ ಮಾರ್ಚ್ 9ರಿಂದ 29ರವರೆಗೆ ಪರೀಕ್ಷೆಗಳು ನಡೆದಿದ್ದವು. 7,27,387ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ವಿಧಾನಸಭಾ ಚುನಾವಣಾ ಪ್ರಕ್ರಿಯೆಗಳ ಮಧ್ಯೆಯೇ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಉಪನ್ಯಾಸಕರನ್ನು ಬಳಸಿಕೊಂಡು ಮೌಲ್ಯಮಾಪನ ಕಾರ್ಯ ಸುಸೂತ್ರವಾಗಿ ಪೂರ್ಣಗೊಂಡಿದೆ.
ಪ್ರತಿ ವರ್ಷದಂತೆ ಈ ಬಾರಿಯೂ ಬಾಲಕಿಯರ ಫಲಿತಾಂಶವೇ ಹೆಚ್ಚಾಗಿದೆ. ದಕ್ಷಿಣ ಕನ್ನಡ ಪ್ರಥಮ ಸ್ಥಾನ ಪಡೆದಿದೆ. ಉಡುಪಿ ಎರಡನೇ ಸ್ಥಾನ, ಕೊಡಗು ಮೂರನೇ ಸ್ಥಾನ. ಉತ್ತರ ಕನ್ನಡ ನಾಲ್ಕನೇ ಸ್ಥಾನ ಪಡೆದಿದೆ. ಯಾದಗಿರಿ ಕೊನೆಯ ಸ್ಥಾನ ಪಡೆದಿದೆ.
5,24,209ಮಂದಿ ಉತ್ತೀರ್ಣರಾಗಿದ್ದಾರೆ. ಅನುತ್ತೀರ್ಣರಾದವರು ಇಂದೇ ಮರು ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು ಎಂದು ಕೆಎಸ್‌ಇಎಬಿ ಅಧ್ಯಕ್ಷರು ಹೇಳಿದ್ದಾರೆ
ಈ ಸುದ್ದಿ ಓದಿದ್ದೀರಾ?: ದ್ವಿತೀಯ ಪಿಯುಸಿ | ಫಲಿತಾಂಶ ಹೇಗೆ ಬರಲಿ ಸ್ವೀಕರಿಸುವ ಮನೋಭಾವವಿರಲಿ