ಶುಕ್ರದೆಸೆ ನ್ಯೂಸ್:- ಜಗಳೂರು ತಾಲ್ಲೂಕಿನ ದೊಣ್ಣೆಹಳ್ಳಿ ಉಚ್ಚಂಗಿಪುರ ಜಮಾಪುರ ಮತ್ತು ಮಾದನಹಳ್ಳಿ ಮರಿಕುಂಟೆ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನರೇಗಾ ಕೂಲಿ ಕಾರ್ಮಿಕರು ಕೆಲಸದ ಹತ್ತಿರ ಕಾರ್ಮಿಕರ ಭಾವುಟ ಹಾರಿಸುವ ಮೂಲಕ ಅರ್ಥಪೂರ್ಣ ದಿನಾಚರಣೆಯನ್ನು ಸೋಮವಾರ ಸಂಭ್ರಮದಿಂದ ಆಚರಿಸಲಾಯಿತು .ಈ ವೇಳೆ ಗ್ರಾ ಕೂ ಸ ಸಂಘಟನೆ ಸಂಚಾಲಕಿ ಪಲ್ಲಾಗಟ್ಟೆ ಸುಧಾ ಮಾತನಾಡಿ ವತಿಯಿಂದ ಅಂದಿನ ಕಾಲಘಟದ 1886 ನೇ ವರ್ಷದ ಮೇ 4ರಂದು ಚಿಕಾಗೋದ, ಇಲಿನಾಯ್ಸ್ ಪ್ರದೇಶದ ಹೇ ಮಾರ್ಕೆಟ್ ಎಂಬಲ್ಲಿ ಕಾರ್ಮಿಕರ ಮೇಲೆ ನಡೆದ ದಮನಕಾರಿ ಘಟನೆ ಹಿನ್ನಲೆಯಲ್ಲಿ ಕಾರ್ಮಿಕರ ದಿನವನ್ನಾಗಿ ಆಚರಣೆ ಮಾಡುವ ಮೂಲಕ ಶಕ್ತಿಯುತ ಸಂಘಟನೆಯಾಗಿ ಅಸ್ತಿತ್ವಕ್ಕೆ ಜಾರಿಗೆ ಬಂದಿತು ಎಂದು ಸ್ಮರಿಸಿದರು .ಕಾರ್ಮಿಕರ ಹಕ್ಕು ಬಾಧ್ಯತೆಗಳಿಗಾಗಿ ಹೋರಾಟ ಅನಿವಾರ್ಯ ಎಂದರು .
ಕಾರ್ಮಿಕ ಪ್ರಭುತ್ವದ ಶುಭಯುಗದ ಉದಯದ ಕುರುಹಾಗಿ ಮೇ 1ರಂದು ಉತ್ಸವಾಚರಣೆ ಮಾಡಬೇಕೆಂದು ರಾಬರ್ಟ್ ಓವೆನ್ ಸೂಚಿಸಿದ್ದ. ಆದರೆ ವಾಸ್ತವವಾಗಿ 1889ಕ್ಕಿಂತ ಮುಂಚೆ ಮೇ ದಿನಾಚರಣೆ ಮಾಡಿದ್ದಕ್ಕೆ ಆಧಾರಗಳು ದೊರಕುವುದಿಲ್ಲ. ಆ ವರ್ಷ ಪ್ಯಾರಿಸಿನಲ್ಲಿ ಸಮಾವೇಶ ಗೊಂಡಿದ್ದ ಸಮಾಜವಾದಿ ಅಂತರರಾಷ್ಟ್ರೀಯದ ಪ್ರಥಮ ಅಧಿವೇಶನದಲ್ಲಿ ಮೇ 1ನೆಯ ದಿನಾಂಕವನ್ನು (ಅದು ವಾರದ ಯಾವ ದಿನವೇ ಬರಲಿ) ವಾರ್ಷಿಕ ಅಂತರ ರಾಷ್ಟ್ರೀಯ ಉತ್ಸವದಿನವೆಂದು ಆಚರಿಸಬೇಕೆಂದು ನಿರ್ಧರಿಸಲಾಯಿತು. ಮೇ 1ರಂದು ಸಾರ್ವಜನಿಕ ರಜಾದಿನವೆಂದು ಘೋಷಿಸಬೇಕೆಂದು ಒತ್ತಾಯಪಡಿಸಲು ನೇರ ಕ್ರಮ ಕೈಗೊಳ್ಳಬೇಕೆಂದೂ ನಿರ್ಣಯಿಸಲಾಯಿತ್ತು .ಅಂದಿನಿಂದ ಇಂದಿನ ವರೆಗೆ ಕಾರ್ಮಿಕರ ಹಿತಾಸಕ್ತಿಗೋಸ್ಕರ ಎಲ್ಲ ಕಾರ್ಮಿಕರ ಸಂಘಟನೆ ಮೆ 1 ರಂದು ಕಾರ್ಮಿಕರ ದಿನಾಚಣರೆ ಆಚರಣೆ ಮಾಡಲಾಗುತ್ತಿದೆ ಈ ಸಂದರ್ಭದಲ್ಲಿ