By shukradeshe news
editor m.rajappa vyasgondanahalli
Kannada | online news portal |Kannada news online date 5_10_2026
ಜಗಳೂರು ವಿದಾನಸಭಾ ಕ್ಷೇತ್ರದ
ಶಾಸಕ ಬಿ ದೇವೇಂದ್ರಪ್ಪ ಅವರ ನೇತೃತ್ವದಲ್ಲಿ ಹಲವು ಬಿಜೆಪಿ ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
.ಬಿಜೆಪಿ ಪಕ್ಷದ ಕಾರ್ಯಕರ್ತರನ್ನ ಕ್ಷೇತ್ರದ ಶಾಸಕ ಬಿ.ದೇವೇಂದ್ರಪ್ಪ ಅವರು ಆತ್ಮೀಯವಾಗಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಪಕ್ಷನಿಷ್ಠೆಗೆ ಬದ್ದರಾಗುವಂತೆ ತಿಳಿಸಿದ್ದಾರೆ. . ತಾಲ್ಲೂಕಿನ ತೋರಣಗಟ್ಟೆ ಗ್ರಾಮದ ರಾಮಣ್ಣ, ತಿಪ್ಪೇಸ್ವಾಮಿ, ಕಲ್ಲೇದೇವರಪುರ ಗ್ರಾಮದ ಮಹೇಶಣ್ಣ, ಅಕನೂರು ಗ್ರಾಮದ ಪಾತಲಿಂಗಪ್ಪ, ಹಿರೇಮಲ್ಲನಹೊಳೆ ತಿಪ್ಪಣ್ಣ, ಬಸವಾಪುರ ಗ್ರಾಮದ ಮಾಗಡಪ್ಪ, ಕೆಚ್ಚೇನಹಳ್ಳಿ ಗ್ರಾಮದ ಕೆ. ಸಿ. ಬಸಟೆಪ್ಪ,ಸೇರಿದಂತೆ ವಿವಿಧ ಮುಖಂಡರು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷದ ತತ್ವಸಿದ್ದಾಂತಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷ ತೊರೆದು ಬಂದ ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಶಾಸಕ ಬಿ.ದೇವೇಂದ್ರಪ್ಪ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಆಹಮದ್ ಅವರು ಕಾಂಗ್ರೆಸ್‌ಗೆ ಬರಮಾಡಿಕೊಂಡರು.
ಪಟ್ಟಣದ ಶಾಸಕರ ನಿವಾಸದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರನ್ನು ಶಾಸಕರು ಪಕ್ಷದ ಚಿಹ್ನೆಯ ಶಾಲು ಹಾಕುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಪಕ್ಷದ ಸಿದ್ಧಾಂತ ಹಾಗೂ ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಮೆಚ್ಚಿ ಬಿಜೆಪಿ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಕಡೆ ಒಲವು ತೋರಿ ಸೇರ್ಪಡೆಯಾದ ಹಿನ್ನಲೆಯಲ್ಲಿ ನಮ್ಮ ಪಕ್ಷವನ್ನ ಬಲವರ್ದನೆಗೆ ಸಹಕಾರಿಯಾಗಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಮ್ಮ ಕಾಂಗ್ರೆಸ್ ಪಕ್ಷ 150 ವರ್ಷಗಳ ಇತಿಹಾಸ ಹೊಂದಿರುವ ಏಕೈಕ ಪಕ್ಷವಾಗಿದೆ. ನಾವು ಕ್ಷೇತ್ರದಲ್ಲಿ ಜನರ ಆಶೋತ್ತರಗಳಿಗೆ ಸ್ವಂದಿಸಿ ಕೆಲಸ ಮಾಡುವುದೇ ನನ್ನ ಗುರಿ ಪಕ್ಷದಲ್ಲಿ ಯಾವುದೆ ಜಾತಿ ಮತವಿಲ್ಲದೆ ಸರ್ವರನ್ನು ಸಮಾನವಾಗಿ ಕಾಣುವಂತ ನಿಟ್ಟಿನಲ್ಲಿ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸಲಾಗುವುದು ಎಂದರು .ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಹಿಂದಿನ ಸಿಎಂ ಸಿದ್ದರಾಮಯ್ಯ ಅವರು ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು, ಬಡವ, ದೀನ ದಲಿತರ ಬದುಕಿಗೆ ಬೆಳಕಾಗಿದ್ದಾರೆ. ಈ ಯೋಜನೆಗಳನ್ನು ಸಿಎಂ ಡಿ.ಕೆ.ಶಿವಕುಮಾರ್ ಅವರು ಸಹ ಉತ್ತಮ ಜನಪರ ಆಡಳಿತಕ್ಕೆ ಸಾಕ್ಷಿಯಾಗಿದ್ದಾರೆ’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಲ್ಲೇದೇವರಪುರ ಕೃಷ್ಣಮೂರ್ತಿ .ಕಾಂಗ್ರೆಸ್ ಎಸ್ಸಿ ಘಟಕದ ಅದ್ಯಕ್ಷ ಬಿ.ಮಹೇಶ್. ಮುಖಂಡರಾದ ಕಾಟಪ್ಪ .ಮಹಮದ್ ಗೌಸ್. ಪಲ್ಲಾಗಟ್ಟೆ ಶೇಖರಪ್ಪ ಸೇರಿದಂತೆ ಹಾಜುರಿದ್ದರು.
.
‘
