JEE ಅಡ್ವಾನ್ಸ್‌ನಲ್ಲಿ ಸಾಧನೆ|ಗ್ರಾಮೀಣ ಪ್ರತಿಭೆಗಳ ಉನ್ನತ ಸಾಧನೆ ಹೆಮ್ಮೆಯ ಸಂಗತಿ:ಎಂ.ಡಿ.ಕೀರ್ತಿಕುಮಾರ್
Shukradeshe News
jagalure
ಜಗಳೂರು : ಶಿಕ್ಷಣ ಕ್ಷೇತ್ರದಲ್ಲಿ ಗ್ರಾಮೀಣ ಪ್ರತಿಭೆಗಳು ಉನ್ನತ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಕೆಪಿಸಿಸಿ ಎಸ್ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೀರ್ತಿಕುಮಾರ್ ಹೇಳಿದರು.
ಜಗಳೂರು ಪಟ್ಟಣದಲ್ಲಿ ವಾಸವಿರುವ ಐನಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಹನುಮಂತೇಶ್ ಅವರ ಹಿರಿಯ ಪುತ್ರ ಭಾವೇಶ್.ಎಂ.ಹೆಚ್. 2026ನೇ ಸಾಲಿನ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಅಖಿಲ ಭಾರತ ಪರಿಶಿಷ್ಟ ಜಾತಿ (SC) ವಿಭಾಗದ ಕೋಟಾದಲ್ಲಿ 1721ನೇ ರ‍್ಯಾಂಕ್ ಪಡೆದು, ಚೆನ್ನೈನ ಪ್ರತಿಷ್ಠಿತ ಐಐಟಿ ಸಂಸ್ಥೆಯಲ್ಲಿ ಪ್ರವೇಶ ಪಡೆಯಲು ಅರ್ಹತೆ ಗಳಿಸಿದ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಭೇಟಿ ನೀಡಿ ಅಭಿನಂದಿಸಿ ಮಾತನಾಡಿದರು.

ಭಾವೇಶ್ ಅವರು ತಮ್ಮ ಪರಿಶ್ರಮ,ಶಿಸ್ತು ಹಾಗೂ ನಿರಂತರ ಅಧ್ಯಯನದ ಮೂಲಕ ಈ ಮಹತ್ವದ ಸಾಧನೆ ಮಾಡಿದ್ದಾರೆ. ಅವರ ಸಾಧನೆ ಜಗಳೂರು ಕ್ಷೇತ್ರದ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು,ಉನ್ನತ ಶಿಕ್ಷಣದ ಮೂಲಕ ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಭಾವೇಶ್ ಅವರನ್ನು ಸನ್ಮಾನಿಸಿ, ಮುಂದಿನ ವಿದ್ಯಾಭ್ಯಾಸಕ್ಕೆ ಅಗತ್ಯ ಸಹಕಾರ ಹಾಗೂ ನೆರವು ನೀಡುವುದಾಗಿ ಎಂ.ಡಿ. ಕೀರ್ತಿಕುಮಾರ್ ಭರವಸೆ ನೀಡಿದರು.
ಸರ್ಕಾರಿ ಶಾಲಾ ಶಿಕ್ಷಕರ ಕುಟುಂಬದಿಂದ ಬಂದ ವಿದ್ಯಾರ್ಥಿಯೊಬ್ಬರು ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುವುದು ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ಹೊಸ ಆತ್ಮವಿಶ್ವಾಸ ಮೂಡಿಸಿದೆ ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.

: ಜಗಳೂರು ತಾಲೂಕಿನ 61 ಶಾಲೆಗಳಿಗೆ ₹5 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ಸೌಲಭ್ಯ
ಈ ಸಂಧರ್ಭದಲ್ಲಿ ಸರಕಾರಿ ನೌಕರರ ಸಂಘದ ಅಧ್ಯಕ್ಷ .ಎ.ಎಲ್.ತಿಪ್ಪೇಸ್ವಾಮಿ, ಶಿಕ್ಷಕರಾದ ಹನುಮಂತೇಶ್, ವಿರೇಶ್, ಕಲ್ಲಿನಾಥ್ , ಗೊಡೆ ಬಸವರಾಜ್,ಈರಣ್ಣ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಭಾವೇಶ್ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You missed

error: Content is protected !!