By shukradeshe news
editor m.rajappa vyasgondanahalli
Kannada | online news portal |Kannada news online July 13_7_2026

ಚಿತ್ರದುರ್ಗ ಅಖಿಲ ಭಾರತ ವೀರಶೈವ ಲಿಂಗಾಯತ ಭವನದ ಭೂಮಿ ಪೂಜೆ ಕಾರ್ಯಕ್ರಮ|
ಸಹಬಾಳ್ವೆ ಸಮಾನತೆ ಮತ್ತು ದಯೆಯ ತಳಹದಿಯಲ್ಲಿ ಸಮಾಜ ನಿರ್ಮಾಣ ಆಗಬೇಕು.- ಕೆ ನವೀನ್, ವಿಧಾನ ಪರಿಷತ್ ಸದಸ್ಯ

ಚಿತ್ರದುರ್ಗ: ನಗರದ ತುರುವನೂರು ರಸ್ತೆಯಲ್ಲಿರುವ ಕಮ್ಮರೆಡ್ಡಿ ಕಲ್ಯಾಣ ಮಂಟಪದ ಪಕ್ಕದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ಇತ್ತಿಚೆಗೆ ಖರೀದಿಸಿದ್ದ 60*40 ನಿವೇಶನದಲ್ಲಿ ನೂತನ ವೀರಶೈವ ಲಿಂಗಾಯತ ಭವನ ಕಟ್ಟಡದ ಭೂಮಿ ಪೂಜೆ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿಧಾನ ಪರಿಷತ್ ಸದಸ್ಯ ಕೆ. ನವೀನ್ ಮಾತನಾಡಿ, ಪಟ್ಟಣದ ವೀರಶೈವ ಲಿಂಗಾಯತ ಭವನವು ಕೇವಲ ಒಂದು ಸಿಮೆಂಟ್ ಕಾಂಕ್ರೀಟ್ ಕಟ್ಟಡವಾಗಿರದೇ ಅದು ಇಡೀ ಸಮಾಜದ ಒಗ್ಗಟ್ಟು ಮತ್ತು ಶ್ರಮದ ಸಜೀವ ಪ್ರತೀಕವಾಗಲಿದೆ. ಭವನ ನಿರ್ಮಾಣದಲ್ಲಿ ಸಮಾಜದ ಪ್ರತಿಯೊಬ್ಬರು ತನು ಮನ ಧನಗಳ ಸಹಾಯವನ್ನು ನೀಡುವ ಮೂಲಕ ಅತೀ ಶೀಘ್ರದಲ್ಲಿ ಭವನ ಕಟ್ಟಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕ ಎಸ್ ಕೆ ಬಸವರಾಜನ್ ಮಾತನಾಡಿ,
ವೀರಶೈವ-ಲಿಂಗಾಯತ ಮಠಗಳು ಅನ್ನ, ಅಕ್ಷರ ಮತ್ತು ಆಶ್ರಯದ ತ್ರಿವಿಧ ದಾಸೋಹದ ಮೂಲಕ ಸಮಾಜ ನಿರ್ಮಾಣದಲ್ಲಿ ಅಪಾರ ಕೊಡುಗೆ ನೀಡಿವೆ. ಬಸವಣ್ಣನವರ “ಕಾಯಕವೇ ಕೈಲಾಸ” ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡುವ ಮನೋಭಾವವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದರು.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರೇಣುಕಾ ಪ್ರಸನ್ನ ಮಾತನಾಡಿ, ವೀರಶೈವ ಲಿಂಗಾಯತ ಸಮಾಜವು ಸಮಾಜದ ಸರ್ವತೋಮುಖ ಏಳಿಗೆಗೆ ಮತ್ತು ಸಾಮಾಜಿಕ ಸುಧಾರಣೆಗೆ ನೀಡುತ್ತಿರುವ ಕೊಡುಗೆ ಅಪಾರ. ಈ ನೂತನ ಸಮುದಾಯ ಭವನವು ಜನಸಾಮಾನ್ಯರ ಶುಭ ಕಾರ್ಯಗಳಿಗೆ ಆಸರೆಯಾಗಿ ಹಾಗೂ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರಬಿಂದುವಾಗಿ ಸಮಾಜದ ಏಳಿಗೆಗೆ ಮತ್ತಷ್ಟು ಶಕ್ತಿ ತುಂಬಲಿ ಎಂದು ಆಶಿಸುತ್ತೇನೆ ಎಂದರು.

ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ ಮಾತನಾಡಿ,
ಸಹಬಾಳ್ವೆ, ಸಮಾನತೆ ಮತ್ತು ದಯೆಯ ತಳಹದಿಯಲ್ಲಿ ಸಮಾಜ ನಿರ್ಮಾಣವಾಗಬೇಕು. ಧರ್ಮಾಚರಣೆ ಮೂಲಕ ವಿಶ್ವಕ್ಕೆ ಶಾಂತಿ ಸಿಗುವಂತೆ ನಾವು ನಡೆದುಕೊಳ್ಳುವುದು ಇಂದಿನ ಅಗತ್ಯ ಎಂದರು. ವೀರಶೈವ ಲಿಂಗಾಯತ ಭವನ ನಿರ್ಮಾಣ ಅಗತ್ಯ ಧನ ಸಹಾಯದ ಸಹಕಾರ ನೀಡಬೇಕು ಎಂದು ಸಮುದಾಯದ ಜನತೆಯಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಭವನ ನಿರ್ಮಾಣ ಸಮಿತಿ ಅಧ್ಯಕ್ಷ ರುದ್ರೇಶ್ ಐಗಳ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ ಬಾಬು, ಖಜಾಂಚಿ ಜಾಲಿಕಟ್ಟೆ, ರುದ್ರಪ್ಪ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಮೈಲನಹಳ್ಳಿ ದಿನೇಶ್, ಜಿಲ್ಲಾ ವಾಣಿಜ್ಯ ಘಟಕದ ಅಧ್ಯಕ್ಷ ಆನಂದ್, ಚಿತ್ರದುರ್ಗ ನಗರ ಘಟಕದ ಅಧ್ಯಕ್ಷ ತಿಪ್ಪೇಸ್ವಾಮಿ, ಚಿತ್ರದುರ್ಗ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ದಪ್ಪ , ಚಳ್ಳಕೆರೆ ತಾಲ್ಲೂಕು ಘಟಕದ ಅಧ್ಯಕ್ಷ ಕಿರಣ್ ಶಂಕರ್, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ಪ್ರಭಾಕರ ಮಾಳಿಗೆ, ಮೊಳಕಾಲ್ಮೂರು ತಾಲ್ಲೂಕು ಅಧ್ಯಕ್ಷ ಮಂಜುನಾಥ್, ಹಿರಿಯೂರು ತಾಲ್ಲೂಕು ಅಧ್ಯಕ್ಷ ಉಮೇಶ್, ಹೊಸದುರ್ಗ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ್, ರಾಷ್ಟ್ರೀಯ ಘಟಕದ ಪದಾಧಿಕಾರಿಗಳು, ರಾಷ್ಟ್ರೀಯ ಘಟಕದ ಪದಾಧಿಕಾರಿಗಳು, ವಿವಿಧ ಸಮುದಾಯಗಳ ಮುಖಂಡರು, ಸಮಾಜ ಬಾಂಧವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You missed

error: Content is protected !!