ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ತಾಲ್ಲೂಕು ವೈದ್ಯಾಧಿಕಾರಿಗಳ ಸಂಘದಿಂದ ಕ್ಷೇತ್ರದ ಶಾಸಕರಿಗೆ ಮನವಿ.

ಜಗಳೂರು ಸುದ್ದಿ,
ಜಗಳೂರು,ಮಾ.7:ಪಟ್ಟಣದ ಶಾಸಕರ ನಿವಾಸದ ಬಳಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿಗೆ ಬೆಂಬಲಿಸಿ ತಾಲ್ಲೂಕು ಸರ್ಕಾರಿ ವೈದ್ಯಾಧಿಕಾರಿಗಳ ಸಂಘದಿಂದ ಶಾಸಕ ಬಿ.ದೇವೇಂದ್ರಪ್ಪ ಹಾಗೂ ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ಅವರಿಗೆ ಮನವಿಸಲ್ಲಿಸಲಾಯಿತು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳ,ಹಾಗೂ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ವಿಫಲರಾಗಿದ್ದಾರೆ.ಅನಿವಾರ್ಯವಾಗಿ ಅನಿರ್ದಿಷ್ಟಾವಧಿ ಧರಣಿ ಮುಂದುವರೆಸಲಾಗುವುದು.ಪ್ರಮುಖ ಬೇಡಿಕೆಗಳಾದ ಸರ್ಕಾರಿ ಆಸ್ಪತ್ರೆಗಳಿಗೆ ಸಕಾಲಕ್ಕೆ ಸಮರ್ಪಕವಾಗಿ ಔಷಧಿ ಸರಬರಾಜು ಮಾಡಬೇಕು,ವೃಂದ ನೇಮಕಾತಿ ನಿಯಮಗಳನ್ನು ಪ್ರತಿ ಮೂರುವರ್ಷಕ್ಕೊಮ್ಮೆ ತಿದ್ದುಪಡಿ ಮಾಡಿರುವುದಿಲ್ಲ.ಎಲ್ಲಾ ವೃಂದಗಳ ಜೇಷ್ಠತಾ ಪಟ್ಟಿಯನ್ಜು ಕಾಲಕಾಲಕ್ಕೆ ಪ್ರಕಟಿಸಬೇಕು.ಮುಂಬಡ್ತಿ,ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ,ವೈಜ್ಞಾನಿಕ ರೀತಿಯಲ್ಲಿ ಕೌನ್ಸಲಿಂಗ್,ಆಹಾರ ಸುರಕ್ಷತೆ,ಗುಣಮಟ್ಟ,ಮಹಾನಗರ ಪಾಲಿಕೆ ಮತ್ತು ನಗರಪಾಲಿಕೆಗಳಲ್ಲಿ ಮಂಜೂರಾಗಿರುವ ಆರೋಗ್ಯ ಇಲಾಖೆಯ ಎನ್ ಕೇಡರ್ ಹುದ್ದೆಗಳ ನೇಮಕಾತಿ,ಮುಂಬಡ್ತಿ,ಗೆ ಆರೋಗ್ಯ ಇಲಾಖೆ ಅಧಿಕಾರಿಗಳನ್ನೇ ಮುಂದುವರೆಸಲು,ಖಾಲಿ ಹುದ್ದೆಗಳ ನೇಮಕಾತಿ,ವೇತನ ಹೆಚ್ಚಳ,ಕೇಂದ್ರ ಪುರಸ್ಕೃತ ಯೋಜನೆಯಡಿ ಭತ್ಯೆ ಹೆಚ್ಚಳ,ಸೇರಿದಂತೆ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಶಾಸಕ ಬಿ.ದೇವೇಂದ್ರಪ್ಪ ಮಾತನಾಡಿ,ವೈದ್ಯಾಧಿಕಾರಿಗಳ ಮನವಿಯನ್ನು ಸರ್ಕಾರದ ಗಮನಕ್ಕೆ ತಂದು ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಘವೇಂದ್ರ,ವೈದ್ಯಾಧಿಕಾರಿಗಳಾದ ಡಾ.ಷಣ್ಮುಖಪ್ಪ,ಡಾ.ಬಸವಂತ,ಡಾ.ವಿಶಾಲ್,ಡಾ.ಶದಾಬ್,ಸಿ.ಬಿ.ನಾಗರಾಜ್,ಮೀನಾಕ್ಷಿ,ಲೇಪಾಕ್ಷಿ,ರಮೇಶ್,ಪರುಶರಾಮ್,ಲೋಕೇಶ್ವರಿ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

You missed

error: Content is protected !!