By shukradeshe news
editor m.rajappa vyasgondanahalli
Kannada | online news portal |Kannada news online date october 6 _11_2026
ಬಾಪೂಜಿ ಬಿ-ಸ್ಕೂಲ್ಸ್ನಲ್ಲಿ ‘ಫಿನ್-ಟಾಕ್’ ಕಾರ್ಯಾಗಾರ: ಬ್ಯಾಂಕಿಂಗ್ ಮತ್ತು ವಿಮಾ ಕ್ಷೇತ್ರದ ಉದ್ಯೋಗಾವಕಾಶಗಳ ಕುರಿತು ಮಾಹಿತಿ
ದಾವಣಗೆರೆ: ಬಾಪೂಜಿ ಎಜುಕೇಷನಲ್ ಅಸೋಸಿಯೇಷನ್ನ (ರಿ.) ಬಾಪೂಜಿ ಬಿ-ಸ್ಕೂಲ್ಸ್ ವತಿಯಿಂದ ಎಂಬಿಎ ವಿದ್ಯಾರ್ಥಿಗಳಿಗಾಗಿ ಬ್ಯಾಂಕಿಂಗ್ ಮತ್ತು ವಿಮಾ ಕ್ಷೇತ್ರದ ಕುರಿತು ‘ಫಿನ್-ಟಾಕ್ (FIN-TALK)’ ಕಾರ್ಯಾಗಾರವನ್ನು ಅಕ್ಟೋಬರ್ 24, 2026 ರಂದು ಕಾಲೇಜಿನ ಮಿನಿ ಆಡಿಟೋರಿಯಂನಲ್ಲಿ ಆಯೋಜಿಸಲಾಗಿತ್ತು,
‘ಬ್ಯಾಂಕಿಂಗ್ ಮತ್ತು ವಿಮಾ ಕ್ಷೇತ್ರದಲ್ಲಿ ಒಳನೋಟಗಳು, ಅವಕಾಶಗಳು ಮತ್ತು ವೃತ್ತಿಜೀವನದ ಮಾರ್ಗಗಳು’ (Insights, Opportunities & Career Paths) ಎಂಬ ವಿಷಯದಡಿ ನಡೆದ ಈ ಕಾರ್ಯಾಗಾರದಲ್ಲಿ ಬ್ಯಾಂಕಿಂಗ್ ಮತ್ತು ವಿಮಾ ಉದ್ಯಮದ ಬೆಳವಣಿಗೆ, ಪ್ರಸ್ತುತ ಉದ್ಯೋಗಾವಕಾಶಗಳು, ವೃತ್ತಿಜೀವನದ ಸಾಧ್ಯತೆಗಳು ಹಾಗೂ ಭವಿಷ್ಯದ ಸವಾಲುಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ HDFC ಬ್ಯಾಂಕ್ನ ಸಹಾಯಕ ಉಪಾಧ್ಯಕ್ಷರಾದ ಶ್ರೀ ನರೇಂದ್ರ ಎಸ್.ಎಲ್.
ICICI ಲೊಂಬಾರ್ಡ್ನ ಯುನಿಟ್ ಸೇಲ್ಸ್ ಮ್ಯಾನೇಜರ್ ಶ್ರೀ ಬಸವರಾಜ್ ಜಿ.ಎಸ್. ಹಾಗೂ ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ನ ಟೆರಿಟರಿ ಸೇಲ್ಸ್ ಹೆಡ್ ಶ್ರೀ ಕರಣಂ ವಿನಾಯಕ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಬಸವರಾಜ್ ಜಿ.ಎಸ್. ಅವರು, ಬ್ಯಾಂಕಿಂಗ್ ಮತ್ತು ವಿಮಾ ಕ್ಷೇತ್ರಗಳು ಇಂದಿನ ಆರ್ಥಿಕ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಬ್ಯಾಂಕಿಂಗ್ ಕ್ಷೇತ್ರವು ಉಳಿತಾಯ, ಸಾಲ ಸೌಲಭ್ಯ ಮತ್ತು ಹಣಕಾಸು ನಿರ್ವಹಣೆಗೆ ಸಹಕಾರಿಯಾಗಿದ್ದರೆ, ವಿಮಾ ಕ್ಷೇತ್ರವು ವ್ಯಕ್ತಿಗಳು ಮತ್ತು ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸುತ್ತದೆ ಎಂದು ವಿವರಿಸಿದರು.
ವಿದ್ಯಾರ್ಥಿಗಳು ಬ್ಯಾಂಕಿಂಗ್ ಮತ್ತು ವಿಮಾ ಕ್ಷೇತ್ರಗಳಲ್ಲಿ ಲಭ್ಯವಿರುವ ವಿವಿಧ ಉದ್ಯೋಗಾವಕಾಶಗಳನ್ನು ಗುರುತಿಸಿಕೊಳ್ಳಬೇಕು. ಗ್ರಾಹಕ ಸಂಬಂಧ ನಿರ್ವಹಣೆ, ಮಾರಾಟ ಮತ್ತು ಮಾರುಕಟ್ಟೆ ನಿರ್ವಹಣೆ, ಹಣಕಾಸು ಯೋಜನೆ, ವಿಮಾ ಅಂಡರ್ರೈಟಿಂಗ್, ಕ್ಲೈಮ್ ನಿರ್ವಹಣೆ ಹಾಗೂ ಡಿಜಿಟಲ್ ಬ್ಯಾಂಕಿಂಗ್ನಂತಹ ವಿಭಾಗಗಳಲ್ಲಿ ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಲು ಅವಕಾಶಗಳಿವೆ ಎಂದು ತಿಳಿಸಿದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಶೈಕ್ಷಣಿಕ ಅರ್ಹತೆ ಮಾತ್ರವಲ್ಲದೆ ಸಂವಹನ ಕೌಶಲ್ಯ, ನಾಯಕತ್ವ ಗುಣ, ತಾಂತ್ರಿಕ ಜ್ಞಾನ, ಗ್ರಾಹಕರನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ನಿರಂತರ ಕಲಿಕೆಯ ಮನೋಭಾವ ಅತ್ಯಗತ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಹಾಗೆಯೇ ಫಿನ್ಟೆಕ್, ಡಿಜಿಟಲ್ ಪಾವತಿಗಳು, ಕೃತಕ ಬುದ್ಧಿಮತ್ತೆ (AI) ಮತ್ತು ಆಧುನಿಕ ತಂತ್ರಜ್ಞಾನಗಳು ಬ್ಯಾಂಕಿಂಗ್ ಹಾಗೂ ವಿಮಾ ಕ್ಷೇತ್ರಗಳಲ್ಲಿ ತರುತ್ತಿರುವ ಬದಲಾವಣೆಗಳ ಬಗ್ಗೆಯೂ ವಿವರಿಸಲಾಯಿತು.
ಕಾರ್ಯಕ್ರಮದ ವಿಶೇಷ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ICICI ಲೊಂಬಾರ್ಡ್ನ ಶ್ರೀ ಬಸವರಾಜ್ ಜಿ.ಎಸ್. ಅವರನ್ನು ಕಾಲೇಜಿನ ನಿರ್ದೇಶಕರಾದ ಶ್ರೀ ಸ್ವಾಮಿ ತ್ರಿಭುವನಾನಂದ ಎಚ್.ವಿ. ಅವರು ಗೌರವಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರಾದ ಡಾ. ಸುಜಿತ್ ಕುಮಾರ್ ಎಸ್.ಎಚ್., ಪ್ರಾಂಶುಪಾಲರಾದ ಡಾ. ಪ್ರಕಾಶ್ ಎಸ್. ಅಲಗೇರಿ, ಪ್ರಾಧ್ಯಾಪಕರಾದ ಶ್ರೀ ರೈಕರ್, ಶ್ರೀ ವಿಜಯ್, ಶ್ರೀಮತಿ ಚೈತ್ರಾ ಕೆ.ಎಸ್., ಶ್ರೀಮತಿ ಶ್ರುತಿ ಹಾಗೂ ಕಾಲೇಜಿನ ಎಲ್ಲಾ ಬೋಧಕ ಸಿಬ್ಬಂದಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.
ಈ ಕಾರ್ಯಾಗಾರವು ಎಂಬಿಎ ವಿದ್ಯಾರ್ಥಿಗಳಿಗೆ ಉದ್ಯಮದ ನೈಜ ಅನುಭವವನ್ನು ತಿಳಿದುಕೊಳ್ಳಲು, ವೃತ್ತಿಜೀವನದ ಗುರಿಗಳನ್ನು ರೂಪಿಸಿಕೊಳ್ಳಲು ಹಾಗೂ ಭವಿಷ್ಯದ ಉದ್ಯೋಗಾವಕಾಶಗಳಿಗೆ ಸಿದ್ಧರಾಗಲು ಉತ್ತಮ ವೇದಿಕೆಯಾಯಿತು.
ಶಿಕ್ಷಣ ಸಂಸ್ಥೆ ಮತ್ತು ಉದ್ಯಮ ಕ್ಷೇತ್ರದ ನಡುವಿನ ಸಂಪರ್ಕವನ್ನು ಬಲಪಡಿಸುವ ನಿಟ್ಟಿನಲ್ಲಿ ಫಿನ್-ಟಾಕ್ ಕಾರ್ಯಾಗಾರವು ವಿದ್ಯಾರ್ಥಿಗಳಿಗೆ ಉಪಯುಕ್ತ ಹಾಗೂ ಜ್ಞಾನವರ್ಧಕ ಕಾರ್ಯಕ್ರಮವಾಗಿ ಮೂಡಿಬಂದಿತು.
